ಬೆಳೆ ಪರಿಹಾರ: ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ
ಬೆಂಗಳೂರು, ನವೆಂಬರ್ 20: ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ ವಿಪರೀತ ಮಳೆ ಬಿದ್ದು ರಾಜ್ಯದ ಬಹುತೇಕ ಬೆಳೆಗಳು ನಾಶವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ರೈತರಿಗೆ ಎರಡು ವರ್ಷವೂ ಕೂಡ ನಷ್ಟವಾಗಿದ್ದು ಮೆಕ್ಕೆಜೋಳ, ಸೊಯಾಬಿನ್, ಹೆಸರು, ಈರುಳ್ಳಿ ಬೆಳೆ ನಾಶವಾಗಿದೆ. ಕಳೆದ ವರ್ಷ ಮಳೆಯಿಂದ ನಷ್ಟವಾದ ಬೆಳೆಗೆ ಯಾವುದೇ ಪರಿಹಾರ ಸಿಕ್ಕಿರುವುದಿಲ್ಲ. ಮೊನ್ನೆ ತಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿಯನ್ನು ಸಲ್ಲಿಸಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಆದರೆ, ವಾಸ್ತವಾಂಶ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ.

ಬೆಳೆ ನಷ್ಟ ಪರಿಹಾರ ಸರ್ವೆ ಕಾರ್ಯ ಸಮರ್ಪಕವಾಗಿ ನ್ಯಾಯ ಸಮ್ಮತವಾಗಿ ನಡೆದಿರುವುದಿಲ್ಲ. ಕೃಷಿ, ಕಂದಾಯ ಮತ್ತು ಸಾಂಖಿಕ ಇಲಾಖೆ ಅಧಿಕಾರಿಗಳು ವ್ಯಾಪಕವಾಗಿ ರೈತರ ಜಮೀನಿನಲ್ಲಿ ಪರೀಕ್ಷೆ ಮಾಡದೇ ಸರ್ಕಾರಕ್ಕೆ ವರದಿ ಸಲ್ಲಿಸಿರುತ್ತಾರೆ. ಇದರ ಪರಿಣಾಮವಾಗಿ ಹಲವಾರು ತಾಲೂಕುಗಳಲ್ಲಿ ಒಟ್ಟು ಬಿತ್ತನೆಯಾದ ಪ್ರದೇಶದ ಶೇ 10 % ರಷ್ಟು ಬೆಳೆ ನಾಶ ಆಗಿಲ್ಲ ಎನ್ನುವ ವರದಿ ಬಂದಿದೆ. ಇದು ಸತ್ಯಕ್ಕೆ ದೂರವಾಗಿರುವಂಥದ್ದು ಕೆಲವು ತಾಲೂಕುಗಳಲ್ಲಿ ನಷ್ಟವೇ ಆಗಿಲ್ಲ ಎನ್ನುವುದು ಸತ್ಯಕ್ಕೆ ದೂರವಾಗಿದೆ. ಉದಾಹರಣೆಗೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಸಾಕಷ್ಟು ಬೆಳೆ ನಷ್ಟವಾಗಿದ್ದರೂ ನಷ್ಟವಾಗಿಲ್ಲ ಎಂದು ವರದಿ ನೀಡಿದ್ದಾರೆ. ರಾಜ್ಯಾದ್ಯಂತ ಇದನ್ನು ಕೂಡಲೇ ಸರಿಪಡಿಸಬೆಕು ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೆಕ್ಕೆಜೋಳ ಖರೀದಿಗೆ ನಿರ್ದೇಶನ ನೀಡಿ
ರಾಜ್ಯದಲ್ಲಿ ಮೆಕ್ಕೆ ಜೋಳ ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದು ಕಳೆದ ವರ್ಷ 54 ಲಕ್ಷ ಮೆಟ್ರಿಕ್ ಟನ್ ಬಂದಿದ್ದು, ಈ ವರ್ಷವೂ ಅಷ್ಟೇ ಉತ್ಪನ್ನ ಬರುವ ನಿರೀಕ್ಷೆ ಇದೆ. ಈ ವರ್ಷ ಮೆಕ್ಕೆಜೋಳದ ಬೆಲೆ ಸಂಪೂರ್ಣ ಕುಸಿದಿದೆ. ಅದು ಪ್ರತಿ ಕ್ವಿಂಟಾಲ್ ಗೆ 1600 ರೂ. ಗೆ ಇಳಿದಿರುವುದು ರೈತರಿಗೆ ಆಘಾತ ತಂದಿದೆ. ಕೇಂದ್ರ ಸರ್ಕಾರ ಈಗಾಗಲೇ ಎಂಎಸ್ ಪಿ 2400 ರೂ. ಘೋಷಣೆ ಮಾಡಿದೆ. ರೈತರು ಇದರ ಮೇಲೆ ರಾಜ್ಯ ಸರ್ಕಾರ ಕನಿಷ್ಠ 500 ರೂ. ಪ್ರತಿ ಕ್ವಿಂಟಾಲ್ ಗೆ ಕೊಡಬೇಕೆಂದು ಎಲ್ಲ ಜಿಲ್ಲೆಗಳಲ್ಲಿ ಆಗ್ರಹಿಸುತ್ತಿದ್ದಾರೆ.
ಈ ಹಿಂದೆ ಕೇಂದ್ರ ಸರ್ಕಾರದ ನಿರ್ದೆಶನಕ್ಕೆ ಕಾಯದೇ ಮೆಕ್ಕೆ ಜೋಳ ಖರೀದಿಸಿ ಅದು ಹಾಳಾಗದೇ ಇರುವ ಬೆಳೆ ಇರುವುದರಿಂದ ಸೂಕ್ತ ಮಾರುಕಟ್ಟೆ ದರ ಹೆಚ್ಚಾದಾಗ ರಾಜ್ಯ ಸರ್ಕಾರ ಮಾರಬಹುದು. ನಂತರ ಕೇಂದ್ರಕ್ಕೆ ವರದಿ ಕಳುಹಿಸಬಹುದು. ಈ ಬಗ್ಗೆ ಕೂಡಲೆ ಒಂದು ನಿರ್ಧಾರ ಮಾಡಿ ಖರೀದಿಗೆ ಸೂಕ್ತ ನಿರ್ದೇಶನ ನೀಡಲು ವಿನಂತಿಸಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications