Monsoon Rain: ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಯಾವಾಗ? ಅಧಿಕಾರಿಗಳು ಕೊಟ್ರು ಅಪ್ಡೇಟ್‌ ಮಾಹಿತಿ

Monsoon Rain: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಮಳೆ ಯಾವಾಗ ಎಂಟ್ರಿ ಕೊಡಲಿದೆಯೋ ಎಂಬ ಪ್ರಶ್ನೆ ಜನರಲ್ಲಿ ಕಾಡತೊಡಗಿದೆ. ಇದೆಲ್ಲದಕ್ಕೂ ಉತ್ತರವನ್ನು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಅಧಿಕಾರಿಗಳು ಕೊಟ್ಟಿದ್ದಾರೆ. ಹಾಗಾದ್ರೆ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಪ್ರಸ್ತುತ ವರ್ಷದ ಮುಂಗಾರು ವೇಳೆ ಮಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಜೂನ್- ಸೆಪ್ಟೆಂಬರ್ ಅವಧಿಯಲ್ಲಿ ಮಾನ್ಸೂನ್ ಚುರುಕು ಪಡೆಯಲಿದೆ. ಏಪ್ರಿಲ್-ಮೇ ತಿಂಗಳುನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

Monsoon Rain Officials Forecast on Monsoon Arrival in State

ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಬೈರೇಗೌಡ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಕಳೆ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ ಹೇಳಿದರು.

ಇನ್ನೂ ಈ ಬಾರಿ ಏಪ್ರಿಲ್-ಮೇ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಅಧಿಕ ಮಳೆ ಆಗಲಿದ್ದು, ಕೃಷಿ ಚಟುವಟಿಕೆಗಳೂ ಚುರುಕುಗೊಳ್ಳಲಿವೆ ಎಂದು ಮಾಹಿತಿ ನೀಡಿದರು.

ಮುಂದುವರೆದು ಸೆಪ್ಟೆಂಬರ್ ನಂತರದ ಹಿಂಗಾರಿನಲ್ಲೂ ಈ ವರ್ಷ ವಾಡಿಕೆಯ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಭಾರತೀಯ ಹವಮಾನ ಇಲಾಖೆಯ ತಾಪಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಉತ್ತರ ಒಳನಾಡು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಟ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ತಾಪಮಾನ ಹೆಚ್ಚಾಗಲಿದೆ. ಉಳಿದ ಇತರ ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನ ಇರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದರು.

ಜಲಾಶಯಗಳ ನೀರಿನ ಮಟ್ಟ: ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 422.11 ಟಿ.ಎಂ.ಸಿ ನೀರಿನ ಸಂಗ್ರಹಣೆ ಇದ್ದು, ಕಳೆದ ಸಾಲಿನ ಇದೇ ಸಮಯದಲ್ಲಿ 280.02 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು. ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದುರು.

ಮುಂದಿನ ದಿನಗಳಲ್ಲಿ ನೀರಿನ ಬಿಡುಗಡೆಗಳು ಹೆಚ್ಚಿನ ತಾಪಮಾನವು ನೀರಿನ ನಷ್ಟಕ್ಕೆ ಕಾರಣವಾಗುತ್ತದೆ ಎಂಬ ಅಂಶವನ್ನು ಗಮನದಲ್ಲಿ ಇಟ್ಟುಕೊಂಡು ನೀರಿನ ಬಿಡುಗಡೆಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೆ, ಮುಂಬರುವ ತಿಂಗಳುಗಳಲ್ಲಿ ಕುಡಿಯುವ ನೀರಿಗಾಗಿ ಲಭ್ಯ ಆಗಲಿರುವ ನೀರಿನ ಪ್ರಮಾಣವೆಷ್ಟು? ಎಂಬ ಕುರಿತು ಮುಂದಿನ ಸಭೆಯಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದರು. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ?: ಪ್ರಸ್ತುತ ರಾಜ್ಯದ 12 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕಲಬುರಗಿ, ಚಾಮರಾಜನಗರ, ಯಾದಗಿರಿ, ಉತ್ತರಕನ್ನಡ ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ 30 ತಾಲ್ಲೂಕುಗಳ ವ್ಯಾಪ್ತಿಯ 115 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಬಾಡಿಗೆ ಟ್ಯಾಂಕರ್ ಮತ್ತು ಬೋರ್‌ವೆಲ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ, ದಕ್ಷಿಣ ಕನ್ನಡ ಮತ್ತು ಕೋಲಾರ ಜಿಲ್ಲೆಗಳ 8 ನಗರ ಸ್ಥಳೀಯ ಸಂಸ್ಥೆಗಳ 72 ವಾರ್ಡ್‌ಗಳಲ್ಲಿ ಟ್ಯಾಂಕರ್ ಮತ್ತು ಬೋರ್‌ವೆಲ್‌ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+