ಕಾಂಗ್ರೆಸ್ ಮೊದಲ ಪಟ್ಟಿ ರೀಲಿಸ್ : ಎರಡನೇ ಪಟ್ಟಿ ಬಿಡುಗಡೆ ಕುರಿತು ಮಹತ್ವದ ಮಾಹಿತಿ
ಬೆಂಗಳೂರು, ಮಾರ್ಚ್ 09: ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಜೋರಾಗಿದೆ. ಬಿಜೆಪಿ ಹೈಕಮಾಂಡ್ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಕಾಂಗ್ರೆಸ್ ಸಹ ಸರಣಿ ಸಣೆ ನಡೆಸಿ ಮೊದಲ ಪಟ್ಟಿಯನ್ನ ಮಾರ್ಚ್ 8 ರಂದು 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಕಾಂಗ್ರೆಸ್ ನಾಯಕರು ಸ್ಕ್ರೀನಿಂಗ್ ಕಮಿಟಿ ಸಭೆ ಕರ್ನಾಟಕದ 15 ಕ್ಕೂ ಹೆಚ್ಚು ಹೆಸರುಗಳನ್ನ ಬಿಡುಗಡೆ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ನೀರಿಕ್ಷೆ ಇಟ್ಟುಕೊಂಡಿದ್ರು, ಆದ್ರೆ 39 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕೇವಲ ಕರ್ನಾಟಕದ 7 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದ್ದು, ಎರಡನೇ ಪಟ್ಟಿ ಬಿಡುಗಡೆ ಕುರಿತು ಡಿ ಕೆ ಶಿವಕುಮಾರ್ ಮಹತ್ವದ ಮಾಹಿತಿಯನ್ನ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಿನ್ನೆ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. ಮಾರ್ಚ್ 11 ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಆ ಹೆಸರುಗಳು ಅಂತಿಮವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಾರ್ಚ್ 11 ರ ನಂತರ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚೆ ಮಾಡಿದಾಗ ಅವರು ಯಾರ ಹೆಸರನ್ನ ಪ್ರಸ್ತಾಪ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದ ಮೇಲೆ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. 11 ರಂದು ನಡೆಯಲಿರುವ ಸಭೆ ನಂತರ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈಗ ಪ್ರಕಟವಾಗಿರುವ 7 ಕ್ಷೇತ್ರಗಳ ಪೈಕಿ ಎಷ್ಟರಲ್ಲಿ ಗೆಲ್ಲುವ ಸಾಧ್ಯತೆ ಇದೆ ಕುರಿತು ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ತಿಳಿಸಿದರು.
17 ಕ್ಷೇತ್ರಗಳಿಗೆ ನೀವು ಪಟ್ಟಿ ತೆಗೆದುಕೊಂಡು ಹೋಗಿದ್ದೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಚರ್ಚೆ ಮಾಡುತ್ತಾರೆ. ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
* ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್
* ತುಮಕೂರು- ಎಸ್ಪಿ ಮುದ್ದಹನುಮೇಗೌಡ
* ಮಂಡ್ಯ- ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
* ಹಾಸನ- ಶ್ರೇಯಸ್ ಪಟೇಲ್
* ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್
* ವಿಜಯಪುರ- ಎಚ್ಆರ್ ಅಲ್ಗೂರ್
* ಹಾವೇರಿ: ಆನಂದ್ ಸ್ವಾಮಿ ಗಡ್ಡ ದೇವರಮಠ












Click it and Unblock the Notifications