ಕೊರೊನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ: ಸುಮಲತಾ

ಬೆಂಗಳೂರು, ಜುಲೈ 18: ಕೊರೊನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣುವುದನ್ನು ಬಿಡಿ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

Recommended Video

      Congress counsellor ಪ್ರಕಾರ Rum ಕೊರೊನಗೆ ಮುದ್ದು | Oneindia Kannada

      ಸುಮಲತಾ ಅಂಬರೀಷ್ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಕೇಳಿಬರುತ್ತಿರುವ ಸುದ್ದಿಗಳಿಗೆ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿರುವ ಅವರು, ಕೊರೋನಾದಿಂದ ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಹೊಂದಿ ಮತ್ತೆ ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ ಎನ್ನುವ ಭರವಸೆಯಿದೆ.

      ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ವರದಿ ತಿಳಿದ ಬಳಿಕವಷ್ಟೆ. ಸದ್ಯಕ್ಕೆ ಔಷಧಿ ಹಾಗೂ ಸುಶ್ರೂಷೆ ಮುಂದುವರೆದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ ಎಂದಿದ್ದಾರೆ.

      MP Sumalatha Ambareesh Says Dont Treat Corona Infected As A Criminals

      ಕೊರೊನಾ ಸೋಂಕಿತರನ್ನು ಅವಮಾನದಿಂದ ಕಾಣುವ, ನಿಂದಿಸುವ ವರ್ತನೆ ಕಾಣುತ್ತಿದ್ದು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಸೇರಿ ಕೊರೊನಾ ವಿರುದ್ಧ ಹೋರಾಡೋಣ, ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ ಎಂದು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

      ಕೊರೊನಾ ಸೋಂಕಿನ ಲಕ್ಷಣ ಕಂಡುಬಂದು ನಂತರ ಪರೀಕ್ಷೆ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್ ಬಂದ ಮೇಲೆ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+