Siddaramaiah: ಸಿಎಂ ಸ್ಥಾನಕ್ಕೆ ಇಂದೇ ಸಿದ್ದರಾಮಯ್ಯ ರಾಜೀನಾಮೆ? ಮುಂದಿನ ಮುಖ್ಯಮಂತ್ರಿ ಡಿಕೆಶಿ ಅಲ್ಲ, ಮತ್ಯಾರು?
ಬೆಂಗಳೂರು, ಸೆಪ್ಟೆಂಬರ್ 24: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದ್ದು, ಸಿದ್ದರಾಮಯ್ಯಗೆ ಬಿಗ್ ಶಾಕ್ ಎದುರಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಇಂದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ ಎನ್ನುವ ಪ್ರಶ್ನೆ ಎದುರಾಗಿದ್ದು, ಸಿದ್ದರಾಮಯ್ಯ ನಡೆ ಕುರಿತು ಕುತೂಹಲ ಮೂಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಯುವವರೆಗೂ ಅಥವಾ ಈ ಕೇಸ್‌ನಿಂದ ಹೊರಬರುವವರೆಗೂ ಒಂದು ವೇಳೆ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಯಸಿದ್ರೆ, ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಸಿಎಂ ಯಾರು ಎನ್ನುವ ಚರ್ಚೆ ಕೈ ಪಾಳಯದಲ್ಲಿ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಾಗಿದ್ದು, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ರೆ, ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ನಡೆಯಲಿದೆ.
ಇನ್ನೂ 2023 ರ ವಿಧಾನಸಭಾ ಚುಣಾವಣೆಯಲ್ಲಿ ಭರ್ಜರಿ ಜಯಗಳಿಸುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಚನೆಯಾದಗಿನಿಂದಲೂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮೇಲೆ ಒಂದು ಕಣ್ಣಿಟ್ಟಿದ್ದಾರೆ. ಈ ಹಿಂದೆಯೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಹೈಕಮಾಂಡ್ ನಾಯಕ ಜೊತೆಗೂ ಹಲವು ಬಾರೀ ಚರ್ಚೆ ನಡೆಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ರೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಮುಂಚೂಣಿಯಲ್ಲಿರಲಿದ್ದಾರೆ.
ಇನ್ನೂ ಸಿಎಂ ರೇಸ್ ನಲ್ಲಿ ಡಿ ಕೆ ಶಿವಕುಮಾರ್ ಮಾತ್ರವಲ್ಲದೇ ದಲಿತ ಸಮುದಾಯದ ಸತೀಶ್ ಜಾರಕಿಹೊಳಿ, ಪರಮೇಶ್ವರ್, ರೇಸ್ ನಲ್ಲಿದ್ದಾರೆ. ಅಲ್ಲದೇ ಎಂ ಬಿ ಪಾಟೀಲ್, ಆರ್ ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರು ಸಿಎಂ ಸ್ಥಾನದ ಮೇಲೆ ಕಣ್ಣೀಟ್ಟಿದ್ದಾರೆ.
ಇತ್ತ ಮುಡಾ ಪ್ರಕರಣದಲ್ಲಿಇನ್ನೂ ಕಾನೂನು ಪ್ರಕ್ರಿಯೆಗಳು ಮುಂದುವರೆಸಿದ್ರೆ ವಿಭಾಗೀಯ ಪೀಠಕ್ಕೆ ಹೋಗಬೇಕು. ಇದಾದ ನಂತ್ರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದು. ಒಂದು ವೇಳೆ ಅಲ್ಲಿಯೂ ಪ್ರಾಸಿಕ್ಯೂಷನ್ ನಡೆಸಿ ಅಂತ ತೀರ್ಪು ಬಂದ್ರೆ ಸಿದ್ದರಾಮಯ್ಯರವರ ನಡೆ ಏನಿರಬಹುದು ಅನ್ನೋದೇ ಈಗ ದೊಡ್ಡ ಯಕ್ಷ ಪ್ರಶ್ನೆಯಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಮುಂದಿನ ಸಿಎಂ ಆಯ್ಕೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನ ಕೇಳಿದ್ರೆ, ಡಿ ಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಅವರು ಮಣೆ ಹಾಕುವುದು ಅನುಮಾನವಾಗಿದೆ. ಒಂದು ವೇಳೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅನಿವಾರ್ಯತೆ ಎದುರಾದರೇ ಸಿದ್ದರಾಮಯ್ಯ ಅವರು ಸೂಚಿಸಿದವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅಪ್ತರಾದ ಎಂ ಬಿ ಪಾಟೀಲ್ ಅಥವಾ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರು ಮಣೆ ಹಾಕುವ ಸಾಧ್ಯತೆ ಇದೆ.












Click it and Unblock the Notifications