ಮೂಲಸೌಕರ್ಯ ಬಿಡಿ, ರಾಜ್ಯದ 6 ಸಾವಿರ ಹಳ್ಳೀಲಿ ಸ್ಮಶಾನವೇ ಇಲ್ಲ

ಬೆಂಗಳೂರು, ಡಿಸೆಂಬರ್ 6: ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆ ಎಲ್ಲರನ್ನು ಕಾಡುತ್ತಿದೆ ಅದು ಈಗ ಸಾಮಾನ್ಯವಾಗಿಬಿಟ್ಟಿದ. ಆದರೆ ರಾಜ್ಯದ 6 ಸಾವಿರ ಹಳ್ಳಿಗಳಲ್ಲಿ ಸ್ಮಶಾನವೇ ಇಲ್ಲ ಎನ್ನುವ ಮಾಹಿತಿಯನ್ನು ರಾಜ್ಯ ಸರ್ಕಾರವೇ ಹೇಳಿಕೊಂಡಿದೆ.

ರಾಜ್ಯದಲ್ಲಿ ಒಟ್ಟು 6053 ಗ್ರಾಮಗಳು ಹಾಗೂ 281 ಪಟ್ಟಣಗಳಲ್ಲಿ ಸ್ಮಶಾನಗಳೇ ಇಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಸ್ಮಾಶನವಿಲ್ಲದ ಗ್ರಾಮಗಳಲ್ಲಿ ಸ್ಮಶಾನಕ್ಕಾಗಿ ಭೂಮಿ ಗುರುತಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ನಗರದ ವಕೀಲ ಇಕ್ಬಾಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಸುಜಾತಾ ಅವರಿದ್ದ ಪೀಠದಲ್ಲಿ ಬುಧವಾರ ನಡೆಯಿತು.

2018-19ನೇ ಸಾಲಿನ ಬಜೆಟ್‌ನಲ್ಲಿ ಸ್ಮಶಾನ ನಿರ್ಮಾಣಕ್ಕೆಂದೇ 10 ಕೋಟಿ ರೂ ಮೀಸಲಿಡಲಾಗಿದೆ. 6053 ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗವಿಲ್ಲ ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಜಾಗ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

More than 6k villages have no cemetery in the state

ರಾಜ್ಯದ ಹಲವು ಗ್ರಾಮಗಳಲ್ಲಿ ಸ್ಮಶಾನವೇ ಇಲ್ಲ, ಆ ಗ್ರಾಮಗಳಲ್ಲಿ ಜನರು ಮೃತಪಟ್ಟಾಗ ಅವರ ಅಂತ್ಯಕ್ರಿಯೆ ನಡೆಸುವುದೇ ದೊಡ್ಡ ಸಮಸ್ಯೆಯಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ 2016ರಲ್ಲೇ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಆಗ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+