ಕೊರೊನಾ ವಿರುದ್ಧ ಹೋರಾಟ: 4 ತಿಂಗಳ ವೇತನ ನೀಡಿದ ಸಂಸದೆ ಸುಮಲತಾ

ಬೆಂಗಳೂರು, ಮಾರ್ಚ್ 27: ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಂಸದೆ ಸುಮಲತಾ ಅಂಬರೀಶ್ ತಮ್ಮ 4 ತಿಂಗಳ ವೇತನವನ್ನು ನೀಡಿದ್ದಾರೆ.

Recommended Video

      Mandya MP Sumalatha Ambareesh given 50blakhs to mandya mims

      ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಹಣದ ಅಗತ್ಯವಿದೆ. ಸರ್ಕಾರದ ಜೊತೆ ಕೈಜೋಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದರು.

      ಇದಕ್ಕೆ ಸ್ಪಂದಿಸಿರುವ ಸಂಸದೆ ಸುಮಲತಾ ಅಂಬರೀಶ್ ತಮ್ಮ 2 ತಿಂಗಳ ವೇತನ ಅಂದರೆ 2 ಲಕ್ಷ ರೂ.ವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಎರಡು ತಿಂಗಳ ವೇತನವನ್ನು ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ನೀಡುವುದಾಗಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

      MP Sumalatha Ambareesh Will Donate 4 Months Salary

      ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50, 00, 000 ಲಕ್ಷ ರೂ. ಗಳನ್ನು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

      ಈಗಾಗಲೇ ದೇಶದಲ್ಲಿ 16 ಮಂದಿ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ. 700ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+