ರಾತ್ರೋರಾತ್ರಿ ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟ ಡಿಕೆಶಿ ; ಬರೋಬ್ಬರಿ 400 ಕ್ಕೂ ಹೆಚ್ಚು JDS ಮುಖಂಡರು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಏಪ್ರಿಲ್ 11: ಲೋಕಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ರಾಜಕೀಯ ನಾಯಕರು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ರಾತ್ರೋರಾತ್ರಿ ದಳಪತಿಗಳಿಗೆ ಕನಕಪುರದ ಬಂಡೆ ಡಿ ಕೆ ಶಿವಕುಮಾರ್ ಬಿಗ್ ಶಾಕ್ ಕೊಟ್ಟಿದ್ದಾರೆ.
ಹೌದು, ವಿಧಾನಸಭಾ ಚುನಾವಣೆಯಲ್ಲಿ ಗಭರ್ಜರಿ ಗೆಲುವ ಕಂಡು ಸರ್ಕಾರ ರಚಿಸಿರುವ ಕಾಂಗ್ರೆಸ್ ಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಕಾಂಗ್ರೆಸ್ ಠಕ್ಕರ್ ಕೊಡಲು ಹಲವು ತಂತ್ರಗಾರಿಕೆಯನ್ನ ನಡೆಸಿದ್ರೆ, ಇತ್ತ ಸದ್ದಿಲ್ಲದೇ ಡಿ ಕೆ ಶಿವಕುಮಾರ್ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ, ಮತ್ತಿತರರ ನಾಯಕರು ಸೇರಿದಂತೆ ಬರೋಬ್ಬರಿ 400 ಕ್ಕೂ ಮುಖಂಡರನ್ನ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದು, ದಳಪತಿಗಳಿ ಬಿಗ್ ಶಾಕ್ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ, ಮತ್ತಿತರರ ನಾಯಕರು ಹಾಗೂ ಕಾರ್ಯಕರ್ತರನ್ನು ಗುರುವಾರ ರಾತ್ರಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಶಿವಕುಮಾರ್ ಅವರು, ಕುಮಾರಸ್ವಾಮಿ ಹಾಗು ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ ಪಕ್ಷವನ್ನು ಹೇಗೆ ಕಟ್ಟುತ್ತಾರೆ ಎಂದು ಲೇವಡಿ ಮಾಡಿದರು.
ದೇವೇಗೌಡರು ಪಕ್ಷದ ಅಧಿಕಾರವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟ ಪರಿಣಾಮ ಆ ಪಕ್ಷ ಈ ಸ್ಥಿತಿ ತಲುಪಿದೆ. ಈಗ ತಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿದವರನ್ನೇ ಕರೆದುಕೊಂಡು ಒಕ್ಕಲಿಗರ ಮಠಕ್ಕೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ತಮ್ಮ ಪಕ್ಷದ ಕಾರ್ಯಕರ್ತರಿಗೆ ಒಂದು ಸಣ್ಣ ಅಧಿಕಾರವನ್ನಾದರೂ ಕೊಟ್ಟರಾ? ಅಧಿಕಾರ ಇದ್ದಾಗಲೇ ಏನು ಮಾಡಲಿಲ್ಲ. ಕಾರ್ಯಕರ್ತರು ಇಲ್ಲದೆ ಯಾವ ಪಕ್ಷ ಇರಲು ಸಾಧ್ಯ? ಎಂದು ಪ್ರಶ್ನಿಸಿದರು.
ಚನ್ನಪಟ್ಟಣದವರಿಗೆ ರಾಜಕಾರಣ ಹೊಸದಲ್ಲ. ಆದರೆ ಇಂದು ನಡೆಯುತ್ತಿರುವ ರಾಜಕಾರಣ ನೋಡಿದರೆ ಯಾರನ್ನು ನಂಬಬೇಕು, ಯಾರನ್ನು ಬಿಡಬೇಕು ಎಂದು ಅರ್ಥವಾಗುತ್ತಿಲ್ಲ.ಕುಮಾರಸ್ವಾಮಿ, ಯೋಗೇಶ್ವರ್ ಅವರು ಆಡಿದ್ದ ಮಾತುಗಳು ಒಂದೇ ಎರಡೇ. ಅವರು ಈಗ ಏನಾದರೂ ಮಾಡಿಕೊಳ್ಳಲಿ. ಚನ್ನಪಟ್ಟಣದಲ್ಲಿ ದಳ ಮತ್ತು ಬಿಜೆಪಿ ಒಂದಾಗಲು ಸಾಧ್ಯವೇ? ಎಂದು ಡಿ ಕೆ ಶಿವಕುಮಾರ್ ಪ್ರಶ್ನಿಸಿದರು.
ಕಾಂಗ್ರೆಸ್ನ ತತ್ವಾದರ್ಶಗಳಿಂದ ಪ್ರೇರಿತರಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಸೇರಿದಂತೆ 400ಕ್ಕೂ ಹೆಚ್ಚು ಜನರು ಇಂದು ಪಕ್ಷ ಸೇರ್ಪಡೆಗೊಂಡರು. ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದೆ. pic.twitter.com/Zw2PQ3XuTQ
— DK Shivakumar (@DKShivakumar) April 11, 2024
ಚುನಾವಣೆ ಮುಗಿಯುವ ವೇಳೆಗೆ ಕಾಂಗ್ರೆಸ್ ಅವರಿಗೆ ಏನೂ ಮಾಡದೇ ಇದ್ದರೂ ಪರಸ್ಪರ ಒಬ್ಬರಿಗೊಬ್ಬರು ಯಾವ ಗತಿ ಮಾಡಬೇಕೋ ಮಾಡುತ್ತಾರೆ. ಇವರ ರಾಜಕೀಯಕ್ಕೆ ಸ್ವಾರ್ಥಕ್ಕೆ ಕಾರ್ಯಕರ್ತರು ಏನಾಗಬೇಕು. ಅವರು ಯಾರಿಗಾಗಿ ದುಡಿದರು, ಹೋರಾಟ ಮಾಡಿದರು? ಕಳೆದ ಒಂದು ತಿಂಗಳಲ್ಲಿ ಸುಮಾರು ಹತ್ತು ಸಾವಿರ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.












Click it and Unblock the Notifications