ಬಾಗಲಕೋಟೆ,: ಬಿಸಿಯೂಟ ಸೇವಿಸಿ 35ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಬಾಗಲಕೋಟೆ, ಜುಲೈ 10 : ಜಿಲ್ಲೆಯ ಹುನುಗುಂದ ತಾಲೂಕಿನ ಗಂಗೂರು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು (ಸೋಮವಾರ) ಮಧ್ಯಾಹ್ನ ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರತಿದಿನದಂತೆ ಮಧ್ಯಾಹ್ನ ಮಕ್ಕಳು ಬಿಸಿಯೂಟ ಸೇವನೆ ಮಾಡಿದ್ದಾರೆ. ಊಟದ ಸೇವಿಸಿದ ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಇನ್ನೂ ಕೆಲ ಮಕ್ಕಳು ಹೊಟ್ಟೆ ನೋವಿನಿಂದ ಬಳಲಿದ್ದಾರೆ. ಕೂಡಲೇ ಅಸ್ವಸ್ಥರಾದ ಮಕ್ಕಳನ್ನು ಹುನುಗುಂದ ತಾಲೂಕು ಆಸ್ಪತ್ರೆ ಮತ್ತು ಅಮಿನಗಢ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲೆಯಲ್ಲಿ ಒಟ್ಟು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದು, ಅದರಲ್ಲಿ 35ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಇಂದು ಶಾಲೆಯಲ್ಲಿ ಕೇಸರಿಬಾತ್ ಮತ್ತು ಅನ್ನ-ಸಾಂಬಾರ್ ಅಡುಗೆ ಮಾಡಲಾಗಿತ್ತು.
ಹೆಚ್ಚಾಗಿ ಕೇಸರಿಬಾತ್ ಸೇವಿಸಿದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications