Heavy Rain: ಮುಂಗಾರು ಮಳೆ ಅಬ್ಬರ ಶುರು, ಕರ್ನಾಟಕದಲ್ಲೂ ಭಾರಿ ಮಳೆ ಮುನ್ಸೂಚನೆ!

ಕೇರಳ ರಾಜ್ಯಕ್ಕೆ ಅಧಿಕೃತವಾಗಿ ಮುಂಗಾರು ಮಳೆ ಪ್ರವೇಶ ಮಾಡಿದ್ದು, ಭರ್ಜರಿ ಮಳೆ ಈಗ ಬೀಳುತ್ತಿದೆ. ಅದರಲ್ಲೂ ಕಾವೇರಿಗೆ ಹೆಚ್ಚಿನ ನೀರು ಹರಿಯುವ ಕೇರಳ ರಾಜ್ಯದ ಪ್ರದೇಶಗಳಿಗೆ ಭರ್ಜರಿ ಮಳೆಯ ಸಿಂಚನ ಆಗುತ್ತಿದೆ. ನಿನ್ನೆಯಿಂದಲೇ ಮುಂಗಾರು ಮಾರುತಗಳು ಅಬ್ಬರದ ಪ್ರದರ್ಶನ ತೋರುತ್ತಿದ್ದು, ಕರ್ನಾಟಕದಲ್ಲೂ ಮಳೆಯ ಎಚ್ಚರಿಕೆ ನೀಡಲಾಗಿದೆ.

ಅಂತರ್ಜಲ ಕುಸಿತ ದೊಡ್ಡ ಸಮಸ್ಯೆ ತಂದೊಡ್ಡಿದೆ, ಕರ್ನಾಟಕದ ಬಹುತೇಕ ಬೋರ್‌ಗಳಲ್ಲಿ ನೀರು ಖಾಲಿ ಆಗಿದೆ. ಅಂತರ್ಜಲ ಕುಸಿಯುತ್ತಿರುವ ಕಾರಣಕ್ಕೆ ಜನರೀಗ ಕುಡಿಯುವ ನೀರಿಗೂ ಪರದಾಡುತ್ತಿದ್ದಾರೆ. ಆದರೆ ಕಳೆದ ಒಂದು ತಿಂಗಳಿಂದ ಮಳೆ ಬರುತ್ತಿದ್ದು ಕೆರೆ ಮತ್ತು ತೊರೆಗಳು ನಿಧಾನವಾಗಿ ತುಂಬುತ್ತಿವೆ. ಈ ನೀರಿಂದ ಇನ್ನೂ ಒಂದು ಇಲ್ಲ 2 ತಿಂಗಳು ದಿನದೂಡಬಹುದು. ಆದರೆ ಜೂನ್ & ಜುಲೈಗೆ ಒಳ್ಳೆಯ ಮಳೆಯು ಬೀಳುವ ನಿರೀಕ್ಷೆ ಇರುವುದು ಖುಷಿ ಕೊಡುತ್ತಿದೆ. ಈ ನಿರೀಕ್ಷೆಗೆ ಪೂರಕವಾಗಿ ನಿನ್ನೆ ಅಧಿಕೃತವಾಗಿ ಮುಂಗಾರು ಮಳೆ ಮೋಡಗಳು ಕೇರಳ ರಾಜ್ಯಕ್ಕೆ ಎಂಟ್ರಿಯನ್ನ ಕೊಟ್ಟಿವೆ.

Monsoon Rain Entered Kerala amp amp There Is High Chance In Karnataka For Heavy Rain From May 31 Of 2024

ಮಳೆ.. ಮಳೆ.. ಮಳೆ..

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈಗಾಗಲೇ ಉತ್ತರ ಕರ್ನಾಟಕವು ಸೇರಿ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಭಾರಿ ಮಳೆ ಬಿದ್ದಿದೆ. ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಅಂದ್ರೆ ದಕ್ಷಿಣ ಕನ್ನಡ, ಉಡುಪಿ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ. ಇದರ ಜೊತೆ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗೆ ರೈತರು ಉತ್ತಮವಾಗಿ ಮುಂಗಾರು ಮಳೆ ಬರಲಿದೆ ಅಂತಾ ಕಾಯುತ್ತಿದ್ದಾರೆ ಕನ್ನಡಿಗರು. ಈಗಾಗಲೇ ಕೇರಳ ರಾಜ್ಯಕ್ಕೆ ಮುಂಗಾರು ಮಾರುತ ಎಂಟ್ರಿ ಕೊಟ್ಟಿದ್ದು. ಇನ್ನೇನು ಕರ್ನಾಟಕದಲ್ಲಿ ಕೂಡ, ಮುಂಗಾರು ಮಳೆ ಅಬ್ಬರಿಸಲಿದೆ.

ಡ್ಯಾಂಗಳಿಗೆ ಕೂಡ ಭರ್ಜರಿ ನೀರು!

ಒಟ್ನಲ್ಲಿ ಭರ್ಜರಿ ಮಳೆ ಬರುತ್ತಿರುವುದು ಕನ್ನಡಿಗರಿಗೆ ಈಗ ಒಂದು ಸಿಹಿಸುದ್ದಿ ನೀಡುತ್ತಿದೆ. ಮಳೆ ಇಲ್ಲದೆ ಸೊರಗಿದ್ದ ಕರ್ನಾಟಕದ ಜನರಿಗೆ ಮಳೆರಾಯ ಕಳೆದ ಒಂದು ತಿಂಗಳಿಂದ ಭಾರಿ ದೊಡ್ಡ ಕೊಡುಗೆ ನೀಡಿದ್ದಾನೆ. ಅದರಲ್ಲೂ ಭರ್ಜರಿ ಮಳೆಗೆ, ಕರ್ನಾಟಕದ ಪ್ರತಿಯೊಂದು ಜಿಲ್ಲೆ ಕೂಡ ತಂಪಾಗಿದೆ. ಹೀಗಿದ್ದಾಗಲೇ ಮುಂಗಾರು ಮಳೆಯ ಮೋಡಗಳು ಕರ್ನಾಟಕದ ಕಡೆಗೆ ಓಡೋಡಿ ಬರುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಕರ್ನಾಟಕ ಪ್ರವೇಶಿಸಲಿವೆ. ಈ ಸಮಯದಲ್ಲೇ ಕರ್ನಾಟಕದ ಜಲಾಶಯಗಳು ನಿಧಾನವಾಗಿ ತುಂಬುತ್ತಿವೆ. ಅದರಲ್ಲೂ ಈಗ ಕಾವೇರಿ ಕೊಳ್ಳದಲ್ಲಿ ಭರ್ಜರಿ ನೀರು ಹರಿದು ಬರ್ತಿದೆ.

ಉತ್ತರ ಕರ್ನಾಟಕದಲ್ಲೂ ಮಳೆ

ಜೂನ್ 3 ರಂದು ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ರಾಯಚೂರು ಸೇರಿದಂತೆ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಈ ಮೂಲಕ ಭಾರಿ, ಭರ್ಜರಿ ಮಳೆ ಆಗಮನಕ್ಕೆ ಇದೀಗ ಮುಹೂರ್ತ ಫಿಕ್ಸ್ ಆಗಿದೆ. ರೈತರು ಕೂಡ ಈ ಸುದ್ದಿಯ ಕೇಳಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ವಾತಾವರಣದಲ್ಲಿ ಯಾವುದೇ ಏರುಪೇರು ಆಗದೇ ಇದ್ದರೆ ಈ ಮುನ್ಸೂಚನೆ ನಿಜವಾಗಲಿದೆ. ಹಾಗೇ ಅಷ್ಟರಲ್ಲಿ ಮುಂಗಾರು ಮಾರುತಗಳ ಎಂಟ್ರಿ ಕೂಡ ಆಗಲಿದೆ.

ಕರ್ನಾಟಕದಲ್ಲಿ ಬಹುಬೇಗ ಮುಂಗಾರು ಮಳೆಯ ಅಬ್ಬರ ಶುರುವಾಗಿದೆ. ಈ ಮೂಲಕವಾಗಿ ಕನ್ನಡಿಗರಿಗೆ ವರುಣ ದೇವ ಸಿಹಿಸುದ್ದಿ ನೀಡಿದ್ದಾನೆ. ಯಾಕಂದ್ರೆ ಮಳೆ ಇಲ್ಲದೆ ಬೆಳೆ ಒಣಗಿ, ಪರದಾಡುತ್ತಿದ್ದ ಸಮಯಕ್ಕೆ ಪೂರ್ವ ಮುಂಗಾರು ಮಳೆ ಕೈಹಿಡಿದು ನಿಲ್ಲಿಸಿತ್ತು. ಈಗ ಮತ್ತೆ ಮುಂಗಾರು ಮಳೆ ಕೂಡ ಕನ್ನಡಿಗರ ಬೆನ್ನಿಗೆ ನಿಂತಿದೆ. ಈ ಮೂಲಕ ಭರ್ಜರಿ ಮಳೆಯಲ್ಲಿ ಕನ್ನಡಿಗರು ಫುಲ್ ಖುಷ್ ಆಗಿದ್ದಾರೆ. ಅಲ್ಲದೆ ಮುಂದಿನ 10 ದಿನಗಳ ಕಾಲ ಭರ್ಜರಿ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಮಳೆ ಬೀಳುವುದು ಯಾವ ಯಾವ ಜಿಲ್ಲೆಗಳಲ್ಲಿ ಗೊತ್ತಾ?

ತುಂಬುತ್ತಿವೆ ಕರ್ನಾಟಕದ ಡ್ಯಾಂಗಳು

ಮಳೆ ಇಲ್ಲದೆ ಬೆಳೆ ಕಳೆದುಕೊಳ್ಳುವ ಹಂತಕ್ಕೆ ಬಂದು ಚಿಂತೆಯಲ್ಲಿ ಮುಳುಗಿದ್ದ, ಕನ್ನಡ ನಾಡಿನ ರೈತರಿಗೆ ಭಾರಿ ಸುದ್ದಿ ಸಿಕ್ಕಿದೆ. ಏನಂದರೆ ಕರ್ನಾಟಕದಲ್ಲಿ ಮಳೆ ಭಾರಿ ಆರ್ಭಟ ತೋರಿಸುತ್ತಿದ್ದು ಇದರ ಜೊತೆಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಮುಂಗಾರು ಮಳೆಯ ಆಗಮನಕ್ಕೆ ಮೊದಲೇ ಕರ್ನಾಟಕದಲ್ಲಿ ಭರ್ಜರಿ ಮಳೆಯಾಗುತ್ತೆ ಅಂತ, ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಮಳೆ ಅಬ್ಬರದ ಪರಿಣಾಮ, ಈಗಾಗಲೇ ಕರ್ನಾಟಕದ ಡ್ಯಾಂಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಕೂಡ ಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+