ಯಾದಗಿರಿ: ಹಾಸ್ಟೆಲ್ ಊಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Posted By:
Subscribe to Oneindia Kannada

ಯಾದಗಿರಿ, ಮಾರ್ಚ್. 10 : ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ಹುಳಿಯಾರಿನಲ್ಲಿನ ವಿದ್ಯಾವಾರಿಧಿ ವಸತಿ ಶಾಲೆಯಲ್ಲಿ ವಿಷಾ ಆಹಾರ ಸೇವಿಸಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಬೆನ್ನಲ್ಲಿಯೇ ಯಾದಗಿರಿಯ ಹಾಸ್ಟೆಲ್ ವೊಂದರಲ್ಲಿ ವಿಷಾ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಇಲ್ಲಿನ ಗಂಜ್ ಪ್ರದೇಶದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಸ್ಟೆಲ್ ನಲ್ಲಿ ಶುಕ್ರವಾರ ಮಧ್ಯಾಹ್ನ ಊಟ ಮಾಡಿದ ಬಳಿಕ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ್ಡಿದ್ದಾರೆ. [ತಡವಾಗಿ ಬಂದ ಯಶ್ ಕಾರಿನ ಗ್ಲಾಸ್ ಪೀಸ್ ಪೀಸ್]

ಮಧ್ಯಾಹ್ನದ ಊಟ ಮಾಡಿದ ಪಿಯುಸಿ ಮತ್ತು ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳುವುದು ಹಾಗೂ ತಲೆ ಸುತ್ತು ಬಂದು ಬೀಳುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

More than 20 students fall ill after eating food at hostel in yadgir

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷಾ ಆಹಾರ ಸೇವಿಸಿದ್ದರಿಂದ ವಿದ್ಯಾರ್ಥಿಗಳಿಗೆ ಈ ರೀತಿ ಆಗಿರಬಹುದೆಂದು ವೈದ್ಯರು ಹೇಳಿದ್ದಾರೆ.

ಹೀಗೆ ಇಂತಹ ಘಟನೆಗಳು ಸಂಭವಿಸುತ್ತಿದ್ದರೆ, ತಮ್ಮ ಮಕ್ಕಳನ್ನು ಹಾಸ್ಟೆಲ್ ಗಳಿಗೆ ಸೇರಿಸಿದರೆ ಎಷ್ಟು ಸೇಫ್ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
More than 20 students fall ill after eating food at Ganj SC ST hostel in yadgir on March 10. The students admitted in district hospital.
Please Wait while comments are loading...