ಕೋಮು ಗಲಭೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಕೋಮು ಗಲಭೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಎರಡನೇ ಸ್ಥಾನ. ಲೋಕಸಭೆಗೆ ಕೇಂದ್ರ ಗೃಹ ಸಚಿವಾಲಯದ ನೀಡಿರುವ ಮಾಹಿತಿಯಲ್ಲಿ ಬಹಿರಂಗ. ಈ ವರ್ಷದ ಆರಂಭದಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ 36 ಪ್ರಕರಣಗಳು ದಾಖಲು.

ನವದೆಹಲಿ, ಆಗಸ್ಟ್ 12: ಇದೇ ವರ್ಷ ಜನವರಿಯಿಂದ ಮೇ ತಿಂಗಳ ಅವಧಿಯಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನ ಗಳಿಸಿದೆ. ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ, ರಾಜ್ಯಸಭೆಗೆ ಸಲ್ಲಿಸಿದ ತನ್ನ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ.

2016ರಲ್ಲಿ 101 ಪ್ರಕರಣಗಳು ದಾಖಲಾಗಿದ್ದವು. ಈ ವರ್ಷದ ಮೊದಲ ಐದು ತಿಂಗಳಲ್ಲಿ 36 ಕೋಮು ಗಲಭೆ ಪ್ರಕರಣಗಳು ದಾಖಲಾಗಿವೆ.

Most Communal Violence: Karnataka in second place

ಈ ಪಟ್ಟಿಯಲ್ಲಿ, ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದ್ದು, ಅತಿ ಹೆಚ್ಚು ಕೋಮು ಗಲಭೆ ಹಾಗೂ ಹಿಂಸಾಚಾರ ಪ್ರಕರಣಗಳು ನಡೆದ ರಾಜ್ಯವೆಂಬ ಕುಖ್ಯಾತಿಗೆ ಪಾತ್ರವಾಗಿದೆ. ಈ ವರ್ಷದ ಮೊದಲಾರ್ಧದಲ್ಲಿ (ಮೇ ತಿಂಗಳವರೆಗೆ) 60 ಕೋಮು ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.

ಗೃಹ ಇಲಾಖೆಯ ವರದಿಯ ಪ್ರಕಾರ, ಕಳೆದ ಮೂರು ವರ್ಷಗಳು ಹಾಗೂ ಈ ವರ್ಷದ ಮೇ ತಿಂಗಳವರೆಗೆ ಭಾರತದಾದ್ಯಂತ ಸುಮಾರು 296 ಕೋಮು ಹಿಂಸಾಚಾರ ಪ್ರಕರಣಗಳು ನಡೆದಿದ್ದು, ಇದರಲ್ಲಿ 322 ಮಂದಿ ಸಾವಿಗೀಡಾದ್ದರೆ, 7,398 ಮಂದಿ ಗಾಯಗೊಂಡಿದ್ದಾರೆ.

2014ರಲ್ಲಿ 644 ಕೋಮು ಹಿಂಸಾಚಾರ ಘಟನೆಗಳು ನಡೆದಿದ್ದವು. 2015ರಲ್ಲಿ ಇವುಗಳ ಪ್ರಮಾಣ 751ರಷ್ಟಿತ್ತು. 2016ರಲ್ಲಿ 703 ಪ್ರಕರಣಗಳು ದಾಖಲಾಗಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+