ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪ್ರವಾಸೋದ್ಯಮ ಇಲಾಖೆಯಲ್ಲಿ ಶೇ.80 ರಷ್ಟು ಹುದ್ದೆ ಖಾಲಿ!
ಬೆಂಗಳೂರು, ಸೆಪ್ಟೆಂಬರ್ 06: ಕರ್ನಾಟಕ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಶೇ.80 ರಷ್ಟು ಹುದ್ದೆಗಳು ಭರ್ತಿಯಾಗದೆ ಉಳಿದಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರವಾಸೋದ್ಯಮ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಗಮನ ನೀಡುತ್ತಿರುವ ಕರ್ನಾಟಕ ಸರ್ಕಾರ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿಕೊಳ್ಳುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಕಳೆದ ಒಂದು ವರ್ಷಗಳಿಂದ ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿಯ ಕೊರತೆ ಎದುರಿಸುತ್ತಿದ್ದು, ಯಾವುದೇ ಪೂರ್ಣಾವಧಿ ಸಿಬ್ಬಂದಿಯನ್ನು ಇಲಾಖೆ ನೇಮಿಸಿಕೊಳ್ಳುತ್ತಿಲ್ಲ.
TIMEನ ಜಗತ್ತಿನ 100 ಅದ್ಭುತ ಸ್ಥಳಗಳಲ್ಲಿ 'ಸರ್ದಾರ್ ಪಟೇಲ್'; ಮೋದಿ ಖುಷ್
ಮಂಜೂರಾದ, ಎಲ್ಲಾ ಸ್ತರದ ಒಟ್ಟು 312 ಹುದ್ದೆಗಳಲ್ಲಿ 243 ಹುದ್ದೆಗಳು ಖಾಲಿಯಿವೆ. ಇದರಿಂದಾಗಿ ಪ್ರವಾಸಿಗಳಿಗೆ ಸಮರ್ಪಕ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ.
ವಿದೇಶಿ ಪ್ರವಾಸಿಗರನ್ನೂ ಕರ್ನಾಟಕ ಆಮಂತ್ರಿಸುತ್ತಿದ್ದರೂ, ಸಿಬ್ಬಂದಿಗಳೇ ಕಡಿಮೆ ಇರುವುದರಿಂದ ಪ್ರವಾಸೋದ್ಯಮ ಇಲಾಖೆಯ ಕಾರ್ಯಕ್ಷಮತೆಗೆ ಧಕ್ಕೆಯಾಗುತ್ತಿದೆ.