ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

10,000 ಕರ್ನಾಟಕ ಪೊಲೀಸರಿಗೆ ಕೊರೊನಾವೈರಸ್ ಪಾಸಿಟಿವ್!

|
Google Oneindia Kannada News

ಬೆಂಗಳೂರು, ಏಪ್ರಿಲ್ 23: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಗೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗಿದೆ. ಕಳೆದ 2020ರ ಏಪ್ರಿಲ್ ತಿಂಗಳಿನಿಂದ ಇಂದಿನವರೆಗೂ ರಾಜ್ಯದಲ್ಲಿ ಪ್ರತಿನಿತ್ಯ 27 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.

ರಾಜ್ಯದಲ್ಲಿ ಈವರೆಗೂ 9,990 ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿದ್ದು, ಇದುವರೆಗೂ 107 ಭದ್ರತಾ ಸಿಬ್ಬಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.

ಕರ್ನಾಟಕ; 25,795 ಹೊಸ ಕೋವಿಡ್ ಪ್ರಕರಣ ದಾಖಲುಕರ್ನಾಟಕ; 25,795 ಹೊಸ ಕೋವಿಡ್ ಪ್ರಕರಣ ದಾಖಲು

ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬವನ್ನು ಕೊವಿಡ್-19 ಮಹಾಮಾರಿಯಿಂದ ರಕ್ಷಿಸುವುದಕ್ಕಾಗಿ ಬಹುಪಾಲು ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಭದ್ರತಾ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 More Than 10000 Karnataka Police Tested Coronavirus Positive In Last One Year

ಮೊದಲ ಅಲೆ ಮತ್ತು ಎರಡನೇ ಅಲೆ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಮೊದಲ ಅಲೆಯ ಸಂದರ್ಭದಲ್ಲಿ 9,695 ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ. ಎರಡನೇ ಅಲೆಯಲ್ಲಿ ಏಪ್ರಿಲ್ 1ರವರೆಗಿನ ಅಂಕಿ-ಅಂಶದ ಪ್ರಕಾರ 295 ಭದ್ರತಾ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎಂದು ಆಡಳಿತ ವಿಭಾಗದ ಪೊಲೀಸ್ ಮಹಾನಿರ್ದೇಶಕ ಎಂ ಎ ಸಲೀಂ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ರಾಜ್ಯದ ಶೇ.10ರಷ್ಟು ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದ್ದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ತಿಳಿಸಿದ್ದಾರೆ. ಅಲ್ಲದೇ, ನಾವು ಶೇ.1ರಷ್ಟು ಸಿಬ್ಬಂದಿಯನ್ನೂ ಕಳೆದುಕೊಂಡಿದ್ದೇವೆ. ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಇಲಾಖೆ ವತಿಯಿಂದ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ.

ರಾಜ್ಯದಲ್ಲಿ ಸದ್ಯಕ್ಕೆ 76000 ಪೊಲೀಸ್ ಸಿಬ್ಬಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಿದ್ದು, 46,000 ಸಿಬ್ಬಂದಿಯು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಏಪ್ರಿಲ್ ಅಂತ್ಯದ ವೇಳೆಗೆ ಬಹುತೇಕ ಎಲ್ಲ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ನಿರೀಕ್ಷೆಯಲ್ಲಿ ಭದ್ರತಾ ಸಿಬ್ಬಂದಿಯ ಕುಟುಂಬದ ಸದಸ್ಯರಿಗೆ ಮೇ ತಿಂಗಳಾಂತ್ಯದ ವೇಳೆಗೆ ಲಸಿಕೆ ನೀಡಲಾಗುವುದು ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.

English summary
More Than 10000 Karnataka Police Tested Coronavirus Positive In Last One Year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X