ಶಕ್ತಿ ಯೋಜನೆ: ಶತಕೋಟಿ ದಾಟಿದ ಮಹಿಳೆಯರ ಉಚಿತ ಪ್ರಯಾಣ, ಖರ್ಚಾದ ಟಿಕೆಟ್‌ ದರವೆಷ್ಟು?

ಬೆಂಗಳೂರು, ನವೆಂಬರ್‌ 23: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಮೊಟ್ಟ ಮೊದಲನೆಯದಾಗಿ ಜಾರಿಗೊಳಿಸಿದ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಐದು ತಿಂಗಳು ಪೂರೈಸಿದೆ. ಜೂನ್ 11 ರಿಂದ ನವೆಂಬರ್ 22 ವರೆಗೆ ಶತಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾಲ್ಕು ನಿಗಮಗಳ ಬಸ್​ಗಳಲ್ಲಿ ಇಲ್ಲಿವರೆಗೆ ನೂರು ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ ಎಂಬ ಮಾಹಿತಿಯಿದ್ದು, ಶಕ್ತಿ ಯೋಜನೆ ಜಾರಿಯಾಗಿ ಐದೇ ತಿಂಗಳಿಗೆ 2,397 ಕೋಟಿ ರೂಪಾಯಿ ವ್ಯಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ 2,500 ಕೋಟಿ ರೂಪಾಯಿ ತಲುಪಲಿದೆ.

100-crore-women-have-traveled-free-bus

ನುಡಿದಂತೆ ನಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಗ್ಯಾರಂಟಿ ಯೋಜನೆಯಾಗಿ ಜೂನ್‌ 11ರಂದು ಶಕ್ತಿ ಯೋಜನೆ ಜಾರಿಗೆ ತಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದರು.

ಕಳೆದ 165 ದಿನಗಳಲ್ಲಿ 100,47,56,184 ಮಹಿಳಾ ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ , ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಒಟ್ಟು ಟಿಕೆಟ್‌ ಮೌಲ್ಯ 2,397ಕೋಟಿ ತಲುಪಿದೆ. ಇದುವರೆಗೆ ನವೆಂಬರ್ 22 ರವರೆಗೂ 100.47 ಕೋಟಿ ಮಹಿಳಾ ಪ್ರಯಾಣಿಕರು ಸಂಚಾರ ಮಾಡಿದ್ದಾರೆ.

100-crore-women-have-traveled-free-bus

ಯಾವ ಯಾವ ನಿಗಮದಿಂದ ಎಷ್ಟು ಮಹಿಳೆಯರ ಸಂಚಾರ?

ಕೆಎಸ್ಆರ್‌ಟಿಸಿ- 30,12,17,350
ಬಿಎಂಟಿಸಿ - 32,69,60,082
NWKRTC- 23,37,23,007
KKRTC- 14,28,55,745

ಮಹಿಳೆಯರ ಪ್ರಯಾಣಿಕರ ಟಿಕೆಟ್ ಮೌಲ್ಯ ಎಷ್ಟು..?

ಕೆಎಸ್ಆರ್‌ಟಿಸಿ- 9,00,29,21,508 ರೂಪಾಯಿ
ಬಿಎಂಟಿಸಿ - 4,20,82,19,200 ರೂಪಾಯಿ
NWKRTC- 6,00,69,91,513 ರೂಪಾಯಿ
KKRTC- 4,75,98,79,341 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+