ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೌಡಿ ಬೆತ್ತನಗೆರೆ ಶಂಕರನನ್ನು ಪಕ್ಷಕ್ಕೆ ಸ್ವಾಗತಿಸಿದ ಸಂಸದ ಪ್ರತಾಪಸಿಂಹ: ಫೋಟೊ ಹಂಚಿಕೊಂಡ ಕಾಂಗ್ರೆಸ್‌

|
Google Oneindia Kannada News

ಬೆಂಗಳೂರು, ಡಿಸೆಂಬರ್‌ 03: ಬಿಜೆಪಿ ನಾಯಕರೊಂದಿಗೆ ರೌಡಿಗಳು ಕಾಣಿಸಿಕೊಳ್ಳುತ್ತಿರುವ ವಿಚಾರವೀಗ ದೇಶದಲ್ಲಿ ಚರ್ಚೆಯ ವಸ್ತುವಾಗಿದೆ. ಬಿಜೆಪಿ ನಾಯಕರೊಂದಿಗೆ ವೇದಿಕೆ ಹಂಚಿಕೊಂಡ ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಸೈಲೆಂಡ್‌ ಸುನೀಲ ವಿಚಾರವಾಗಿ ಕೇಸರಿ ಪಕ್ಷವು ಮುಜುಗರಕ್ಕೆ ಈಡಾಗಿತ್ತು. ಈ ಘಟನೆಯ ನಂತರ ರೌಡಿ ಶೀಟರ್‌ಗಳಾದ ಫೈಟರ್‌ ರವಿ ಹಾಗೂ ಬೆತ್ತನಗೆರೆ ಶಂಕರ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡಿದ್ದು ವರದಿಯಾಗಿತ್ತು.

ಕುಖ್ಯಾತ ರೌಡಿ ಬೆತ್ತನಗೆರೆ ಶಂಕರನನ್ನು ಬಿಜೆಪಿ ಸಂಸದ ಪ್ರತಾಪ ಸಿಂಹ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡಿರುವ ಫೋಟೊವನ್ನು ಕಾಂಗ್ರೆಸ್‌ ಹಂಚಿಕೊಂಡಿದೆ. ಈ ವಿಚಾರವನ್ನು ಟ್ವೀಟ್‌ ಮೂಲಕ ಬಹಿರಂಗಪಡಿಸಿದೆ.

ರೌಡಿ ರಾಜ್ಯ ಕಟ್ಟಲು ಹೊರಟಿದ್ದೀರಾ? ಸಿಎಂಗೆ ಕಾಂಗ್ರೆಸ್ ಪ್ರಶ್ನೆ

ರೌಡಿ ರಾಜ್ಯ ಕಟ್ಟಲು ಹೊರಟಿದ್ದೀರಾ? ಸಿಎಂಗೆ ಕಾಂಗ್ರೆಸ್ ಪ್ರಶ್ನೆ

'ರೌಡಿಗಳನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದೆ. ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್‌ನನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡದ್ದಾರೆ ಮೈಸೂರು ಸಂಸದ ಪ್ರತಾಪ ಸಿಂಹ. ಬಸವರಾಜ ಬೊಮ್ಮಾಯಿ ಅವರೇ, ರೌಡಿ ರಾಜ್ಯ ಕಟ್ಟಲು ಹೊರಟಿದ್ದೀರಾ? ಇದೇನಾ ನಿಮ್ಮ ಸಂಸ್ಕೃತಿ' ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ರೌಡಿಗಳ ಅಡ್ಡೆಯಾದ ಬಿಜೆಪಿ ಕಚೇರಿ

ರೌಡಿಗಳ ಅಡ್ಡೆಯಾದ ಬಿಜೆಪಿ ಕಚೇರಿ

'ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬಸವರಾಜ ಬೊಮ್ಮಾಯಿ ಅವರೇ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ' ಎಂದು ಕೆಪಿಸಿಸಿ ಗಂಭೀರ ಆರೋಪ ಮಾಡಿದೆ.

ಸದ್ದಿಲ್ಲದೇ ರೂಪಗೊಳ್ಳುತ್ತಿರುವ ರೌಡಿ ಮೋರ್ಚಾ

ಸದ್ದಿಲ್ಲದೇ ರೂಪಗೊಳ್ಳುತ್ತಿರುವ ರೌಡಿ ಮೋರ್ಚಾ

'ಸದ್ದಿಲ್ಲದೆ ಬಿಜೆಪಿಯ ರೌಡಿ ಮೋರ್ಚಾ ರೂಪುಗೊಳ್ಳುತ್ತಿದೆ, ಜೈಲಿನಲ್ಲಿರಬೇಕಾದವರು ಬಿಜೆಪಿ ಕಚೇರಿಯಲ್ಲಿದ್ದಾರೆ. ರೌಡಿಗಳಿಗೆ ಪ್ರೋತ್ಸಾಹಿಸುವುದಿಲ್ಲ ಎಂದು ಯೂಟರ್ನ್ ಸ್ಟೇಟ್ಮೆಂಟ್ ನೀಡಿದ್ದ ಬಸವರಾಜ ಬೊಮ್ಮಾಯಿ ಅವರೇ, ಆನೇಕಲ್‌ ಪುರಸಭೆಗೆ ರೌಡಿ ಶೀಟರ್‌ನನ್ನು ನಿಮ್ಮದೇ ಸರ್ಕಾರ ನಾಮನಿರ್ದೇಶನ ಮಾಡಿರುವುದೇಕೆ? ದಮ್ಮು ತಾಕತ್ತಿದ್ದರೆ ಉತ್ತರಿಸಿ' ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ರೌಡಿ ಸೈಲೆಂಟ್‌ ಸುಲೀನನಿಗೆ ಕಸದ ಟೆಂಡರ್‌ ನೀಡಿದ ಬಿಜೆಪಿ ಸಚಿವ

ರೌಡಿ ಸೈಲೆಂಟ್‌ ಸುಲೀನನಿಗೆ ಕಸದ ಟೆಂಡರ್‌ ನೀಡಿದ ಬಿಜೆಪಿ ಸಚಿವ

ರೌಡಿ ಸೈಲೆಂಟ್‌ ಸುನೀಲನ ವಿಚಾರವಾಗಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದ ಕಾಂಗ್ರೆಸ್‌, 'ಬಿಜೆಪಿ ಹಾಗೂ ರೌಡಿಗಳ ನಡುವಿನ ಬಾಂಧವ್ಯಕ್ಕೆ ಬಿಬಿಎಂಪಿ ಕಸ ವಿಲೇವಾರಿಯ ಟೆಂಡರ್ ಸಾಕ್ಷಿಯಾಗುತ್ತಿದೆ. ಬೇನಾಮಿ ಹೆಸರಲ್ಲಿ ಸೈಲೆಂಟ್‌ ಸುನೀಲನಿಗೆ ಕಸದ ಟೆಂಡರ್ ಕೊಡಿಸಿದ ಸಚಿವ ಯಾರು? ಆ ಸಚಿವರಿಗೂ ಸುನೀಲನಿಗೂ ಯಾವ ಜನ್ಮದ ಮೈತ್ರಿ? ಅರ್ಹತೆ ಇಲ್ಲದಿದ್ದರೂ ನಿಯಮ ಮೀರಿ ಟೆಂಡರ್ ಕೊಟ್ಟಿದ್ದು ಹೇಗೆ? ಏಕೆ? ಬಿಜೆಪಿ ಉತ್ತರಿಸುವುದೇ' ಎಂದು ಕೆಪಿಸಿಸಿ ಕೇಳಿತ್ತು.

'ಒಂದೆಡೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಸಿಎಂ ಬೊಮ್ಮಾಯಿ ರೌಡಿಗಳನ್ನು ಸಮರ್ಥಿಸಿ ಮಾತಾಡುತ್ತಾರೆ. ಮತ್ತೊಂದೆಡೆ ಎಲ್ಲೋ ಅಡಗಿದ್ದ ನಳೀನ್‌ ಕುಮಾರ್‌ ಕಟೀಲ್ ಧಿಡೀರ್ ಎದ್ದು ಬಂದು ಸೈಲೆಂಟ್ ಸುನೀಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಾರೆ. ರೌಡಿ ಮೋರ್ಚಾ ಮಾಡುವ ವಿಚಾರದಲ್ಲೂ #BJP vs BJP ಕಾದಾಟ ನಡೆಯುತ್ತಿದೆಯೇ' ಎಂದು ಕೇಳಿತ್ತು.

'ಡ್ಯಾಮೇಜ್ ಕಂಟ್ರೋಲಿಗಾಗಿ ಸೈಲೆಂಟ್ ಸುನಿಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ನಳೀನ್‌ ಕಟೀಲ್‌ ಫೈಟರ್ ರವಿ ಪಕ್ಷ ಸೇರಿದ್ದರ ಬಗ್ಗೆ ಸೈಲೆಂಟ್ ಆಗಿರುವುದೇಕೆ? ಫೈಟರ್ ರವಿ ರೌಡಿ ಶೀಟರ್ ಅಲ್ಲವೇ? ಇಂತಹ ಸದಾರಮೆ ನಾಟಕ ಮಾಡುವುದಕ್ಕಿಂತ ರೌಡಿ ಮೋರ್ಚಾವನ್ನು ಘೋಷಣೆ ಮಾಡಿಬಿಡಲಿ' ಎಂದು ಕಾಂಗ್ರೆಸ್‌ ಹೇಳಿತ್ತು

English summary
The issue of rowdies appearing with BJP leaders has become a topic of discussion in the country. The saffron party was embarrassed by the issue of the most wanted gangster Silend Suneela sharing the stage with BJP leaders. After this incident, it was reported that rowdy sheeters like Fighter Ravi and Bettanagere Shankar appeared with BJP leaders. Congress has shared a photo of notorious rowdy Bettanagere Shankar being received by BJP MP Pratap Singh with the party flag,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X