ಮೋಟಾರು ವಾಹನ ತಿದ್ದುಪಡಿ ಕಾಯ್ದೆ; ರಾಜ್ಯದಿಂದ ಅಧಿಸೂಚನೆ

Recommended Video

      ಮೋಟಾರು ವಾಹನ ತಿದ್ದುಪಡಿ ಕಾಯ್ದೆ ರಾಜ್ಯದಿಂದ ಅಧಿಸೂಚನೆ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 04 : ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಕರ್ನಾಟಕದಲ್ಲಿಯೂ ಅಧಿಕೃತವಾಗಿ ಜಾರಿಗೆ ಬಂದಿದೆ. ಕರ್ನಾಟಕ ಸರ್ಕಾರ ವಿಶೇಷ ಗೆಜೆಟ್ ಮೂಲಕ ಈ ಕುರಿತು ಅಧಿಸೂಚನೆಯನ್ನು ಹೊರಡಿಸಿದೆ.

      ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಆಗಸ್ಟ್ 9ರಂದು ಕೇಂದ್ರ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿತ್ತು.

      Motor Vehicles Amendment Act : Gazette Notification By Karnataka govt

      ಕುಡಿದು ವಾಹನ ಚಲಾಯಿಸಿದರೆ 10 ಸಾವಿರ, ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಿದರೆ 5 ಸಾವಿರ, ಲೈಸೆನ್ಸ್ ಇಲ್ಲದೆ ಗಾಡಿ ಓಡಿಸಿದರೆ 5 ಸಾವಿರ, ಹೆಲ್ಮೆಟ್‌ ಇಲ್ಲದೇ ಬೈಕ್ ಓಡಿಸಿದರೆ 1 ಸಾವಿರ ಸೇರಿದಂತೆ ವಿವಿಧ ಪ್ರಕರಣಗಳಿಗೆ ಹೆಚ್ಚು ದಂಡ ವಿಧಿಸಲಾಗುತ್ತದೆ.

      ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸುವ ಮೊದಲೇ ಇಂಡಿಯ ಜೆಎಂಎಫ್‌ಸಿ ನ್ಯಾಯಾಲಯ ಕುಡಿದು ವಾಹನ ಚಾಲನೆ ಮಾಡಿದ ಇಬ್ಬರಿಗೆ ಹೊಸ ದಂಡದ ಅನ್ವಯ 10 ಸಾವಿರ ದಂಡ ವಿಧಿಸಿದೆ. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ, ಕುಡಿದು ವಾಹನ ಚಲಾಯಿಸಿದ್ದೆ ಎಂದು ಇಬ್ಬರು ತಪ್ಪೊಪ್ಪಿಕೊಂಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+