ಕಾಡಾನೆ ಹಾವಳಿ ತಡೆಯಲು ಹಾಸನದಿಂದ ದೆಹಲಿಗೆ ನಿಯೋಗ : ಪ್ರಜ್ವಲ್‌ ರೇವಣ್ಣ

ಹಾಸನ, ಡಿಸೆಂಬರ್ 9: ಕಾಡಾನೆ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಮನವಿ ಸಲ್ಲಿಸಲು ಜನಪ್ರತಿನಿಧಿಗಳ ತಂಡದೊಂದಿಗೆ ದೆಹಲಿಗೆ ನಿಯೋಗ ಕರೆದೊಯ್ಯಲಾಗುವುದು ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ.

ಈ ಕುರಿತು ಶುಕ್ರವಾರ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯದ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ತಂಡ ಕಾಡಾನೆ ಹಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಸಭೆ ನಡೆಸಿ ಜನರ ಅಹವಾಲುಗಳನ್ನು ಆಲಿಸಿದೆ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲು ರಾಜ್ಯ ಹಾಗೂ ಕೇಂದ್ರ ಸರಕಾರಗಳು ವಿಫಲವಾಗಿವೆ. ಜನರ ಕಣ್ಣೊರೆಸುವುದಕ್ಕಾಗಿ ಇದೀಗ ಆನೆ ಟಾಸ್ಕ್‌ ಪೋರ್ಸ್‌ ಎಂಬ ಹೆಚ್ಚುವರಿ ವಿಭಾಗವನ್ನು ಪ್ರಾರಂಭಿಸಲಾಗಿದೆ ಎಂದು ಆರೋಪಿಸಿದರು.

ಹಾಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಯಾವು ಕೆಲಸ ಮಾಡುತ್ತಿದ್ದಾರೋ ಅದೇ ಕೆಲಸ ಟಾಸ್ಕ್‌ ಪೋರ್ಸ್‌ ಮಾಡುತ್ತದೆ. 5 ಹೆಚ್ಚುವರಿ ವಾಹನಗಳನ್ನು ನೀಡಿರುವುದೇ ಸಾಧನೆಯೆ ಎಂದು ಪ್ರಶ್ನಿಸಿದರು.

Mp Prajwal Revanna Speaks About Wild Elephant Attack In Hasana District

ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ರಾಜ್ಯ ಸರಕಾರದಿಂದ ಸಾಧ್ಯವಿಲ್ಲ. ಈ ಕಾರಣಕ್ಕೆ ಕೇಂದ್ರ ಪರಿಸರ ಸಚಿವರ ಬಳಿ ನಿಯೋಗ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದರು.

ಸ್ಥಳೀಯ ಶಾಸಕ ಎಚ್‌ಕೆ ಕುಮಾರಸ್ವಾಮಿ, ಬೇಲೂರು, ಅರಕಲಗೂಡು ಶಾಸಕರು ಹಲವು ಬಾರಿ ವಿಧಾನಸಭೆಯಲ್ಲಿ ಕಾಡಾನೆ ಸಮಸ್ಯೆ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಿದ್ದಾರೆ. ಎಲ್ಲಾ ಸಂಘ ಸಂಸ್ಥೆಗಳು ಹಲವು ಬಾರಿ ಪ್ರತಿಭಟನೆ ನಡೆಸಿವೆ. ಸಮಸ್ಯೆಯನ್ನು ಎಲ್ಲಾ ರೀತಿಯಿಂದಲೂ ಸರಕಾರದ ಗಮನಕ್ಕೆ ತರಲಾಗಿದೆ. ಇತ್ತೀಚೆಗೆ ರಾಜ್ಯದ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ತಂಡ ಕಾಡಾನೆ ಹಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಸಭೆ ನಡೆಸಿ ಜನರ ಅಹವಾಲುಗಳನ್ನು ಆಲಿಸಿದೆ.

ಇನ್ನೂ ಶಾಸಕ ಎಚ್‌.ಕೆ ಕುಮಾರಸ್ವಾಮಿ ಮಾತನಾಡಿ, ಅರಣ್ಯ ಇಲಾಖೆಯವರು ಮೀಸಲು ಅರಣ್ಯ ಹಾಗೂ ಡೀಮ್ಡ್‌ ಫಾರೆಸ್ಟ್‌ ನೆಪದಲ್ಲಿ ಗ್ರಾಮಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ. ದೇವಸ್ಥಾನ, ಜಮೀನುಗಳಿಗೆ ರಸ್ತೆ, ಕುಡಿಯುವ ನೀರಿನ ಪೈಪ್‌ಲೈನ್‌ ಅಳವಡಿಕೆ ಮಾಡುವುದನ್ನು ತಡೆಯಲಾಗುತ್ತಿದೆ.

Mp Prajwal Revanna Speaks About Wild Elephant Attack In Hasana District

ಹಲವು ದಶಕಗಳಿಂದ ಕೃಷಿ ಮಾಡುತ್ತಿರುವ ಜಮೀನುಗಳ ಕೆಲಸ, ರಸ್ತೆ ಮಾಡಿದರೆ ಪ್ರಕರಣ ದಾಖಲು ಮಾಡುತ್ತಿರುವುದು ಸರಿಯಲ್ಲ ಎಂದು ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ. ಗ್ರಾಮೀಣ ಭಾಗದ ಜನರ ಜತೆ ಅರಣ್ಯ ಇಲಾಖೆ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಸೂಚಿಸಿದರು.

ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ ರಚನೆಗೆ ಸರ್ಕಾರಿ ಆದೇಶ

ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಿರ್ಧರಿಸಿ, ಸರ್ಕಾರಿ ಆದೇಶ ಹೊರಡಿಸಿದ್ದು, ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು.

ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುವುದು, ಜನವಸತಿ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್ ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ ಆನೆಗಳನ್ನು ಹಿಮ್ಮೆಟ್ಟಿಸುವುದು ಮುಂತಾದ ಕಾರ್ಯಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕೈಗೊಳ್ಳಬೇಕು. ಕಾಡಾನೆ ಹಾವಳಿ ಕಂಡುಬರುವ ಸ್ಥಳಗಳಲ್ಲಿ ಆನೆಗಳ ಚಲನವಲನ ಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಅರಣ್ಯ ಪ್ರದೇಶದೊಳಗೆ ಸಂಚರಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು.

ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರಸ್ಥಾನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ದೂರವಾಣಿ ಸಂಖ್ಯೆ ಯನ್ನು ಪ್ರಚಾರ ಪಡಿಸುವುದು. ಆನೆಗಳನ್ನು ಹಿಮ್ಮೆಟ್ಟಿಸಲು ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಇನ್ನಿತರೆ ಅವಶ್ಯಕ ಸಲಕರಣೆಗಳನ್ನು ಅರಣ್ಯ ಪಡೆ ಮುಖ್ಯಸ್ಥರು ಒದಗಿಸುವುದು ಅರಣ್ಯ ಪಡೆ ಮುಖ್ಯಸ್ಥರು ಜಿಲ್ಲಾ ಟಾಸ್ಕ್ ಫೋರ್ಸ್ ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷ ಕರನ್ನು ಸ್ಥಳ ನಿಯುಕ್ತಿಗೊಳಿಸಿ ಕೂಡಲೇ ಆದೇಶ ಹೊರಡಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+