• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

40 ಸಾವಿರ ಆಟೋ, ಟ್ಯಾಕ್ಸಿ ಚಾಲಕರಿಗೆ ಮೊದಲ ಹಂತದಲ್ಲಿ ಪರಿಹಾರ

|

ಬೆಂಗಳೂರು, ಮೇ 31 : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಯಿತು. ಇದರಿಂದಾಗಿ ಆಟೋ ಮತ್ತು ಟ್ಯಾಕ್ಸಿ ಚಾಲಕರು ಸಂಕಷ್ಟಕ್ಕೆ ಸಿಲುಕಿದರು. ಕರ್ನಾಟಕ ಸರ್ಕಾರ ಇವರ ನೆರವಿಗಾಗಿ 5 ಸಾವಿರ ರೂ. ಪರಿಹಾರ ವಿತರಣೆ ಮಾಡುವುದಾಗಿ ಘೋಷಣೆ ಮಾಡಿತು.

   ರೈತರಿಗೆ ಯಾವುದೇ ರೀತಿಯ ಮೋಸವಾಗದಂತೆ ನೋಡಿಕೊಳ್ಳಲು ಪಣ ತೊಟ್ಟಿರುವೆ - BC Patil | Farmers

   ಸರ್ಕಾರದದಿಂದ ನೀಡುವ 5 ಸಾವಿರ ರೂ. ಪರಿಹಾರ ಪಡೆಯಲು ಇದುವರೆಗೂ 1.77 ಲಕ್ಷ ಅರ್ಜಿಗಳು ಬಂದಿವೆ. ಮೊದಲ ಹಂತದ ಪರಿಹಾರವನ್ನು ಎರಡು ದಿನದಲ್ಲಿ ಬಿಡುಗಡೆ ಮಾಡಲು ಸಾರಿಗೆ ಇಲಾಖೆ ಮುಂದಾಗಿದೆ. ಚಾಲಕರ ಬ್ಯಾಂಕ್ ಖಾತೆಗೆ ಹಣ ನೇರವಾಗಿ ಜಮೆಯಾಗಲಿದೆ.

   ಆಟೋ, ಟ್ಯಾಕ್ಸಿ ಚಾಲಕರು 5 ಸಾವಿರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

   ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ ಈ ಪರಿಹಾರ ಸಿಗಲಿದೆ. ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಇದು ಅನ್ವಯವಾಗುವುದಿಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇವಾ ಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

   5 ಸಾವಿರ ಪರಿಹಾರ ಪಡೆಯಲು ಆಟೋ, ಟ್ಯಾಕ್ಸಿ ಚಾಲಕರಿಗೆ ಅರ್ಹತೆಗಳು

   ಮೇ 22ರಿಂದ ಚಾಲಕರು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಮೊದಲ ಹಂತದ ಪರಿಹಾರ ಹಣ ಬಿಡುಗಡೆ ಮಾಡಲು ಸಾರಿಗೆ ಇಲಾಖೆ ಮುಂದಾಗಿದೆ. ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪರಿಹಾರ ಚಾಲಕರ ಕೈ ಸೇರಲಿದೆ.

   ಇನ್ನು ಯಾರಿಗೂ ಕೊರೊನಾ ಪರಿಹಾರ ಪ್ಯಾಕೇಜ್ ಇಲ್ಲ ಎಂದ ಯಡಿಯೂರಪ್ಪ!

   20 ಕೋಟಿ ಹಣ ಬಿಡುಗಡೆ

   20 ಕೋಟಿ ಹಣ ಬಿಡುಗಡೆ

   ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ. ಪರಿಹಾರ ನೀಡಲು ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಗೆ 20 ಕೋಟಿ ರೂ. ಬಿಡುಗಡೆ ಮಾಡಿದೆ. ತಲಾ 5 ಸಾವಿರದಂತೆ 40 ಸಾವಿರ ಚಾಲಕರಿಗೆ ಮೊದಲ ಹಂತದಲ್ಲಿ ಪರಿಹಾರ ಬಿಡುಗಡೆ ಮಾಡಲಾಗುತ್ತದೆ.

   ಬ್ಯಾಂಕ್ ಖಾತೆಗೆ ನೇರವಾಗಿ ಜಮೆ

   ಬ್ಯಾಂಕ್ ಖಾತೆಗೆ ನೇರವಾಗಿ ಜಮೆ

   ಚಾಲಕರು ಅರ್ಜಿಗಳನ್ನು ಸಲ್ಲಿಸುವಾಗ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಿದ್ದಾರೆ. ಡಿಬಿಟಿ ಮೂಲಕ ಫಲಾನುಭವಿಯ ಬ್ಯಾಂಕ್ ಖಾತೆಗೆ ಪರಿಹಾರವನ್ನು ನೇರವಾಗಿ ಜಮೆ ಮಾಡಲಾಗುತ್ತದೆ.

   ಅರ್ಜಿಯ ಸ್ಥಿತಿ ತಿಳಿದುಕೊಳ್ಳಿ

   ಅರ್ಜಿಯ ಸ್ಥಿತಿ ತಿಳಿದುಕೊಳ್ಳಿ

   ಪರಿಹಾರ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಹಾಕುವಾಗ ಮೊಬೈಲ್ ನಂಬರ್ ನಮೂದಿಸಿದ್ದರೆ ಅದಕ್ಕೆ ಬರುವ ಒಟಿಪಿ ಮೂಲಕ ಅರ್ಜಿಯ ಸ್ಥಿತಿಯನ್ನು ತಿಳಿದುಕೊಳ್ಳಬಹುದು ಎಂದು ಸಾರಿಗೆ ಇಲಾಖೆ ಹೇಳಿದೆ.

   4 ಹಂತದಲ್ಲಿ ಅರ್ಜಿ ಸಲ್ಲಿಕೆ

   4 ಹಂತದಲ್ಲಿ ಅರ್ಜಿ ಸಲ್ಲಿಕೆ

   ಸೇವಾ ಸಿಂಧು ಪೋರ್ಟಲ್‌ನಲ್ಲಿ ಒಟ್ಟು 4 ಹಂತದಲ್ಲಿ ಪರಿಹಾರವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಲ್ಲಿ ಕೇಳುವ ಮಾಹಿತಿಯನ್ನು ಸ್ಪಷ್ಟವಾಗಿ ಭರ್ತಿ ಮಾಡಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.

   English summary
   After Karnataka government announced Rs 5000 for auto-rickshaw and taxi drivers 1.77 lakh drivers submitted applications. 40 thousand drivers will get compensation in 1st phase.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X