ಆಪರೇಷನ್ ಹಸ್ತದಿಂದ ಕಮಲದಳ ನಾಯಕರಿಗೆ ಶಾಕ್;ಕಾಂಗ್ರೆಸ್‌ನತ್ತ ರಾಮಪ್ಪ ಲಮಾಣಿ, ಎಂಪಿ ಕುಮಾರಸ್ವಾಮಿ !
ಬೆಂಗಳೂರು, ಅಕ್ಟೋವರ್ 12: 2024 ರ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ನ ಆಪರೇಷನ್ ಹಸ್ತದ ಮೂಲಕ ಹಲವು ನಾಯಕರಿಗೆ ಗಾಳ ಹಾಕಿದ್ದು, ಲೋಕಸಮರಕ್ಕೆ ಸಿದ್ದತೆ ನಡೆಸಿರುವ ಕಮಲದಾಳ ನಾಯಕರಿಗೆ ಕಾಂಗ್ರೆಸ್ ನಾಯಕರು ಬಿಗ್ ಶಾಕ್ ನೀಡಿದೆ.
ಹೌದು, ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತ ವೇಗ ಪಡೆದುಕೊಂಡಿದೆ. ಬಿಜೆಪಿಯ ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಚಿತ್ತನೆಟ್ಟಿದ್ದು, ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಿರಹಟ್ಟಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಮಪ್ಪ ಲಮಾಣಿ ಅವರು, ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದರು. ಇನ್ನೂ ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆಗೆ ಮೈತ್ರಿಯಾದ ಹಿನ್ನೆಲೆ ಹಲವು ನಾಯಕರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಇದೀಗ ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.
ಇನ್ನೂ ಮೂಡಿಗೆರೆ ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ ಕೂಡಾ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಅವರು, ಇದೀಗ ಮೈತ್ರಿಯಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಮುಂದಾಗಿದ್ದಾರೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆಪರೇಷನ್ ಹಸ್ತದ ಮೂಲಕ ಮಾಜಿ ಬಿಜೆಪಿ ಶಾಸಕ ರಾಮಪ್ಪ ಲಾಮಣಿಯವರಿಗೆ ಗಾಳ ಹಾಕಿದ್ದಾರೆ.
ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಾಮಪ್ಪ ಲಮಾಣಿ ಹಾಗೂ ಎಂಪಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಮಾಜಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕೂಡಾ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪರೇಷನ್ ಹಸ್ತ ಸಕ್ಸಸ್ ಆಗಿದ್ದು, ಪೂರ್ಣಿಮಾ ಶ್ರೀನಿವಾಸ್ ಸಹ ಅಕ್ಟೋಬರ್ 20 ರಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಆಗಲಿದ್ದಾರೆ.
ಇನ್ನು ಬಿಜೆಪಿ ಮಾಜಿ ಶಾಸಕರ ಆಪರೇಷನ್‌ನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರಯತ್ನ ಎದ್ದು ಕಾಣಿಸುತ್ತಿದೆ. ಬಿಜೆಪಿಯಲ್ಲಿ ಇರುವ ಅತೃಪ್ತರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡುವಲ್ಲಿ ಅವರು ಪ್ರಮುಖ ಪಾತ್ರವನ್ನು ನಿರ್ವಹಣೆ ಮಾಡುತ್ತಿದ್ದಾರೆ. ಈಗಾಗಲೇ 20 ಕ್ಕೂ ಅಧಿಕ ಮಂದಿ ನನ್ನ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು. ಇದೀಗ ಆಂತರಿಕವಾಗಿ ಬಿಜೆಪಿಯ ಅತೃಪ್ತರ ಜೊತೆಗೆ ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ನಡೆಯುತ್ತಿರುವ ಆಪರೇಷನ್ ಹಸ್ತದಿಂದ ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವು ಎದುರಾಗಿದೆ












Click it and Unblock the Notifications