ನೈಋತ್ಯ ಮುಂಗಾರು ಮಳೆ ಆರಂಭಕ್ಕೆ ಕೆಲ ದಿನ ಬಾಕಿ; ಪೂರ್ವ ತಯಾರಿ ಸಲಹೆ

ಬೆಂಗಳೂರು, ಮೇ 05: ಕರ್ನಾಟಕದಲ್ಲಿ 2023ರಲ್ಲಿ ನೈಋತ್ಯ ಮುಂಗಾರು ಕೈ ಕೊಟ್ಟು ಈಗ ರಾಜ್ಯ ಬರಗಾಲದಿಂದ ಕಂಗೆಟ್ಟಿದೆ. ಕುಡಿಯುವ ನೀರಿನ ಕೊರತೆ, ಬಿಸಿಗಾಳಿ, ಬಿಸಿಲಿನ ಝಳಕ್ಕೆ ಜನರು ಕಂಗಾಲಾಗಿ ಹೋಗಿದ್ದಾರೆ. ಈ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿಯಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಭಾರತೀಯ ಹವಾಮಾನ ಇಲಾಖೆ 2024ರ ಮುಂಗಾರು ಅವಧಿ (ಜೂನ್‌-ಸೆಪ್ಟೆಂಬರ್‌) ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಿದೆ. ಅಲ್ಲದೇ ಹಿಂಗಾರು ಮಳೆಯೂ ಕೆಲವು ಜಿಲ್ಲೆಗಳಲ್ಲಿ ಸುರಿಯುತ್ತಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಸಂತಸ ತಂದಿದೆ.

Monsoon Season 2024 Karnataka Revenue Dept Circular

ಜೂನ್‌ 10ರೊಳಗೆ ನೈಋತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿಸುವ ನಿರೀಕ್ಷೆ ಇದೆ. ಮುಂಗಾರು ಆರಂಭಕ್ಕೂ ಮುನ್ನವೇ ಕರ್ನಾಟಕ ಸರ್ಕಾರ ಪೂರ್ವ ತಯಾರಿಗಳ ಕುರಿತು ವಿವಿಧ ಇಲಾಖೆಗಳಿಗೆ ಸುತ್ತೋಲೆಯ ಮೂಲಕ ಮಾಹಿತಿ ನೀಡಿದೆ.

ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ ಮತ್ತು ನೋಂ & ಮು) ಸರ್ಕಾರದ ಉಪ ಕಾರ್ಯದರ್ಶಿ ಎಸ್. ಆರ್. ಶಿವಶಂಕರ್‌ ಈ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆ 2024ನೇ ಸಾಲಿನ ಮುಂಗಾರು/ ಪೂರ್ವ ಮುಂಗಾರು ಮಳೆ ಅವಧಿಯ ಪೂರ್ವ ಸಿದ್ಧತೆ ಕುರಿತು ಸಲಹೆ ಸೂಚನೆಗಳು ಎಂಬ ವಿಷಯವನ್ನು ಒಳಗೊಂಡಿದೆ.

ಸುತ್ತೋಲೆಯ ವಿವರಗಳು: 2024ರ ಏಪ್ರಿಲ್ 15ರಂದು ಭಾರತೀಯ ಹವಾಮಾನ ಇಲಾಖೆ ಹೊರಡಿಸಿದ ನೈಋತ್ಯ ಮಾನ್ಸೂನ್-2024ರ ಮೊದಲ ಹಂತದ ಕಾರ್ಯಾಚರಣೆಯ ದೀರ್ಘ ವ್ಯಾಪ್ತಿಯ ಮುನ್ಸೂಚನೆಯ ಪ್ರಕಾರ ಒಟ್ಟಾರೆಯಾಗಿ ದೇಶದಾದ್ಯಂತ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುತ್ತದೆ. ಅಂದರೆ ದೀರ್ಘಾವಧಿ ಸರಾಸರಿಯು ಶೇ.104ಕ್ಕಿಂತ ಹೆಚ್ಚು ಇದೆ.

ಪ್ರಾದೇಶಿಕ ವಿತರಣೆಯು ಕರ್ನಾಟಕ ಸೇರಿದಂತೆ ಭಾರತದ ಪರ್ಯಾಯ ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಸಾಧ್ಯತೆಯನ್ನು ಸೂಚಿಸುತ್ತದೆ. ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಉಂಟಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ಮುಂಗಾರು ಪೂರ್ವದಲ್ಲಿ ಪೂರ್ವ ಸಿದ್ಧತೆ/ ಸನ್ನದ್ಧತೆ ಕ್ರಮಗಳನ್ನು ಕೈಗೊಳ್ಳಬೇಕಾಗಿರುತ್ತದೆ ಎಂದು ಸುತ್ತೋಲೆ ಹೇಳಿದೆ.

ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಹಂತದ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತೆ ಸಭೆಗಳನ್ನು ಏರ್ಪಡಿಸಿ ಈ ಕೆಳಕಂಡ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಿ ಹಾಗೂ ಸಿದ್ಧತೆಗಳ ಬಗ್ಗೆ ಸೂಚನೆಗಳನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಯಾವುದೇ ಜಿಲ್ಲೆಯಲ್ಲಿ ವಿಪತ್ತುಗಳಿಗೆ ತುತ್ತಾಗುವಂತಹ ಪ್ರದೇಶಗಳನ್ನು ಗುರುತಿಸಿ ಸ್ಥಳೀಯ ಸಮುದಾಯಕ್ಕೆ ಅರಿವು ಮೂಡಿಸುವ ಕರ್ತವ್ಯ/ ಜವಾಬ್ದಾರಿ ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ, ಗಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಜಿಲ್ಲಾಧಿಕಾರಿ ಮತ್ತು ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೌಲ್ಯ ಮಾಪನದ ಮೇಲ್ವಿಚಾರಣೆ ಮತ್ತು ಪರಾಮರ್ಶೆ ನಡೆಸಬೇಕು ಎಂದು ತಿಳಿಸಲಾಗಿದೆ.

ಜಿಲ್ಲಾಧಿಕಾರಿ ಮತ್ತು ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಇಲಾಖೆಗಳು ಜಿಲ್ಲಾ ತುರ್ತು ನಿರ್ವಹಣಾ ಕೇಂದ್ರಗಳನ್ನು ಸುಸಜ್ಜಿತವಾಗಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳುವುದು. ಮುಂಗಾರಿನಲ್ಲಿ ಆಗಾಗ್ಗೆ ವಿಪತ್ತುಗಳಿಗೆ (ಪ್ರವಾಹ/ ಭೂಕುಸಿತ) ತುತ್ತಾಗುವಂತಹ ತಾಲ್ಲೂಕು ಕೇಂದ್ರಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯುವುದು, ಅವಶ್ಯವೆನಿಸಿದ್ದಲ್ಲಿ 24/7 ಸಕ್ರಿಯಗೊಳಿಸುವುದು.

ವಿವಿಧ ಹಂತಗಳಲ್ಲಿ ವಿಪತ್ತು ನಿರ್ವಹಣೆಯಲ್ಲಿ ತೊಡಗಿರುವ ಅಧಿಕಾರಿಗಳ ಹೆಸರು, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆಗಳನ್ನೊಳಗೊಂಡ ಮಾಹಿತಿ ಸಿದ್ಧಪಡಿಸಿ, ಎಲ್ಲರನ್ನೂ ಒಳಗೊಂಡ ವಾಟ್ಸ್ ಆಪ್ ಗ್ರೂಪ್ ಮಾಡುವುದು. ಮುಂಗಾರು ಮಳೆ ಅವಧಿಯ ಮುಂಚಿತವಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರವರ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಮನದಟ್ಟು ಮಾಡುವುದು ಎಂದು ಸುತ್ತೋಲೆ ಹೇಳಿದೆ.

ಜಿಲ್ಲೆಯ ಎಲ್ಲಾ ಮೊಬೈಲ್/ ಟೆಲಿಕಾಂ ಸೇವಾ ಪೂರೈಕೆದಾರರೊಂದಿಗೆ ಸಭೆಗಳನ್ನು ನಡೆಸುವುದು. ತುರ್ತು ಪರಿಸ್ಥಿತಿಯಲ್ಲಿ ಸಾಧ್ಯವಾದಷ್ಟು ತಕ್ಷಣವೇ ದೂರವಾಣಿ ಸಂಪರ್ಕವನ್ನು ಪುನಃ ಸ್ಥಾಪಿಸಲು ಪೂರೈಕೆದಾರರಿಗೆ ನಿರ್ದೇಶಿಸುವುದು ಎಂದು ಸುತ್ತೋಲೆಯಲ್ಲಿ ವಿವರಣೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+