ರಾಜ್ಯದಲ್ಲಿ ಶುಕ್ರವಾರವೂ ಮುಂದುವರಿಯಲಿದೆ ಮಳೆಯ ರೌದ್ರಾವತಾರ
ಬೆಂಗಳೂರು, ಜೂನ್ 14: ರಾಜ್ಯದ ಕರಾವಳಿಯ ಎಲ್ಲ ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುರುವಾರ ಮತ್ತು ಶುಕ್ರವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ, ಕೇರಳ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕರಾವಳಿಗಳಲ್ಲಿ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.
ಈ ಪ್ರದೇಶಗಳಲ್ಲಿ ಸಮುದ್ರದ ಪರಿಸ್ಥಿತಿ ಅಪಾಯಕಾರಿಯಾಗಿರಲಿದ್ದು, ಮೀನುಗಾರರು ನೀರಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಶಾನ್ಯ ಭಾಗದ ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ತ್ರಿಪುರ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಕೇರಳಗಳಲ್ಲಿ ಮಳೆ ಅಬ್ಬರಿಸಲಿದೆ.
14 June:Heavy to very heavy rain in Coastal & South Interior #Karnataka, #Assam ,#Meghalaya,#Kerala, SubHimalayan #WestBengal,#Sikkim, #Arunachal Pradesh,#Nagaland, #Manipur, #Mizoram ,#Tripura.
— NDMA India (@ndmaindia) 14 June 2018
Source:IMD pic.twitter.com/92z0EXyUsM
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮುಂತಾದೆಡೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮಳೆ ಅಬ್ಬರ ಗುರುವಾರ ಮುಂದುವರಿದಿದೆ. ಶೃಂಗೇರಿಯಲ್ಲಿ ತುಂಗೆಯ ಒಡಲು ಭರ್ತಿಯಾಗಿದ್ದು, ದೇವಸ್ತಾನದ ಸುತ್ತಮುತ್ತ ಭಾರಿ ಪ್ರಮಾಣದ ನೀರು ತುಂಬಿಕೊಂಡಿದೆ.
ಪ್ರಮುಖ ಬೀದಿಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಶಿವಮೊಗ್ಗದ ಅನೇಕ ಭಾಗಗಳು, ಚಿಕ್ಕಮಗಳೂರು ಮತ್ತು ಕರಾವಳಿಯ ಬಹುತೇಕ ಕಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.












Click it and Unblock the Notifications