ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಶುಕ್ರವಾರವೂ ಮುಂದುವರಿಯಲಿದೆ ಮಳೆಯ ರೌದ್ರಾವತಾರ

|
Google Oneindia Kannada News

ಬೆಂಗಳೂರು, ಜೂನ್ 14: ರಾಜ್ಯದ ಕರಾವಳಿಯ ಎಲ್ಲ ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುರುವಾರ ಮತ್ತು ಶುಕ್ರವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕರಾವಳಿಗಳಲ್ಲಿ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

ಭಾರಿ ಮಳೆಗೆ ಚಿಕ್ಕಮಗಳೂರಿನ ಪ್ರಮುಖ ಹೆದ್ದಾರಿಗಳು ಬಂದ್ಭಾರಿ ಮಳೆಗೆ ಚಿಕ್ಕಮಗಳೂರಿನ ಪ್ರಮುಖ ಹೆದ್ದಾರಿಗಳು ಬಂದ್

ಈ ಪ್ರದೇಶಗಳಲ್ಲಿ ಸಮುದ್ರದ ಪರಿಸ್ಥಿತಿ ಅಪಾಯಕಾರಿಯಾಗಿರಲಿದ್ದು, ಮೀನುಗಾರರು ನೀರಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

monsoon updates: heavy rain to be occur in karnataka on friday

ಈಶಾನ್ಯ ಭಾಗದ ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ತ್ರಿಪುರ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಕೇರಳಗಳಲ್ಲಿ ಮಳೆ ಅಬ್ಬರಿಸಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮುಂತಾದೆಡೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಜೋರು ಮಳೆಗೆ ತುಂಬಿದ ಕಬಿನಿ ಜಲಾಶಯ: ಸಂತಸಗೊಂಡ ರೈತರುಜೋರು ಮಳೆಗೆ ತುಂಬಿದ ಕಬಿನಿ ಜಲಾಶಯ: ಸಂತಸಗೊಂಡ ರೈತರು

ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮಳೆ ಅಬ್ಬರ ಗುರುವಾರ ಮುಂದುವರಿದಿದೆ. ಶೃಂಗೇರಿಯಲ್ಲಿ ತುಂಗೆಯ ಒಡಲು ಭರ್ತಿಯಾಗಿದ್ದು, ದೇವಸ್ತಾನದ ಸುತ್ತಮುತ್ತ ಭಾರಿ ಪ್ರಮಾಣದ ನೀರು ತುಂಬಿಕೊಂಡಿದೆ.

ಪ್ರಮುಖ ಬೀದಿಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಶಿವಮೊಗ್ಗದ ಅನೇಕ ಭಾಗಗಳು, ಚಿಕ್ಕಮಗಳೂರು ಮತ್ತು ಕರಾವಳಿಯ ಬಹುತೇಕ ಕಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

English summary
Monsoon updates 2018: Heavy rain likely to be continued on Friday and Saturday in Coastal Karnataka, parts of South Interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X