ಮುಂದಿನ 48 ಗಂಟೆ ಭರ್ಜರಿ ಮಳೆ: ಮುಂಗಾರು ಮಳೆ ಅಬ್ಬರಕ್ಕೆ ನಲುಗಿ ಹೋದ ಕನ್ನಡ ನಾಡು!

ಮುಂಗಾರು ಮಳೆ ಮೋಡಗಳು ಭರ್ಜರಿಯಾಗಿ ಮಳೆ ಸುರಿಸುತ್ತಿವೆ, ಅದರಲ್ಲೂ ಮಳೆ ಹೀಗೆ ಆರ್ಭಟ ತೋರುತ್ತಿರುವ ಪರಿಣಾಮ ಡ್ಯಾಂಗಳು ತುಂಬುತ್ತಿವೆ. ಮತ್ತೊಂದು ಕಡೆ ಇದೇ ರೀತಿ ಮುಂದಿನ ಹಲವು ದಿನಗಳ ಕಾಲ ಮುಂಗಾರು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ. ಅದರಲ್ಲೂ ಮುಂದಿನ 48 ಗಂಟೆ ಕಾಲ ಮಳೆಯ ಆರ್ಭಟ ಭರ್ಜರಿ ಆಗಿರಲಿದೆ ಎಂದು ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಸುರಿಯುವ ಜಿಲ್ಲೆಗಳ ಪಟ್ಟಿ ಇಲ್ಲಿದೆ ಮುಂದೆ ಓದಿ.

ಮಳೆ ಬರದೇ ಬದುಕು ಸಾಗುವುದಿಲ್ಲ, ಹಾಗೇ ಮಳೆ ಇಲ್ಲದೆ ಮನುಷ್ಯನ ಜೀವನವೇ ನಶ್ವರ ಎನ್ನಬಹುದು. ಯಾಕಂದ್ರೆ ಮನುಷ್ಯನ ಬದುಕಿಗೆ ಅತ್ಯಗತ್ಯ ಎನಿಸಿಕೊಂಡ ನೀರು ಸಿಗುವುದು ಇದೇ ಮಳೆಯಿಂದ. ಅಕಸ್ಮಾತ್ ಮಳೆ ಬರದೇ ಇದ್ದರೆ ಪರಿಸ್ಥಿತಿ ಹೇಗೆ ಇರಲಿದೆ ಅನ್ನೋದನ್ನ 4-5 ತಿಂಗಳ ಹಿಂದೆ ಇಡೀ ಕರ್ನಾಟಕ ನೋಡಿದೆ. ಹೀಗಿದ್ದಾಗ ಮನುಷ್ಯ ಪ್ರಕೃತಿ ಮೇಲೆ ಈ ರೀತಿ ದೌರ್ಜನ್ಯ ನಡೆಸುತ್ತಿರುವುದು ಕೂಡ ಪರಿಸರ ಹಾಳಾಗಿ ಹೋಗಲು ಕಾರಣವಾಗುತ್ತಿದೆ. ಇಷ್ಟೆಲ್ಲಾ ತಿಕ್ಕಾಟದ ನಡುವೆ ಕೂಡ ಮಳೆರಾಯ ಅಬ್ಬರಿಸಲು ಶುರು ಮಾಡಿದ್ದಾನೆ. ಹಾಗೇ ಮುಂದಿನ 48 ಗಂಟೆ ಕಾಲ ಭರ್ಜರಿ ಮಳೆ ಸುರಿಯುವ ಜಿಲ್ಲೆಗಳ ಪಟ್ಟಿ ಮುಂದೆ ಇದೆ ಓದಿ.

Monsoon Rain Is Created The Storm In Karnataka State

ಮುಂಗಾರು ಮಳೆ ಕರ್ನಾಟಕದ ಮೂಲೆ ಮೂಲೆಯಲ್ಲೂ ಅಬ್ಬರಿಸುತ್ತಿದ್ದು, ಕನ್ನಡ ನಾಡು ಈಗ ಸಂಪೂರ್ಣ ಹಸಿರು ಹಸಿರಾಗಿ ಕಂಗೊಳಿಸುತ್ತಿದೆ. ಅದರಲ್ಲೂ ಬೆಟ್ಟ, ಪರ್ವತಗಳ ನಾಡು ಎಂದು ಗುರುತಿಸಿಕೊಂಡ ಕನ್ನಡ ನಾಡಿನ ಮಲೆನಾಡು ಭಾಗ ಪಶ್ಚಿಮ ಘಟ್ಟದಲ್ಲಿ ಸ್ವರ್ಗವೇ ಈಗ ನಿರ್ಮಾಣ ಆಗಿದೆ. ಕರಾವಳಿ ಕರ್ನಾಟಕ ಸೇರಿದಂತೆ ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ.

ಹೀಗಿದ್ದಾಗಲೇ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 48 ಗಂಟೆ ಭರ್ಜರಿ ಮಳೆಯಾಗುವ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿಯ ಭಾಗದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಕಳೆದ ಹಲವು ದಿನಗಳಿಂದಲೂ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ, ಹೀಗಿದ್ದಾಗ ಮತ್ತೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಹಾಗೇ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಆರ್ಭಟಿಸುವ ಮುನ್ಸೂಚನೆಯು ಸಿಗುತ್ತಿದೆ.

ಕೃಷ್ಣಾ & ಭೀಮಾ ನದಿಗಳ ಆರ್ಭಟ!

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು & ಶಿವಮೊಗ್ಗ ಜಿಲ್ಲೆಗಳು ಹೊರತುಪಡಿಸಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿ ರಾಮನಗರ ಹಾಗೂ ಚಾಮರಾಜನಗರ, ತುಮಕೂರು, ದಾವಣಗೆರೆ ಜಿಲ್ಲೆ, ಹಾಸನ, ಚಿಕ್ಕಮಗಳೂರಿನಲ್ಲಿ ಹಗುರ ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಹಾಗೇ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ಮಳೆರಾಯ ಅಬ್ಬರಿಸುವುದು ಗ್ಯಾರಂಟಿ. ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶ, ಭೀಮಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಮುಳುಗಿ ಹೋಗುತ್ತಿವೆ ಸೇತುವೆಗಳು!

ಅಷ್ಟಕ್ಕೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಮತ್ತು ಮಹಾರಾಷ್ಟ್ರ ಜಲಾಶಯಗಳಿಂದ ಭಾರಿ ಪ್ರಮಾಣದ ನೀರನ್ನ ಹೊರಗೆ ಬಿಡುತ್ತಿರುವ ಕಾರಣ ಇದೀಗ ಕೃಷ್ಣ ನದಿ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದ್ದು ಕರ್ನಾಟಕದ ಎರಡು ಸೇತುವೆ ಮುಳುಗಡೆ ಆಗಿವೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ & ಬಾವನ ಸೌದತ್ತಿಯಲ್ಲಿ ಎರಡು ಹಳೆಯ ಸೇತುವೆ ಮುಳುಗಡೆ ಆಗಿವೆ. ಈಗಾಗಲೇ ಕೃಷ್ಣ ನದಿ ನೀರಿನ ಒಳ ಹರಿವಿನಲ್ಲಿ ಭಾರಿ ಪ್ರಮಾಣದ ಹೆಚ್ಚಳವಾಗಿದ್ದು, ಬರದ ಬವಣೆಗೆ ಬೇಸತ್ತ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಮಹಾರಾಷ್ಟ್ರದ ಎಡವಟ್ಟು ಈಗ ಪ್ರವಾಹ ಸೃಷ್ಟಿಸುವ ಭಯವೂ ಕಾಡ್ತಾ ಇದೆ.

ಮಳೆ.. ಮಳೆ.. ಭರ್ಜರಿ ಮಳೆ!

ಹವಾಮಾನ ಇಲಾಖೆ ಈಗ ಕರಾವಳಿ ಕರ್ನಾಟಕ ಸೇರಿದಂತೆ ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಿದೆ. ಒಂದಲ್ಲ.. ಎರಡಲ್ಲ ಬರೋಬ್ಬರಿ 7 ದಿನ ನಿರಂತರವಾಗಿ ಕರಾವಳಿ & ಮಲೆನಾಡು ಭಾಗದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಸಮಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 1 ವಾರ ಇಲ್ಲೆಲ್ಲಾ ಭಾರಿ ಮಳೆ ಬೀಳುವ ಎಚ್ಚರಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+