Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ಕನ್ನಡಕ್ಕಿಂತ ಉರ್ದುಗೆ ಹೆಚ್ಚಿನ ಅನುದಾನ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಕರ್ನಾಟಕದಲ್ಲಿ ಕನ್ನಡಕ್ಕಿಂತ ಉರ್ದು ಭಾಷೆಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇದೀಗ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಿಯಾಕ್ಟ್‌ ಮಾಡಿದ್ದಾರೆ. ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ BJP Karnataka ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್‌ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆಗೆ ₹34,438 ಕೋಟಿ ಮತ್ತು ಸಮಾಜ ಕಲ್ಯಾಣ ಮತ್ತಿತರ ಇಲಾಖೆಗಳಿಗೆ ಸೇರಿದ ಶಾಲೆಗಳಿಗೆ ₹4,150 ಕೋಟಿ ಹೀಗೆ ಕನ್ನಡ ಭಾಷೆಯ ಶಾಲೆಗಳಿಗಾಗಿಯೇ ರಾಜ್ಯ ಸರ್ಕಾರ ಒಟ್ಟು 38,688 ಕೋಟಿ ರೂ.ಗಳನ್ನು ನೀಡಿದೆ. ಇದರ ಜೊತೆಯಲ್ಲಿ ಸರ್ಕಾರಿ ಶಾಲೆಗಳ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ಒಟ್ಟು 999.30 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ. ಈ ಒಟ್ಟು ಅನುದಾನ ಕನ್ನಡ ಭಾಷೆಯ ಅಭಿವೃದ್ದಿಗಾಗಿಯೇ ವ್ಯಯವಾಗಲಿದೆ. ಹೀಗಿರುವಾಗ ಕನ್ನಡ ಭಾಷೆಗೆ ರಾಜ್ಯ ಸರ್ಕಾರ ಕೇವಲ 32 ಕೋಟಿ ರೂಪಾಯಿ ಅನುದಾನ ನೀಡುತ್ತಿದೆ ಎಂಬ ಮಾಹಿತಿಯ ಪ್ರಸಾರದ ಹಿಂದೆ ರಾಜಕೀಯ ದುರುದ್ದೇಶ ಇರುವುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.

More funding for Urdu than Kannada in Karnataka What did CM Siddaramaiah say

ಅತಿ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಇರುವ ರಾಜ್ಯದ ಉರ್ದು ಮಾಧ್ಯಮ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಬೋಧನೆಯ ಗುಣಮಟ್ಟವನ್ನು ಹೆಚ್ಚಿಸುವ ಹಾಗೂ ಮೌಲಾನ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಉದ್ದೇಶದಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ 100 ಕೋಟಿ ರೂ.ಗಳನ್ನು ಅಲ್ಪಸಂಖ್ಯಾತ ಇಲಾಖೆಯಡಿ ಒದಗಿಸಲಾಗಿದೆ.

ಈ ಅನುದಾನವನ್ನು ಕೇವಲ ಭಾಷಾ ಕಲಿಕೆಗೆ ಮಾತ್ರವಲ್ಲ ಶಾಲಾ ಮೂಲಸೌಕರ್ಯ, ಶಿಕ್ಷಕರ ನೇಮಕಾತಿಗಾಗಿ, ಪಠ್ಯಪುಸ್ತಕಗಳು ಮತ್ತು ಹೊಸ ಶಾಲಾ ಕಟ್ಟಡಗಳ ನಿರ್ಮಾಣಕ್ಕೂ ಬಳಸಲಾಗುವುದು. ಕನ್ನಡ, ಉರ್ದು ಭಾಷೆಗಳು ಸೇರಿದಂತೆ ಯಾವುದೇ ಭಾಷೆಯನ್ನು ನಿರ್ದಿಷ್ಠ ಜಾತಿ, ಧರ್ಮದ ಜೊತೆ ಜೋಡಿಸುವುದು ಆ ಭಾಷೆಗಳಿಗೆ ತೋರುವ ಅಗೌರವವಾಗುತ್ತದೆ. ನಮ್ಮ ಸರ್ಕಾರ ರಾಜ್ಯದಲ್ಲಿ ಬಳಕೆಯಲ್ಲಿರುವ ಎಲ್ಲ ಭಾಷೆಗಳ ಬಗ್ಗೆ ಸಮಾನ ಕಾಳಜಿಯನ್ನು ಹೊಂದಿದೆ.

ಇದೇ ಸದುದ್ದೇಶದಿಂದ ರಾಜ್ಯದಲ್ಲಿ ಬಳಕೆಯಲ್ಲಿರುವ ತುಳು, ಕೊಂಕಣಿ, ಅರೆಬಾಸೆ, ಕೊಡವ ಭಾಷೆಗಳಿಗಾಗಿಯೇ ಪ್ರತ್ಯೇಕ ಅಕಾಡೆಮಿಗಳನ್ನು ಸ್ಥಾಪಿಸಲಾಗಿದ್ದು, ಇವುಗಳಿಗೆ ವಾರ್ಷಿಕ 80 ಲಕ್ಷ ರೂಪಾಯಿಗಳ ಅನುದಾನವನ್ನು ನೀಡಲಾಗುತ್ತದೆ. ಇದರ ಜೊತೆಗೆ ವಿಶೇಷ ಕಾರ್ಯಕ್ರಮಗಳಿಗಾಗಿ ಹೆಚ್ಚುವರಿ ಅನುದಾನವನ್ನು ನೀಡಲಾಗುತ್ತದೆ.

ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿಯೇ ಪ್ರತ್ಯೇಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದೆ. ಇದರಡಿಯಲ್ಲಿ 14 ಅಕಾಡೆಮಿಗಳು, 3 ಪ್ರಾಧಿಕಾರ ಮತ್ತು ಸಾಹಿತಿಗಳ ಹೆಸರಿನ 24 ಟ್ರಸ್ಟ್ ಗಳು ಕಾರ್ಯನಿರ್ವಹಿಸುತ್ತಿವೆ. ಇವೆಲ್ಲವೂ ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮೀಸಲಾಗಿವೆ.

ಕನ್ನಡ ಭಾಷೆಗೆ ಕನ್ನಡಿಗರೆಲ್ಲರೂ ತಾಯಿಯ ಸ್ಥಾನವನ್ನು ನೀಡಿದ್ದು ಇದೇ ಗೌರವವನ್ನು ನಮ್ಮ ಸರ್ಕಾರ ಕೂಡಾ ಹೊಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎನ್ನುವುದನ್ನು ನಾನು ಪದೇ ಪದೇ ಹೇಳಿಕೊಂಡು ಬಂದಿದ್ದೇನೆ. ಇದೇ ರೀತಿ ನಾಡು-ನುಡಿಗೆ ಬಗೆವ ಅವಮಾನವನ್ನು ಕೂಡಾ ನಮ್ಮ ಸರ್ಕಾರ ಸಹಿಸುವುದಿಲ್ಲ.

ಹೀಗಿರುವಾಗ ಕನ್ನಡ ಭಾಷೆಗಾಗಿ ಕೇವಲ 32 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ರಾಜ್ಯ ಬಿಜೆಪಿ ಹಂಚಿಕೊಂಡು ಜನರನ್ನು ತಪ್ಪು ದಾರಿಗೆಳೆಯುತ್ತಿರುವುದು ಅಕ್ಷಮ್ಯ ಅಪರಾಧ ಮಾತ್ರವಲ್ಲ ಕನ್ನಡ ನಾಡು ಮತ್ತು ನುಡಿಗೆ ಬಗೆವ ದ್ರೋಹವಾಗಿದೆ. ರಾಜ್ಯ ಬಿಜೆಪಿ ತಕ್ಷಣ ಸ್ಪಷ್ಟೀಕರಣದ ಮೂಲಕ ಸತ್ಯ ಸಂಗತಿಯನ್ನು ತಿಳಿಸುವ ಜೊತೆಯಲ್ಲಿ ತಮ್ಮಿಂದ ಆಗಿರುವ ತಪ್ಪಿಗೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. #ಕನ್ನಡವೇಸಾರ್ವಭೌಮ #ಕನ್ನಡವೇಮೊದಲು ಅಂತ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ಬರಹಗಾರ, ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು, ತಂದೆ-ತಾಯಿ ಇಲ್ಲದೆ ಬೀದಿಯಲ್ಲಿ ಹುಟ್ಟಿರುವ ಈ ಸುಳ್ಳು ಪೋಸ್ಟರ್ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಯದ್ವಾತದ್ವಾ ಚರ್ಚೆಯಾಗುತ್ತಿದೆ. ಯಾರಾದರೂ ತಮ್ಮ ತಲೆಯೊಳಗಿರುವ ಮೆದುಳನ್ನು ಬಳಸುವುದನ್ನು ನೋಡಿದರೆ ಇದು ಫೇಕ್ ನ್ಯೂಸ್ ಮೇಲ್ನೋಟಕ್ಕೆ ಅರ್ಥವಾಗಿದೆ.

ಸರಳ ಲೆಕ್ಕಾಚಾರ: ಪ್ರಾಥಮಿಕ ಶಿಕ್ಷಣ ಬಜೆಟ್ ಅನುದಾನ 36,000 ಕೋಟಿ ರೂಪಾಯಿ. ಇತ್ತೀಚೆಗೆ ಪ್ರಾರಂಭಿಸಲಾಗುವ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ನೀಡಲಾಗುವುದು 2000 ಕೋಟಿ ರೂಪಾಯಿ ಅನುದಾನಕ್ಕೆ ಈ ಅನುದಾನ ಪೂರ್ಣ ವೆಚ್ಚವಾಗುವುದು ಕನ್ನಡ ಭಾಷೆಗಾಗಿ. ಉರ್ದು ಶಾಲೆಗಳಿಗೆ ನೀಡಿರುವುದು 100 ಕೋಟಿ ರೂಪಾಯಿ. (ಉರ್ದು ಮುಸ್ಲಿಮರ ಭಾಷೆಯೇ ಅಲ್ಲ, ಇದನ್ನು ಅಲ್ಪಸಂಖ್ಯಾತ ಇಲಾಖೆಯಡಿ ಸೇರಿಸಿದ್ದೇ ಮೊದಲ ತಪ್ಪು)ಉರ್ದು ಮುಸ್ಲಿಮರ ಭಾಷೆ ಎಂದರ್ಥ ತಿಳಿದುಕೊಳ್ಳೋಣ.

ರಾಜ್ಯದ ಜನಸಂಖ್ಯೆಯಲ್ಲಿ ಶೇಕಡಾ 13ರಷ್ಟು ಮುಸ್ಲಿಮರಿದ್ದಾರೆ. ಇವರಿಗೆ ಬಜೆಟ್ ನಲ್ಲಿ ನೀಡಿರುವ ಅನುದಾನ ರೂ 4,500 ಕೋಟಿ ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಿದರೆ ಕನಿಷ್ಠ 20,000 ಕೋಟಿ ರೂಪಾಯಿಗಳು.
ಇನ್ನು ತುಳು ಭಾಷೆಗೆ ದುಡ್ಡೇ ಕೊಟ್ಟಿಲ್ಲ, ಕೊಂಕಣಿ, ಕೊಡವ, ಬ್ಯಾರಿ ಭಾಷೆಗಳಿಗೆ 45 ಲಕ್ಷ ರೂಪಾಯಿ ಎಂದು ಪೋಸ್ಟರ್ ನೀಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಲ್ಲ ಭಾಷಾ ಅಕಾಡೆಮಿಗಳಿಗೆ ತಲಾ 80 ಲಕ್ಷ ರೂಪಾಯಿ ಅನುದಾನ ನೀಡುತ್ತಿದೆ. (ತುಳುವರನ್ನು ಎತ್ತಿಕಟ್ಟಿರುವುದನ್ನು ನೋಡಿದರೆ ಈ ಪೋಸ್ಟರ್ ಸೃಷ್ಟಿಯಾಗಿರುವುದೇ ತುಳುನಾಡಿನಲ್ಲಿ ಎನ್ನುವುದನ್ನು ನಿಸ್ಸಂದೇಹವಾಗಿ ಹೇಳಬಹುದು) ಹೀಗಿದ್ದಾಗ ರಾಜ್ಯ ಸರ್ಕಾರವೇ ಪತ್ರಿಕಾ ಹೇಳಿಕೆ ನೀಡಿ ಸತ್ಯ ಸಂಗತಿ ತಿಳಿಸಬಹುದಲ್ಲಾ ಎಂದು ಯಾರಾದರೂ ಹೇಳಬಹುದು. ಆ ಹೇಳಿಕೆಯೂ ಬರಬಹುದು.

ಸಮಸ್ಯೆ ಏನೆಂದರೆ ಇಂತಹ ಸುಳ್ಳು ಸುದ್ದಿಗಳನ್ನು ವಿರೋಧ ಪಕ್ಷದ ಯಾವ ನಾಯಕನೂ ಅಧಿಕೃತವಾಗಿ ನೀಡುವುದಿಲ್ಲ. ಎಲ್ಲಾ ಟು ರುಪೀಸ್ ಜೀತದಾಳುಗಳು ಮತ್ತು ಖಾಲಿ ತಲೆಯ ಭಕ್ತರ ಕಿತಾಪತಿಗಳು. ಜನ ಜಾಗೃತರಾಗಬೇಕು ಅಷ್ಟೇ ಅಂತ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+