• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಫೆ.13ರ ಕರ್ನಾಟಕ ಬಂದ್; 100ಕ್ಕೂ ಅಧಿಕ ಸಂಘಟನೆಗಳ ಬೆಂಬಲ

|

ಬೆಂಗಳೂರು, ಫೆಬ್ರವರಿ 09: ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ 100ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ. ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರದ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ಸಿಕ್ಕಿಲ್ಲ.

ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಫೆಬ್ರವರಿ 13ರ ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ವಿವಿಧ ಸಂಘಟನೆಗಳ ಪ್ರಮುಖರನ್ನು ಅವರು ಭೇಟಿಯಾಗಿ ಬಂದ್‌ಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡುತ್ತಿದ್ದಾರೆ.

ಫೆಬ್ರವರಿ 13ರಂದು ಕರ್ನಾಟಕ ಬಂದ್‌ಗೆ ಕರೆ

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಬಂದ್ ಕರೆ ನೀಡಲಾಗಿದೆ. ಬೆಂಗಳೂರಿನ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್‌ ತನಕ ಬೃಹತ್ ಪ್ರತಿಭಟನಾ ಜಾಥಾ ನಡೆಸಲು ತೀರ್ಮಾನಿಸಲಾಗಿದೆ. ಆಟೋ, ಕ್ಯಾಬ್ ಚಾಲಕರು ಸಹ ಬಂದ್‌ಗೆ ಬೆಂಬಲ ನೀಡಿದ್ದಾರೆ.

ಸಿಎಎ ವಿರುದ್ಧ ಭಾರತ್ ಬಂದ್: ಒಂದೇ ದಿನ ಬಲಿಯಾಗಿದ್ದೆಷ್ಟು ಜನ?

ಕರ್ನಾಟಕ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಓಲಾ, ಊಬರ್ ಮತ್ತು ಕೆಲವು ಆಟೋ ಸಂಘಟನೆಗಳು ಘೋಷಣೆ ಮಾಡಿವೆ. ಆದ್ದರಿಂದ, ಅಂದು ಕ್ಯಾಬ್, ಆಟೋಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.

ಕೆಂಪೇಗೌಡ ಏರ್‌ಪೋರ್ಟ್‌ನ ಮೊದಲ ರನ್‌ವೇ 8 ತಿಂಗಳು ಬಂದ್

100ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

100ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ನಡೆಸುತ್ತಿರುವ ಪ್ರತಿಭಟನೆ ಫೆಬ್ರವರಿ 13ರಂದು 100ನೇ ದಿನಕ್ಕೆ ಕಾಲಿಡುತ್ತಿದೆ. ಆದ್ದರಿಂದ, ಅಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

100ಕ್ಕೂ ಅಧಿಕ ಸಂಘಟನೆಗಳ ಬೆಂಬಲ

100ಕ್ಕೂ ಅಧಿಕ ಸಂಘಟನೆಗಳ ಬೆಂಬಲ

ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಕರೆ ನೀಡಿರುವ ಬಂದ್‌ಗೆ ಓಲಾ, ಊಬರ್, ಟ್ಯಾಕ್ಸಿ, ಲಾರಿ ಮಾಲೀಕರ ಸಂಘ ಬೆಂಬಲ ನೀಡಿದೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘ, ದಲಿತ ಸಂಘಟನೆಗಳು, ವಿವಿಧ ಕಾರ್ಮಿಕ ಹಾಗೂ ಕನ್ನಡ ಪರ ಸಂಘಟನೆಗಳು ಸೇರಿ 100ಕ್ಕೂ ಅಧಿಕ ಸಂಘಟನೆಗಳು ಬೆಂಬಲ ನೀಡಿವೆ.

ವಿವಿಧ ಸಂಘಟನೆಗಳು

ವಿವಿಧ ಸಂಘಟನೆಗಳು

ಕರ್ನಾಟಕ ಬಂದ್‌ಗೆ ಬೆಂಬಲವಿದೆ ಎಂದು ಓಲಾ, ಊಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹೇಳಿದ್ದಾರೆ. ಆದರ್ಶ ಆಟೋ ಯೂನಿಯನ್, ಪೀಸ್ ಆಟೋ ಯೂನಿಯನ್, ಜೈ ಭಾರತ ಚಾಲಕರ ಸಂಘ, ಜೈ ಕರವೇ ಚಾಲಕ ಸಂಘ, ಸಾರಥಿ ಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಫೆಬ್ರವರಿ 13ರ ಕರ್ನಾಟಕ ಬಂದ್‌ಗೆ ಬೆಂಬಲ ಘೋಷಣೆ ಮಾಡಿವೆ.

ಬೆಳಗ್ಗೆ 6 ರಿಂದ ಸಂಜೆ 6

ಬೆಳಗ್ಗೆ 6 ರಿಂದ ಸಂಜೆ 6

ಫೆಬ್ರವರಿ 13ರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರದ ಕುರಿತು ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಹೋಟೆಲ್, ಪೆಟ್ರೋಲ್ ಬಂಕ್‌ಗಳು ಸಹ ಬಾಗಿಲು ಮುಚ್ಚುವ ಸಾಧ್ಯತೆ ಇದೆ.

English summary
More than 100 organizations extended support for the Karnataka bandh called by Karnataka Sangatenegala Okkuta on February 13, 2020 demanding reservation for Kannadigs in jobs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X