Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ
Moodbidri Assault Case: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ.
ಮೂಡುಬಿದರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಮತ್ತು ಅಧಿಕಾರ ದುರುಪಯೋಗದ ಗಂಭೀರ ಆರೋಪಗಳು ಕೇಳಿ ಬಂದಿವೆ. ಪ್ರಕರಣದ ತೀವ್ರತೆಯಿಂದಾಗಿ ಅವರನ್ನು ಅಮಾನತು ಮಾಡಲಾಗಿದೆ. ದೂರು ನೀಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆದಿದ್ದರು ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸುವ ಬೆದರಿಕೆ ಹಾಕುವ ಆರೋಪಗಳು ಸಹ ಅವರ ಮೇಲೆ ಕೇಳಿ ಬಂದಿವೆ. ಈ ಸಂಬಂಧಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಸಂಬಂಧ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅಮಾನತು ಮಾಡುವ ಮೂಲಕ ತಕ್ಷಣ ಕ್ರಮಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಕೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು ಎಷ್ಟು ಜನ ಸಂತ್ರಸ್ತರಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಲಿದೆ. ಇದಕ್ಕಾಗಿಯೇ ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಹೇಳಿದರು.
ಪ್ರಣವಾನಂದ ಸ್ವಾಮೀಜಿ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಐಸಿಸಿ ಮ್ಯಾಂಡೇಟ್ ಬೇರೆ ಇರುತ್ತದೆ. ಜನಸಮುದಾಯದ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವುದನ್ನು ಮಾಡುತ್ತಾರೆ. ಭೇಟಿ ಮಾಡಿ, ಅನಿಸಿಕೆಗಳನ್ನು ಕೇಳಿಕೊಂಡು ತೀರ್ಮಾನ ಮಾಡುವುದನ್ನು ನಾನು ಎಲ್ಲೂ ನೋಡಿಲ್ಲ. ಎಐಸಿಸಿ ಅವರದ್ದೆ ಆದ ವರದಿ ತೆಗೆದುಕೊಂಡು ತೀರ್ಮಾನಗಳನ್ನು ಮಾಡುತ್ತಾರೆ. ಸ್ವಾಮೀಜಿಗಳ ಹೇಳಿಕೆಗಳು ಸಾರ್ವಜನಿಕವಾಗಿ ಬರುವ ಅನಿಸಿಕೆಗಳು ಎಂದು ಹೇಳಿದ್ದಾರೆ.
ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಕೇಳಿ ಬಂದ ಗಂಭೀರ ಆರೋಪ
2018-2023ರ ಅವಧಿಯಲ್ಲಿ ಶಿಕ್ಷಕಿ ಸೇರಿ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಮಾನಸಿಕ ಹಿಂಸೆ ಮತ್ತು ಜೀವ ಬೆದರಿಕೆ ಹಾಕಿದ ಆರೋಪ.
ಪ್ರಕರಣದ ವಿವರ: ಮೂಡುಬಿದರೆ ವ್ಯಾಪ್ತಿಯಲ್ಲಿರುವ ಕುಟಂಬಗಳ ಪುರುಷರ ಮೇಲೆ ಸುಳ್ಳು ಕೇಸ್ ಹಾಕಿ, ಅವರ ಹೆಂಡತಿಯರನ್ನು ಮಂಚಕ್ಕೆ ಕರೆಯುವ ಗಂಭೀರ ಆರೋಪ ಇವರ ಮೇಲಿದೆ. ಆರೋಪಗಳ ಬೆನ್ನಲ್ಲೇ ಸಂದೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಹೊಸದಾಗಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಮಂಗಳೂರು ಉತ್ತರ ಎಸಿಪಿ ಕಚೇರಿಯಲ್ಲಿ ಇನ್ಸ್‌ಪೆಕ್ಟರ್ ಈ ಪ್ರಕರಣದ ಸಂಬಂಧ ವಿಚಾರಣೆ ನಡೆದಿದ್ದು, ಮಹಿಳಾ ಆಯೋಗವು ಈ ಪ್ರಕರಣದಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಇನ್ನು ಸಂತ್ರಸ್ತರು ಇನ್ಸ್‌ಪೆಕ್ಟರ್ ಬಂಧನಕ್ಕೆ ಒತ್ತಾಯಿಸಿದ್ದು, ಅವರ ಮೊಬೈಲ್ ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್ ಪರಿಶೀಲನೆ ಮಾಡಬೇಕು ಎನ್ನುವ ಆಗ್ರಹವೂ ಕೇಳಿ ಬಂದಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications