'ಈ ಬಾರಿ ಸಂಸದ ತೇಜಸ್ವಿ ಸೂರ್ಯನಿಗೆ ಸೋಲಾಗುತ್ತದೆ'

ಬೆಂಗಳೂರು ಏಪ್ರಿಲ್08: ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ. ಈ ಬಾರಿ ಸಂಸದ ತೇಜಸ್ವಿ ಸೂರ್ಯನಿಗೆ ಸೋಲಾಗುತ್ತದೆ. ವಿಧಾನಸಭೆ ಚುನಾವಣೆಯಲ್ಲಿ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ: ತೇಜಸ್ವಿಸೂರ್ಯನನ್ನು ಸೋಲಿಸಿ ಸೌಮ್ಯರೆಡ್ಡಿಗೆ ನ್ಯಾಯ ಕೊಡಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮನವಿ ಮಾಡಿದರು.

ಪದ್ಮನಾಭನಗರ ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಕ್ತವಾದ ಭರ್ಜರಿ ಜನ ಬೆಂಬಲಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ. ಸೌಮ್ಯರೆಡ್ಡಿ ಭಾರೀ ಅಂತರದಲ್ಲಿ ಗೆಲ್ಲುತ್ತಾರೆ. ಈ ಮಾತನ್ನು ನಾನು ಸುಮ್ಮನೆ ಹೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

MP Tejasvi Surya Will Lose To This Time Siddaramaiah Said

ಸೌಮ್ಯರೆಡ್ಡಿ ಗೆದ್ದರೆ ನಾನು ಗೆದ್ದಂತೆ. ನಿಮ್ಮ ಹೃದಯದ ಮಾತು ಕೇಳಿ ಮತ ಹಾಕಿ. ಬರೀ ಭಾವನಾತ್ಮಕವಾಗಿ ಕೆರಳಿ ಮತ ಹಾಕಿದ್ದಕ್ಕೆ ಹತ್ತು ವರ್ಷದಲ್ಲಿ ದೇಶಕ್ಕೆ, ನಿಮಗೆ ಸಿಕ್ಕಿದ್ದೇನು ಎಂದು ಪ್ರಶ್ನಿಸಿ ಸೌಮ್ಯರೆಡ್ಡಿಯವರನ್ನು ಗೆಲ್ಲಿಸಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಹಕರಿಸಿ ಎಂದು ಕೋರಿದರು.

ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ. ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ ದೇಶ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಂಸದ ತೇಜಸ್ವಿ ಸೂರ್ಯ ಸಂಸದರಾಗಿ ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಮ್ಮೆಯೂ ಧ್ವನಿ ಎತ್ತಿಲ್ಲ. ಮೋದಿ ಮುಖ ತೋರಿಸಿ ಓಟು ಕೇಳುವ ದುರ್ಗತಿ ಬಿಜೆಪಿಗೆ ಬಂದಿದೆ. ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಮತ ಕೇಳುವ ಮುಖ ಇಲ್ಲ. ಏಕೆಂದರೆ ಇವರು ಅಭಿವೃದ್ಧಿ ಕಾರ್ಯಗಳನ್ನೇ ಮಾಡಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತೀಯರಿಗೆ ಕೊಟ್ಟ ಒಂದು ಮಾತನ್ನೂ ಉಳಿಸಿಕೊಂಡಿಲ್ಲ. ಕಪ್ಪುಹಣ ವಾಪಾಸ್ ತರಲಿಲ್ಲ. ಭಾರತೀಯರ ಖಾತೆಗೆ 15 ಲಕ್ಷ ಹಾಕಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ ಮೋದಿ ರೈತರ ಖರ್ಚು ಹೆಚ್ಚಾಗುವಂತೆ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳುಗಳ ಬೆಲೆ ಇಳಿಸಲಿಲ್ಲ. ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ ಎಂದು ಪ್ರಶ್ನಿಸಿದರು.‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+