ಕೋಟಾ ಶ್ರೀನಿವಾಸ್ ಪೂಜಾರಿಗೆ ಮಹತ್ವದ ಹುದ್ದೆ ನೀಡಿದ ಬಿಜೆಪಿ ಹೈಕಮಾಂಡ್‌

ಬೆಂಗಳೂರು, ಜುಲೈ 30: ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಹೋಗಿರುವ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಬಿಜೆಪಿ ಹೈಕಮಾಂಡ್‌ ಮಹತ್ವದ ಹುದ್ದೆಯನ್ನ ನೀಡಿದ್ದು, ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ್ ಪೂಜಾರಿ ಧನ್ಯವಾದ ತಿಳಿಸಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿಯು ಲೋಕಸಭೆಯ ಮುಖ್ಯ ಸಚೇತಕ ಹಾಗೂ ಸಚೇತಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಲೋಕಸಭೆಯಲ್ಲಿ ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಮಂದಿಯನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಅವರು ಸೋಮವಾರ (ಜುಲೈ 29) ಆದೇಶ ಹೊರಡಿಸಿದ್ದಾರೆ. ಈ 16ರ ಪೈಕಿ ಕರ್ನಾಟಕ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೂ ಸ್ಥಾನ ಸಿಕ್ಕಿದೆ.

MP kota srinivas poojary appointed as Loksabha Whip

ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿದ್ದು, ಡಾ ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರನ್ನಾಗಿ ನೇಮಿಸಲಾಗಿದೆ. 16 ಜನರ ಸಚೇತಕರ ಪೈಕಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಾನ ಸಿಕ್ಕಿದೆ. ಈ ಮೂಲಕ ಬಿಜೆಪಿ ಹೈಕಮಾಂಡ್‌ ಕೋಟ ಶ್ರೀನಿವಾಸ್ ಪೂಜಾರಿ ಅವರು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಹುದ್ದೆಯನ್ನ ನೀಡುವ ಮೂಲಕ ಮತ್ತೊಂದು ಹಂತದ ಮೇಲಕ್ಕೆ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಹೋಗಿದ್ದಾರೆ.

ಇನ್ನು ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ್ ಪೂಜಾರಿ ಧನ್ಯವಾದ ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ , ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಅಭಿನಂದನೆಗಳು. ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಶ್ರೀನಿವಾಸ್ ಪೂಜಾರಿ ಅವರು ಲೋಕಸಭೆಯ ಸಚೇತಕರಾಗಿಯು ಉತ್ತಮವಾಗಿ ಜವಾಬ್ದಾರಿ ನಿರ್ವಹಿಸುವರೆಂಬ ವಿಶ್ವಾಸದೊಂದಿಗೆ ಶುಭ ಹಾರೈಸುವೆ ಎಂದು ಬರೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+