Karnataka BJP: ಚುನಾವಣಾ ಸೋಲಿನ ಬಳಿಕ ಬಿಜೆಪಿಯಲ್ಲಿ ಜೋರಾಯ್ತು ಕಚ್ಚಾಟ; ಕಟೀಲ್ ರಾಜೀನಾಮೆಗೆ ರೇಣುಕಾಚಾರ್ಯ ಪಟ್ಟು!
ಬೆಂಗಳೂರು, ಜೂನ್ 29: ಮೂರು ವರ್ಷಗಳ ಕಾಲ ಅಧಿಕಾರ ನಡೆಸಿದ್ದ ಬಿಜೆಪಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ್ದು, ಸೋಲಿನಿಂದಾಗಿ ಕೇಸರಿ ಪಡೆಯಲ್ಲಿ ಆಂತರಿಕ ಕುಚ್ಚಾಟ ಶುರುವಾಗಿದ್ದು, ದಿನೇ ದಿನೇ ಕೇಸರಿ ಪಾಳಯದಲ್ಲಿ ಕಲಹ ಹೆಚ್ಚಾಗುತ್ತಿದೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿ. ಈ ಮಾತನ್ನು ದಾವಣಗೆರೆ ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಹಿರಿಯರು ಹಾಗೂ ಜನರ ಒತ್ತಾಯಕ್ಕೆ ಮಣಿದು ಹೇಳುತ್ತಿದ್ದೇನೆ ಎಂದು ಟ್ವೀಟ್ ಮಾಡಿದರು.

ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ರೇಣುಕಾಚಾರ್ಯ ಪಟ್ಟು ಹಿಡಿದಿದ್ದಾರೆ.
ಬಿಜೆಪಿ ಪಕ್ಷವನ್ನು ಹಗಲು ರಾತ್ರಿ ಕಟ್ಟಿದ ಹಿರಿಯರಾದ ಯಡಿಯೂರಪ್ಪ, ದಿವಂಗತ ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ನವರದ್ದು ಬಹುದೊಡ್ಡ ಪಾತ್ರವಿದೆ. ಅಂಥವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.
— M P Renukacharya (@MPRBJP) June 28, 2023
ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು.
ಭಾರತೀಯ ಜನತಾ ಪಕ್ಷ ನನಗೆ ತಾಯಿ ಸಮಾನ. ನನಗೆ ಎಲ್ಲಾ ಸ್ಥಾನ ಮಾನ ನೀಡಿರುವುದು ಬಿಜೆಪಿ. ಪಕ್ಷಕ್ಕೆ ಹೀನಾಯ ಸೋಲಾದಾಗ ನಾವೆಲ್ಲರೂ ಸತ್ಯಸಂಗತಿಗಳ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಲೇಬೇಕು. ಜನತಾ ನ್ಯಾಯಾಲಯದಲ್ಲಿ ಜನರು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತೆಲೆಬಾಗಲೇಬೇಕು. ಅದೇ ಜನಸಾಮಾನ್ಯರು ತಿಳಿಸಿದ ಅಭಿಪ್ರಾಯವನ್ನು ನಾನು ತಿಳಿಸುತ್ತಿದ್ದೇನೆ ಎಂದು ಹೇಳಿದರು.












Click it and Unblock the Notifications