ಮೈಸೂರಿನಿಂದ ಯದುವೀರ್ ಗೆ ಬಿಜೆಪಿ ಟಿಕೆಟ್:‌ ಪ್ರತಾಪ್‌ ಸಿಂಹ ಏನಂದ್ರು?

ಮೈಸೂರು,ಮಾರ್ಚ್‌ 12: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದರಾದ ಪ್ರತಾಪ್‌ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಕೈ ತಪ್ಪಿಲಿದೆ ಎನ್ನುವ ಚರ್ಚೆ ಶುರುವಾಗಿದ್ದು, ಯದುವೀರ್ ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?ಎಂದು ವ್ಯಂಗ್ಯ ಮಾಡಿದ ಪ್ರತಾಪ್‌ ಸಿಂಹ. ರಾಜ - ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸವನ್ನ ಈ ವೇಳೆ ಪ್ರತಾಪ್‌ ಸಿಂಹ ವ್ಯಕ್ತಪಡಿಸಿದರು.

MP Pratap Simha Reaction About Lok Sabha Election Ticket To Yaduvir Wadier

ಚಾಮುಂಡಿ ಬೆಟ್ಟದ ಮೇಲಿನ ಅರಮನೆ ಆವರಣದ ಒಳಗೆ ಪೈಪ್ ಲೈನ್ ಹಾಕಲು ಅರಮನೆ ವಿರೋಧಿಸಿದೆ. ಯದುವೀರ್ ಜನಪ್ರತಿನಿಧಿ ಆದರೆ ಆ ಸಮಸ್ಯೆ ಬಗೆಹರಿಯುತ್ತದೆ, ಶ್ರೀ ರಾಜೇಂದ್ರಸ್ವಾಮೀಜಿ ಪ್ರತಿಮೆ ವಿಚಾರದಲ್ಲಿ ಅರಮನೆಯವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಯದುವೀರ್ ಈ ಸಮಸ್ಯೆ ಬಗೆಹರಿಸಿ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ಮಾಡುತ್ತಾರೆ. ಅರಮನೆ ಒಳಗೆ ಅರಾಮಾಗಿ ಇದ್ದಂತಹ ವ್ಯಕ್ತಿ ಸಿದ್ದರಾಮಯ್ಯ ವಿರುದ್ದ ಹೋರಾಟ ಮಾಡಲು ಬೀದಿಗೆ ಬಂದರೆ ನಮಗೆ ಸಂತೋಷ.

ಅರಮನೆ ವೈಭೋಗ ಬೇಕಾಗಿಲ್ಲ. ಜನರ ಜೊತೆ ಹೋರಾಟಕ್ಕೆ ಬರ್ತೀನಿ ಅಂತಾ ಹೊರಟಿದ್ದಾರೆ. ಅದಕ್ಕೆ ಸ್ವಾಗತ. ಪೊಲೀಸ್ ಠಾಣೆಗೆ ಬಂದು ನಮ್ಮ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ರಾಜರು ಬಂದರೆ ಸಂತೋಷ ಅಲ್ವಾ?
ಆಸ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದಗಳು ಎಂದ ಪ್ರತಾಪ್ ಸಿಂಹ ಹೇಳಿದರು.

ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ನನ್ನನ್ನು ಭೇಟಿ ಮಾಡಲು ಕರೆದಿದ್ದಾರೆ. ನನಗೆ ಈ ಕ್ಷಣಕ್ಕೂ ವಿಶ್ವಾಸವಿದೆ. ಸಂಘಟನೆ, ಸಿದ್ದಾಂತಕ್ಕೆ ಗಟ್ಟಿಯಾಗಿ ನಿಂತಿರುವ ನನಗೆ ಟಿಕೆಟ್ ಸಿಗುತ್ತದೆ.
25 ಸಂಸದರಲ್ಲಿ ನನ್ನಷ್ಟು ಹಿಂದುತ್ವದ ಕಮಿಟ್ ಮೆಂಟ್ ಇರುವ ಮತ್ಯಾರು ಇದ್ದಾರೆ? ಹಿಂದುತ್ವದ ವಿಚಾರದಲ್ಲಿ ನನ್ನನ್ನು ಯಾರಿಗೂ ಮ್ಯಾಚ್ ಮಾಡಲು ಆಗಲ್ಲ. ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಬಾಯಿಗೆ ಬಂದ ರೀತಿ ಟೀಕಿಸಿದ್ದಾಗ ಸಿದ್ದರಾಮಯ್ಯ ಮಾತನ್ನು ದೊಡ್ಡ ಮಟ್ಟದಲ್ಲಿ ಖಂಡಿಸುವ ವ್ಯಕ್ತಿ ಈ ಪ್ರತಾಪ್ ಸಿಂಹ. ಇದು ನನ್ನ ದೌರ್ಬಲ್ಯವಾ? ಎಂದು ಪ್ರಶ್ನಿಸಿದರು.

ಮೈಸೂರು-ಕೊಡಗು ಅಭಿವೃದ್ಧಿಗೆ ಅತಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದು ನನ್ನ ದೌರ್ಬಲ್ಯವಾ? ನನಗೆ ಪಕ್ಷ ನಿಷ್ಠೆ ಇದೆ. ಬ್ಯಾನರ್, ಬಂಟಿಂಗ್ ಕಟ್ಟಲು ನಾನು ಸಿದ್ದ, ನನಗಾಗಿ ಪಕ್ಷ, ಕಾರ್ಯಕರ್ತರು ದುಡಿದಿದ್ದಾರೆ.
ನಾನು ಮುಂದೆ ಅವರಂತೆಯೇ ದುಡಿಯುತ್ತೇನೆ ಎಂದು ಹಾಲಿ ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+