ವಲಸಿಗರನ್ನು ಕರೆ ತರಲು ಮೊದಲ ಹೆಜ್ಜೆ ಇಟ್ಟ ಕರ್ನಾಟಕ
ಬೆಂಗಳೂರು, ಮೇ 01 : ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಸಿಲುಕಿದ್ದಾರೆ. ಬೇರೆ-ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಮಿಕರು ಇದ್ದಾರೆ. ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ.
Recommended Video
ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ವಿವಿಧ ರಾಜ್ಯಗಳ ಜೊತೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಇಬ್ಬರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ.
ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳ ಪ್ರಯಾಣಕ್ಕೆ ಅವಕಾಶ ನೀಡಿದೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಹಲವರು ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿದ್ದಾರೆ. ವಿವಿಧ ರಾಜ್ಯಗಳು ಈ ಪ್ರಕ್ರಿಯೆಯನ್ನು ಆರಂಭಿಸಿವೆ.

ನೋಡಲ್ ಅಧಿಕಾರಿಗಳು ವಿವಿಧ ರಾಜ್ಯಗಳಲ್ಲಿ ಸಿಲುಕಿರುವ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳನ್ನು ಕರೆತರಲು ಸೂಕ್ತ ವ್ಯವಸ್ಥೆ ಕಲ್ಪಿಸಲಿದ್ದಾರೆ. ಸಾರಿಗೆ ಸಂಸ್ಥೆಗಳ ಜೊತೆ ಚರ್ಚಿಸಿ ಬಸ್ ವ್ಯವಸ್ಥೆ ಮಾಡಲಿದ್ದಾರೆ.
ಅಧಿಕಾರಿಗಳ ವಿವರ: ಐಎಎಸ್ ಅಧಿಕಾರಿ ಡಾ. ರಾಜ್ ಕುಮಾರ್ ಕತ್ರಿ ಮತ್ತು ಐಪಿಎಸ್ ಅಧಿಕಾರಿ ಅರುಣ್ ಜೇಜಿ ಚಕ್ರವರ್ತಿ ಹೊರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸಿಲುಕಿರುವ ರಾಜ್ಯದ ಜನರನ್ನು ಕರೆತರುವ ವ್ಯವಸ್ಥೆ ನೋಡಿಕೊಳ್ಳಲಿದ್ದಾರೆ.
ಐಎಎಸ್ ಅಧಿಕಾರಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಐಪಿಎಸ್ ಅಧಿಕಾರಿ ಪಿ. ಎಸ್. ಸಂಧು ಕರ್ನಾಟಕದಿಂದ ಹೊರ ರಾಜ್ಯ/ಕೇಂದ್ರಾಡಳಿತ ಪ್ರದೇಶಕ್ಕೆ ಹೋಗುವ ಜನರ ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ.
ಒಟ್ಟು 10 ರಾಜ್ಯಗಳ ಉಸ್ತುವಾರಿಯನ್ನು ಕರ್ನಾಟಕ ಸರ್ಕಾರ ಅಧಿಕಾರಿಗಳಿಗೆ ನೀಡಿದೆ. ಪ್ರತಿ ರಾಜ್ಯಕ್ಕೆ ಒಬ್ಬರು ಐಎಎಸ್ ಮತ್ತು ಒಬ್ಬರು ಐಎಎಸ್ ಅಧಿಕಾರಿಗಳು ಉಸ್ತುವಾರಿಯಾಗಿದ್ದಾರೆ.












Click it and Unblock the Notifications