Muda scam: ಹೆಚ್‌ಡಿ ಕುಮಾರಸ್ವಾಮಿಯನ್ನ ಅರೆಸ್ಟ್ ಮಾಡಿ ಎಂದ ಸಿಎಂ!

ಬೆಂಗಳೂರು ಅಕ್ಟೋಬರ್ 2: ಮುಡಾ ಹಗರಣದಿಂದ ಹೊರಬರಲು ಸಿಎಂ ಸಿದ್ದರಾಮಯ್ಯ ಎಷ್ಟೇ ಪ್ಲ್ಯಾನ್ ಮಾಡಿದರೂ ಅದು ಸಾಧ್ಯವಾಗುತ್ತಿಲ್ಲ. ತಮಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ವಾಪಸ್ ನೀಡದ ಬಳಿಕವೂ ಸಿದ್ದರಾಮಯ್ಯ ಅವರನ್ನು ಬಂಧಿಸುವಂತೆ ಒತ್ತಡ ಹೆಚ್ಚಾಗಿದೆ. ಈ ನಡುವೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಬಂಧಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹೌದು.... ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿರುವ ಸೈಟುಗಳನ್ನು ವಾಪಸ್‌ ಪಡೆದರು ಎನ್ನುವ ಕಾರಣಕ್ಕೆ ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮುಡಾ ಅಧಿಕಾರಿಗಳು ಸಿಎಂ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಯಾವ ಆಧಾರದ ಮೇಲೆ ಸೈಟು ವಾಪಸ್ ಪಡೆದಿದ್ದಾರೆ ಎಂದು ಗೊತ್ತಾಗಬೇಕು. ಇದರಲ್ಲ ಯಾವುದೋ ಷಡ್ಯಂತ್ರ ನಡೆದಿದೆ. ಹೀಗಾಗಿ ಅವರನ್ನು ಬಂಧಿಸಿದರೆ ಎಲ್ಲಾ ಹೊರಬರುತ್ತದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿಎಂ ಸಿದ್ದರಾಮಯ್ಯ ಅವರು ಮೊದಲು ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಬಂಧಿಸಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ.

Muda scam Arrest HD Kumaraswamy says CM Siddaramaiah

ಹೆಚ್‌ಡಿ ಕುಮಾರಸ್ವಾಮಿ ಆರೋಪವೇನು?

62 ಕೋಟಿ ಬೆಲೆ ಬಾಳುವ ಜಾಗವದು. ನಮಗೆ 62 ಕೋಟಿ ನೀಡಿ ಜಾಗ ವಾಪಸ್ ಪಡೆಯಿರಿ ಅಂತಾ ಹೇಳಿದ್ದು, ಈಗ ತನಿಖೆಯ ದಿಕ್ಕು ತಪ್ಪಿಸಲು ಸೈಟ್ ವಾಪಸ್ ಕೊಡೋ ಡ್ರಾಮವನ್ನು ಮಾಡಿದ್ದಾರೆ. ಕೋರ್ಟ್ನಲ್ಲಿ ಕೇಸ್ ಇದೆ. ಮೂಡಾ ಆಯುಕ್ತರು ಯಾವ ಆಧಾರದ ಮೇಲೆ ಕೇಸ್ ವಾಪಸ್ ಪಡೆದ್ರು ಅದು ಮೊದಲು ಗೊತ್ತಾಗಬೇಕಿದೆ. ಹೀಗಾಗಿ ಅವರನ್ನು ಬಂಧಿಸಬೇಕು, ತನಿಖೆಯಾಗಬೇಕು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇವರೇ ಅಕ್ರಮ ಆಗಿದೆ ಅಂತ ಹೇಳಿದ್ದಾರೆ. ಆಗಿದೆ ಅಂದ್ಮೇಲೆ ತನಿಖೆ ಆಗಬೇಕು. ನನ್ನ ರಾಜೀನಾಮೆ ಯಾಕೆ ಕೇಳ್ತಾರೆ ನನ್ನ ಮೇಲೆ ಎಫ್‌ಐಆರ್ ಆಗಿದೆ. ಆದರೆ ನಾನು ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ. ನನ್ನ ಪ್ರಕರಣ ಬೇರೆ ಸಿದ್ದರಾಮಯ್ಯ ಅವರ ಪ್ರಕರಣ ಬೇರೆ ಎಂದಿದ್ದಾರೆ.

ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು, "ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು. ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇವೆಲ್ಲವನ್ನೂ ಮಾಡುತ್ತಿದ್ದಾರೆ" ಎಂದು ಹೇಳಿದರು.

Muda scam Arrest HD Kumaraswamy says CM Siddaramaiah

ಪ್ರಾಧೀಕಾರದ ಆಯುಕ್ತ ರಘನಂದನ್ ಸ್ಪಷ್ಟಣೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೈಸೂರು ನಗರಾಭಿವೃದ್ಧಿ ಪ್ರಾಧೀಕಾರದ ಆಯುಕ್ತ ರಘನಂದನ್, 'ಸಿಎಂ ಪತ್ನಿ ಪಾರ್ವತಮ್ಮ ಸ್ವ ಇಚ್ಚೆಯಿಂದ ಸೈಟ್ ವಾಪಸ್ ನೀಡಿದ್ದಾರೆ. ಪಾರ್ವತಮ್ಮ ಅವರ ಹೆಸರಿನಲ್ಲಿ ಇದ್ದ 14 ನಿವೇಶನಗಳ ಸೇಲ್ ಡೀಡ್ ರದ್ದು ಮಾಡಿದ್ದೇವೆ. ಈಗ 14 ನಿವೇಶನಗಳು ಮುಡಾ ವ್ಯಪ್ತಿಗೆ ಬಂದಿವೆ. ಇದನ್ನು ಬೇರೆಯವರಿಗೆ ಹಂಚಬಹುದಾ ಅಥವಾ ತನಿಖೆ ಮುಗಿರುವವರೆಗೂ ಅದನ್ನು ಹಂಚಬಾರದ ಎಂಬ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತೇವೆ. ಪಾರ್ವತಿ ಅವರ ಸೈಟ್‌ಗಳು ತಮ್ಮ ವಶಕ್ಕೆ ಪಡೆದ ಬಗ್ಗೆ ತನಿಖಾ ಸಂಸ್ಥೆಗಳಿಗೆ ಮಾಹಿತಿ ಕೊಡುತ್ತೇವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+