Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲು

Siddaramaiah: ಮುಡಾ ಹಗರಣ ಪ್ರಕರಣ ಆರೋಪಕ್ಕೆ ಸಂಬಂಧಿದಂತೆ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಎಫ್‌ಆರ್‌ಆರ್‌ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಆದೇಶದಂತೆ ಲೋಕಾಯುಕ್ತ ಎಸ್‌ಪಿ ಉದೇಶ್ ಎಫ್‌ಐಆರ್‌ ದಾಖಲಿಸಿದ್ದಾರೆ. ಹಾಗಾದರೆ ಇದರಲ್ಲಿ ಯಾರೆಲ್ಲಾ ಯಾವ್ಯಾವ ಆರೋಪಿ ಪಟ್ಟವನ್ನು ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇನ್ನು ಪ್ರಕರಣದಲ್ಲು ಎ1 ಸಿದ್ದರಾಮಯ್ಯ, ಎ2 ಪತ್ನಿ ಪಾರ್ವತಿ ಸಿದ್ದರಾಮಯ್ಯ, ಎ3 ಬಾಮೈದ ಮಲ್ಲೊಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಎ4 ಆರೋಪಿಯಾಗಿದ್ದಾರೆ. ಎ5 ಇತರರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.

MUDA Scam case FIR filed against CM Siddaramaiah

ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಕಾಯ್ದೆಗಳ ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯೂ ಎಫ್‌ಐಆರ್‌ ದಾಖಲಿಸಿದ್ದಾರೆ.

ಯಾವ್ಯಾವ ಸೆಕ್ಷನ್‌ ಏನು ಹೇಳುತ್ತದೆ?: ಐಪಿಸಿ ಸೆಕ್ಷನ್ 120 ಬಿ-ಕ್ರಮಿನಲ್‌ ಪಿತೂರಿ ಆರೋಪ (ಜೀವಾವಧಿ ಶಿಕ್ಷೆ, 166-ಸರ್ಕಾರಿ ಸೇವಕನಿಂದ ಕಾನೂನು ಉಲ್ಲಂಘನೆ, 403-ಅಪ್ರಾಮಾಣಿಕವಾಗಿ ಆಸ್ತಿ ದುರ್ಬಳಕೆ, 406-ಅಪರಾಧಿಕ ನಂಬಿಕೆ ದ್ರೋಹ (3 ವರ್ಷ ಜೈಲು ಶಿಕ್ಷೆ ಅಥವಾ ದಂಡ), 420-ವಂಚನೆ (ಮೋಸದಿಂದ ಲಾಭ ಪಡೆಯುವುದು), 426-ಕಿಡಿಗೇಡಿತನಕ್ಕೆ ಶಿಕ್ಷೆ (3 ತಿಂಗಳ ಶಿಕ್ಷೆ ಅಥವಾ ದಂಡ), 465-ಪೋರ್ಜರಿ, 468 ಪೋರ್ಜರಿ ಮಾಡಿದ್ದಕ್ಕೆ ಶಿಕ್ಷೆ (5 ವರ್ಷ ಜೈಲು & ದಂಡ), 340-ಅಕ್ರಮ ಬಂಧನ, 351-ಇತರರಿಗೆ ಹಾನಿ ಮಾಡುವುದು.

ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಿಆರ್‌ಪಿಸಿ ಕಾಯ್ದೆಯಡಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಲೋಕಾಯುಕ್ತ ಎಡಿಜಿಪಿ ಮನೀಷ್‌ಕರ್ಬೀಕರ್ ಸೂಚಿಸಿದ್ದು, ಇದರಿಂದ ಯಾವ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಬೇಕು ಎಂಬ ಗೊಂದಲಗಳು ನಿವಾರಣೆಯಾಗಿದೆ.

ನ್ಯಾಯಾಲಯದ ಆದೇಶದಂತೆ ಎಫ್‌ಐಆರ್ ದಾಖಲಿಸುವಂತೆ ಮೈಸೂರು ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಭೀಕರ್ ಮೈಸೂರು ಲೋಕಾಯುಕ್ತ ಎಸ್ಪಿಗೆ ಸೂಚನೆ ನೀಡಿದ್ದರು. ಕಾಯ್ದೆಗಳ ವಿಚಾರದಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಮೈಸೂರು ಲೋಕಾಯುಕ್ತ ಪೊಲೀಸರು ಯಾವ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಬೇಕು ಎಂಬ ಗೊಂದಲದಲ್ಲಿ ಸಿಲುಕಿದ್ದರು. ಇದರಿಂದ ಎಫ್‌ಐಆರ್‌ ದಾಖಲು ವಿಳಂಬವಾಗಿತ್ತು. ಈಗ ಲೋಕಾಯುಕ್ತ ಎಡಿಜಿಪಿ ಅವರೇ ಸಿಆರ್‌ಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸೂಚಿಸಿರುವುದರಿಂದ ಅದರಂತೆಯೇ ಎಫ್‌ಐಆರ್ ದಾಖಲಾಗಿದೆ.

ಮೈಸೂರು ಲೋಕಾಯುಕ್ತ ಎಸ್ಪಿ ಉಮೇಶ್ ರಾಜ್ಯ ಲೋಕಾಯುಕ್ತರಿಗೆ ಪತ್ರ ಬರೆದು, ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ಅನ್ನು ಪಿಎನ್‌ಎಸ್‌ ಕಾಯ್ದೆಯಡಿ ದಾಖಲಿಸಬೇಕಾ ಅಥವಾ ಸಿಆರ್‌ಪಿಸಿ ಅಥವಾ ಐಪಿಸಿ ಸೆಕ್ಷನ್‌ನಡಿ ಎಫ್‌ಐಆರ್‌ ದಾಖಲಿಸಬೇಕಾ ಎಂಬ ಬಗ್ಗೆ ಸ್ಪಷ್ಟತೆ ಕೊಡಿ ಎಂದು ಕೇಳಿದ್ದರು. ಇದಕ್ಕೆ ಲೋಕಾಯುಕ್ತ ಪ್ರಧಾನ ಕಚೇರಿಯಿಂದ ಉತ್ತರ ಬಂದಿದ್ದು ಸಿಆರ್‌ಪಿಡಿ ಅಡಿ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+