ಮಾರ್ನಿಂಗ್ ವಾಕ್ vs ಈವಿನಿಂಗ್ ವಾಕ್: ಯಾವುದು ಉತ್ತಮ?
ನಾವು ಆರೋಗ್ಯವಾಗಿರಲು ದೈಹಿಕ ಚಟುವಟಿಕೆಗಳನ್ನು ಮಾಡುವುದು ಅಗತ್ಯವಾಗಿರುತ್ತದೆ. ಈ ಹಿನ್ನಲೆಯಲ್ಲಿ ಹಲವರು ತಮ್ಮ ದಿನನಿತ್ಯದ ವ್ಯಾಯಾಮಗಳಲ್ಲಿ ವಾಕಿಂಗ್ ಕೂಡ ಒಂದಾಗಿದೆ. ಕೆಲವರು ವಾಕಿಂಗ್ ಸಮಯವನ್ನು ಬೆಳಿಗ್ಗೆ ಆಯ್ಕೆ ಮಾಡಿಕೊಂಡರೆ, ಇನ್ನು ಕೆಲವರು ಸಂಜೆ ಸಮಯವನ್ನು ಆಯ್ಕೆ ಮಾಡಿಕೊಳ್ಳತ್ತಾರೆ. ಆದರೆ ವಾಕಿಂಗ್ ಮಾಡಲು ಯಾವ ಸಮಯ ಸೂಕ್ತ ಎಂಬ ಪ್ರಶ್ನೆ ಎದುರಾಗುತ್ತದೆ. ತಜ್ಞರ ಪ್ರಕಾರ ಬೆಳಿಗ್ಗೆ ಅಥವಾ ಸಂಜೆ ಯಾವ ಸಮಯದಲ್ಲಿ ವಾಕಿಂಗ್ ಮಾಡಿದರು ನಮ್ಮ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಬೀರುತ್ತದೆ. ಮುಖ್ಯವಾಗಿ ವ್ಯಕ್ತಿಯ ಆರೋಗ್ಯ ಸ್ಥಿತಿ ಮತ್ತು ದಿನಚರಿಯನ್ನು ಗಮನದಲ್ಲಿಟ್ಟುಕೊಂಡು ಸಮಯ ಆಯ್ಕೆ ಮಾಡಿಕೊಳ್ಳುವುದು ಉತ್ತಮ.
ಬೆಳಿಗ್ಗೆ ವಾಕಿಂಗ್ ಮಾಡುವುದರಿಂದ ಹೃದಯದ ಆರೋಗ್ಯಕ್ಕೆ ಬಹಳ ಉಪಯುಕ್ತವಾಗಿದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ತೂಕ ಇಳಿಕೆಗೆ ಸಹಕಾರಿಯಾಗಿದ್ದು, ದಿನವಿಡೀ ಚುರುಕಾಗಿ ಇರಲು ನೆರವಾಗುತ್ತದೆ. ಬೆಳಗಿನ ಸೂರ್ಯನ ಕಿರಣಗಳಿಂದ ನೈಸರ್ಗಿಕವಾಗಿ ವಿಟಮಿನ್ ಡಿ ದೊರೆಯುತ್ತದೆ. ಇದರಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆ ಮತ್ತು ಒತ್ತಡ ಕಡಿಮೆಯಾಗುತ್ತದೆ. ತಜ್ಞರ ಪ್ರಕಾರ ಬೆಳಗಿನ ನಡಿಗೆಯು ನಮ್ಮ ದೇಹದಲ್ಲಿ ಹಾರ್ಮೋನುಗಳನ್ನು ಹೆಚ್ಚಿಸಿ ಮನಸ್ಸಿನ ಮನೋಭಾವವನ್ನು ಉತ್ತಮಗೊಳಿಸುತ್ತದೆ.

ಇನ್ನೊಂದೆಡೆ ಸಂಜೆ ನಡಿಗೆಯೂ ತನ್ನದೇ ಆದ ಪ್ರಯೋಜನಗಳನ್ನು ಹೊಂದಿದೆ. ದಿನವಿಡೀ ಕೆಲಸದಿಂದ ಉಂಟಾಗುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಇದು ಸಹಕಾರಿ. ರಾತ್ರಿ ಉತ್ತಮ ನಿದ್ರೆ ಪಡೆಯಲು ಸಂಜೆ ನಡಿಗೆ ಸಹಾಯ ಮಾಡುತ್ತದೆ. ವಿಶೇಷವಾಗಿ ಊಟದ ನಂತರ ಸ್ವಲ್ಪ ಹೊತ್ತು ನಡೆಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಜೊತೆಗೆ ದಿನದ ಅಂತ್ಯದಲ್ಲಿ ಸ್ನಾಯುಗಳ ಶಕ್ತಿ ಹೆಚ್ಚಾಗಿರುವುದರಿಂದ ದೈಹಿಕ ಕಾರ್ಯಕ್ಷಮತೆ ಕೂಡ ಉತ್ತಮವಾಗಿರುತ್ತದೆ.
ಇದಲ್ಲದೆ ವಾಕಿಂಗ್ ಮಾಡುವಾಗ ಕೆಲವು ಸರಳ ನಿಯಮಗಳನ್ನು ಪಾಲಿಸುವುದೂ ಅಗತ್ಯವಾಗಿದೆ. ಆರಾಮದಾಯಕವಾದ ಪಾದರಕ್ಷೆಗಳನ್ನು ಧರಿಸುವುದು, ಸರಿಯಾದ ಭಂಗಿಯಲ್ಲಿ ನಡೆಯುವುದು ಮತ್ತು ಆರಂಭದಲ್ಲಿ ನಿಧಾನವಾಗಿ ನಡೆದು ನಂತರ ವೇಗ ಹೆಚ್ಚಿಸಿಕೊಳ್ಳವುದು ಉತ್ತಮ. ನೀರು ಕುಡಿಯುವುದನ್ನು ಮರೆಯಬಾರದು ಮತ್ತು ವಿಶೇಷವಾಗಿ ದೀರ್ಘ ಕಾಲ ನಡೆಯುವವರು ಇದನ್ನು ಗಮನಿಸಬೇಕು. ಜೊತೆಗೆ ಸರಿಯಾದ ಮತ್ತು ನಿಗದಿತ ಸಮಯದಲ್ಲಿ ವಾಕಿಂಗ್ ಮಾಡುವ ಅಭ್ಯಾಸ ಬೆಳೆಸಿಕೊಳ್ಳುವುದರಿಂದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆರೋಗ್ಯಕರ ಜೀವನಶೈಲಿಗೆ ವಾಕಿಂಗ್ ಒಂದು ಸರಳ ಆದರೆ ಪರಿಣಾಮಕಾರಿ ಮಾರ್ಗವಾಗಿದೆ.
ಒಟ್ಟಿನಲ್ಲಿ ಬೆಳಿಗ್ಗೆ ಅಥವಾ ಸಂಜೆ ವಾಕಿಂಗ್ ಎರಡೂ ಆರೋಗ್ಯಕ್ಕೆ ಒಳ್ಳೆಯದೇ. ಯಾವ ಸಮಯದಲ್ಲಿ ವಾಕಿಂಗ್ ಮಾಡಬೇಕು ಎಂಬುದು ವ್ಯಕ್ತಿಯ ಅನುಕೂಲತೆ ಮತ್ತು ಅವಶ್ಯಕತೆಗಳ ಮೇಲೆ ಅವಲಂಬಿತವಾಗಿದೆ. ಮುಖ್ಯವಾಗಿ ಪ್ರತಿದಿನ ಕನಿಷ್ಠ 30 ನಿಮಿಷ ವಾಕಿಂಗ್ ಮಾಡುವ ಅಭ್ಯಾಸ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ. ಇದು ದೇಹದ ಫಿಟ್ನೆಸ್ನ್ನು ಹೆಚ್ಚಿಸುವುದರ ಜೊತೆಗೆ ಮನಸ್ಸಿನ ಆರೋಗ್ಯವನ್ನೂ ಕಾಪಾಡುತ್ತದೆ.
-
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ














Click it and Unblock the Notifications