Ration Card: ರಾಜ್ಯದ ಈ ಜಿಲ್ಲೆಯಲ್ಲಿ 5,000ಕ್ಕೂ ಹೆಚ್ಚು ನಕಲಿ ಪಡಿತರ ಚೀಟಿಗಳು ರದ್ದು
Ration Card: ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್‌ಗಳನ್ನು ಪಡೆದಿರುವವರನ್ನು ಜಲಾಡಲು ಸರ್ಕಾರ ಮುಂದಾಗಿದೆ. ಇನ್ನು ಇದೀಗ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ ಎಷ್ಟು ನಕಲಿ ಬಿಎಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಮೇತ ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದಲ್ಲಿ ಅರ್ಹರಿಗಿಂತ ಅನರ್ಹರೇ ಹೆಚ್ಚಾಗಿ ನಕಲಿ ದಾಖಲೆ ನೀಡಿ ಪಡಿತರ ಪಡೆಯುತ್ತಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು. ಆದರೆ ಯಾವುದೇ ಸರ್ಕಾರವ ಬಂದರೂ ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಇದರಿಂದ ಬಡವರಿಗೆ ತುಂಬಾ ಅನ್ಯಾಯ ಆಗುತ್ತಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿರುವ ನಕಲಿ ಬಿಪಿಎಲ್ ಕಾರ್ಡ್ ರದ್ದು ನಿರ್ಧಾರದಿಂದ ಬಡವರಿಗೆ ತುಂಬಾ ಅನುಕೂಲ ಆದಂತಾಗಿದೆ.

ಇನ್ನು ಚಿಕ್ಕಮಗಳೂರಿನಲ್ಲಿ 5,125 ನಕಲಿ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ. ರದ್ದಾಗ ಕಾರ್ಡ್‌ಗಳ ಪಟ್ಟಿಯನ್ನು ವೆಬ್ ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಕಾರ್ಡ್ ನಂಬರ್, ಅವುಗಳ ವಾರಸುದಾರರು, ನ್ಯಾಯಬೆಲೆ ಅಂಗಡಿಯ ಕೋಡ್ ಹಾಗೂ ಕಾರ್ಡ್‌ದಾರರ ವಿಳಾಸವನ್ನು ಉಲ್ಲೇಖ ಮಾಡಿ ಪಟ್ಟಿಯನ್ನು ಬಿಡುಗಡೆಗೊಳಿದಲಾಗಿದೆ ಎಂದು ತಿಳಿಸಿದೆ.
ನಕಲಿ ದಾಖಲೆ ನೀಡಿ ಬಿಪಿಎಲ್ ಕಗಳನ್ನು ಪಡೆದಿರುವವರ ಪತ್ತೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಬಿಪಿಎಲ್ ಕಾರ್ಡುಗಳಿಗಾಗಿ ಹೊಸ ಮಾನದಂಡ ವಿಧಿಸಿ ಅವುಗಳನ್ನು ಪ್ರಕಟಿಸಿದೆ. ಜೊತೆಗೆ ನಕಲಿ ಬಿಪಿಎಲ್ ಕಾರ್ಡುದಾರರ ಪಟ್ಟಿಯನ್ನೂ ಬಿಡುಗಡೆಗೊಳಿಸಿದ್ದು, ಸದ್ಯ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕಲಿ ಬಿಪಿಎಲ್ ಕಾರ್ಡು ಹೊಂದಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಅಲ್ಲದೆ, ನಕಲಿ ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ.
ಬಿಪಿಎಲ್ ಕಾರ್ಡ್‌ಗಳಿಗೆ ಈಗಾಗಲೇ ಸರ್ಕಾರ ಹಲವು ನಿಬಂಧನೆಗಳನ್ನು ಅಳವಡಿಕೆ ಮಾಡಿತ್ತು. ಆ ನಿಬಂಧನೆಗಳನ್ನು ಪರಿಷ್ಕರಿಸಿ, ಕೆಲವು ಹೊಸ ನಿಯಮಗಳನ್ನು ಅಳನಡಿಕೆ ಜಾರಿ ತಂದಿದ್ದು, ಅದರನ್ವಯ ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಬಳಕೆ ಮಾಡದಂತೆ ರದ್ದುಪಡಿಸಲು ಸರ್ಕಾರ ಮುಂದಾಗಿತ್ತು. ಅದರಂತೆಯೇ ಇದೀಗ ಹೊಸ, ಪರಿಷ್ಕೃತ ನಿಬಂಧನೆಗಳನ್ನು ಬಿಡುಗಡೆ ಮಾಡಿದೆ.
ಪರಿಷ್ಕೃತ ನಿಬಂಧನೆಗಳಲ್ಲಿ ಇರುವಂತೆ, 1.20 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿರುವವರಿಗೆ ಇನ್ಮುಂದೆ ಬಿಪಿಎಲ್ ಕಾರ್ಡ್ ನೀಡಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಜೊತೆಗೆ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದರೆ, ಅವುಗಳನ್ನು ರದ್ದು ಮಾಡಲು ನಿರ್ಧರಿಸಿದೆ.
ಇನ್ನು ಅನರ್ಹರು ಬಿಪಿಎಲ್ ಕಾರ್ಡ್‌ಗಳ ಮೂಲಕ ಅನ್ನಭಾಗ್ಯ ಗ್ಯಾರಂಟಿ ಯೋಜನೆಯಡಿ ಅಕ್ಕಿಯನ್ನು ಪಡೆದುಕೊಂಡಿದ್ದವರಿಗೆ ದಂಡ ಹಾಕಲು ನಿರ್ಧರಿಸಿದೆ. ಅಕ್ಕಿಯನ್ನು ಪಡೆದ ದಿನದಿಂದ ಒಂದು ಕೆಜಿ ಅಕ್ಕಿಗೆ 33 ರೂಪಾಯಿಗಳಂತೆ ದಂಡ ವಿಧಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕುಟುಂಬಕ್ಕೆ ಉತ್ತಮ ಆದಾಯ ಇದ್ದರೂ ಬಿಪಿಎಲ್ ಕಾರ್ಡುಗಳನ್ನು ಪಡೆದಿರುವವರಿಗೆ ಒಂದು ಅವಕಾಶ ನೀಡಲು ನಿರ್ಧರಿಸಲಾಗಿದೆ. ಅಂತಹವರಿಗೆ ತಮ್ಮ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡುಗಳಿಗೆ ಬದಲಾಯಿಸಿಕೊಳ್ಳಲು ಒಂದು ಅವಕಾಶವನ್ನು ನೀಡಲಾಗುತ್ತದೆ. ಅದರಂತೆಯೇ ಎಪಿಎಲ್ ಕಾರ್ಡ್‌ಗಳಿಗೆ ಬದಲಾವಣೆ ಮಾಡಿಸಿದರೆ, ಆ ಕಾರ್ಡ್‌ದಾರರು ಹಣ ನೀಡಿ ಲಭ್ಯವಿರುವ ಪಡಿತರವನ್ನು ಪಡೆಯಬಹುದಾಗಿದೆ.












Click it and Unblock the Notifications