Muda ಸಿ.ಎಂ ಬದಲಾವಣೆ: ಡಿ.ಕೆ ಶಿವಕುಮಾರ್‌ - ಪರಮೇಶ್ವರ್‌ ರಹಸ್ಯ ಸಭೆ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಎದುರಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಬಿರುಸಿನ ರಾಜಕೀಯ ಚುರುಕು ಪಡೆದುಕೊಂಡಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಲಾಗುತ್ತಿದೆಯಾದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಕಾಂಗ್ರೆಸ್‌ನಲ್ಲೇ ಬಿರುಸಿನ ರಾಜಕೀಯ ಚುರುಕುಪಡೆದುಕೊಂಡಿದೆ. ಈ ನಡುವೆ ಗೃಹ ಸಚಿವ ಜಿ. ಪರಮೇಶ್ವರ್‌ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಭೆ ನಡೆಸಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ ಎಂದು ಹೈಕಮಾಂಡ್‌ನಿಂದ ರಾಜ್ಯ ಕಾಂಗ್ರೆಸ್‌ ನಾಯಕರು, ಸಚಿವರು ಎಲ್ಲರೂ ಹೇಳುತ್ತಿದ್ದಾರೆ. ಆದರೆ, ಮುಂದಿನ ಮುಖ್ಯಮಂತ್ರಿ ಆಗುವ ಬಗ್ಗೆ ಡಿ.ಕೆ ಶಿವಕುಮಾರ್‌ ಅವರಿಂದ ಹಿಡಿದು ಹಲವರು ನಾನು ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇದರ ನಡುವೆ ಕಾಂಗ್ರೆಸ್‌ನ ಪ್ರಭಾವಿ ನಾಯಕರು ತೆರೆಮರೆಯಲ್ಲಿ ಸಭೆ ಸೇರುವುದು ಮುಂದುವರಿದಿದೆ. ರಾಜ್ಯದ ಪ್ರಭಾವಿ ನಾಯಕರು ಒಂದೆಡೆ ಸೇರಿ ರಾಜ್ಯ ರಾಜಕೀಯದಲ್ಲಿ ಏನೆಲ್ಲ ಬದಲಾವಣೆ ಆಗುತ್ತಿದೆ. ನಮ್ಮ ಪ್ಲಾನ್‌ ಏನಾಗಿರಬೇಕು ಎಂದು ಚರ್ಚೆ ಮಾಡುತ್ತಿರುವುದು ಜೋರಾಗಿಯೇ ನಡೆದಿದೆ.

Muda CM Change DK Shivakumar - Parameshwar secret meeting

ಡಿ.ಕೆಶಿ ಮತ್ತು ಪರಮೇಶ್ವರ್‌ ಭೇಟಿ ಚರ್ಚೆ: ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಇರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಹಾಗೂ ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳುತ್ತಿದ್ದರೂ, ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಪದೇ ಪದೇ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಬಿಜೆಪಿಗಿಂತ ಇದೀಗ ಕಾಂಗ್ರೆಸ್‌ನಲ್ಲೇ ಹೆಚ್ಚಿನ ಒತ್ತಾಯ ಕೇಳಿ ಬರುತ್ತಿರುವುದನ್ನು ಗಮನಿಸಬಹುದು. ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ ಸಂಖ್ಯೆ ಒಂದು ಡಸನ್‌ಗಿಂತ ಜಾಸ್ತಿ ಇದೆ. ಇದರಲ್ಲಿ ಪ್ರಮುಖವಾಗಿ ಸಚಿವರಾದ ಸತೀಶ್‌ ಜಾರಕಿಹೊಳಿ, ಡಿ.ಕೆ ಶಿವಕುಮಾರ್‌ ಹಾಗೂ ಜಿ. ಪರಮೇಶ್ವರ್‌ ಇದ್ದಾರೆ. ಈ ಪ್ರಮುಖ ನಾಯಕರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ, ಮುಂದೆ ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವ ಗಂಭೀರ ಚರ್ಚೆಗಳು ನಡೆಯುತ್ತಿವೆ. ಇದೀಗ ಈ ಇಬ್ಬರು ಸಚಿವರು ನಡೆಸಿರುವ ಮಾತುಕತೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿ.ಎಂ ಸ್ಥಾನದುಂದ ಕೆಳಗೆ ಇಳಿಸಬೇಕು ಎಂದು ಬಿಜೆಪಿ ನಾಯಕರು ಶ್ರಮಿಸುತ್ತಿದ್ದಾರೆ. ಇದರ ನಡುವೆ ಕಾಂಗ್ರೆಸ್‌ನಲ್ಲೇ ಪ್ರಭಾವಿ ನಾಯಕರು ಸಿ.ಎಂ ಅವರು ರಾಜೀನಾಮೆ ನೀಡಿದರೆ, ನಾನೇ ಮುಂದಿನ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಒಂದು ಬಣ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೂ, ಡಿ.ಕೆ ಶಿವಕುಮಾರ್‌ ಅವರಿಗೆ ಅಧಿಕಾರ ಸಿಗದಂತೆ ನೋಡಿಕೊಳ್ಳುವ ತಂತ್ರ ಎಣೆಯುತ್ತಿದೆ. ಈ ನಡುವೆ ದಲಿತ ಸಿ.ಎಂ, ಉತ್ತರ ಕರ್ನಾಟಕಕ್ಕೆ ಸಿ.ಎಂ ಸ್ಥಾನ ಹಾಗೂ ಲಿಂಗಾಯತ ಧರ್ಮಕ್ಕೆ ಸಿ.ಎಂ ಸ್ಥಾನ ಕೊಡಬೇಕು ಎನ್ನುವ ವಿಚಾರ ತೀವ್ರವಾಗಿ ಚರ್ಚೆಯಾಗುತ್ತಿದೆ.

ಇದೀಗ ಎತ್ತಿನಹೊಳೆ ಯೋಜನೆಯ ಅನುಷ್ಠಾನದ ಬಗ್ಗೆ ಚರ್ಚೆ ಮಾಡುವ ನೆಪದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್‌ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಇಬ್ಬರು ನಾಯಕರು ರಾಜ್ಯದಲ್ಲಿ ಮುಂದಿನ ಹಂತದಲ್ಲಿ ಯಾವ ರೀತಿಯ ಬದಲಾವಣೆಗಳು ಆಗಬಹುದು, ಏನು ಮಾಡಬೇಕು ಎಂದು ಚರ್ಚೆ ನಡೆಸಿರುವ ಸಾಧ್ಯತೆ ದಟ್ಟವಾಗಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಬದಲಿ ನಿವೇಶನ ಪಡೆದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಇದೀಗ ಅವರು, ಕಾನೂನು ಸಮರಕ್ಕೆ ಸಿದ್ಧರಾಗಿದ್ದಾರೆ. ಈ ಕಡೆ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ತೀವ್ರವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+