ಮುಡಾ ಹಗರಣ ಪ್ರಕರಣ: ರಾಜ್ಯಪಾಲರಿಂದ ಸಚಿವ ಜಮೀರ್ ಅಹ್ಮದ್‌ಗೆ ಬಿಗ್ ಶಾಕ್.!
ಬೆಂಗಳೂರು, ನವೆಂಬರ್, 10: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಇನ್ನು ಈ ಕುರಿತಂತೆ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದು, ಇದೀಗ ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.
ಸಚಿವ ಜಮೀರ್ ಅಹ್ಮದ್ ಅವರು ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಟಿ.ಜೆ.ಅಬ್ರಾಹಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದು, ಆಕ್ಷೇಪಾರ್ಹವಾಗಿದೆ ಎಂಬುದಾಗಿ ತಿಳಿಸಿದ್ದರು.

ಈ ದೂರಿನ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಅವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಇದೀಗ ಸಚಿವ ಜಮೀರ್ ಅಹ್ಮಸ್‌ಗೆ ಸಂಕಷ್ಟ ಎದುರಾದಂತಾಗಿದೆ.
ಬಿಜೆಪಿ ವಿರುದ್ಧ ಆಕ್ರೋಶ: ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜ ಭವನಗಳನ್ನು ಕೇಂದ್ರ ಬಿ.ಜೆ.ಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಡಿಎಸ್ಎಸ್ ಜಿಲ್ಲಾ ಸಮಿತಿ ಸಂಚಾಲಕ ಸಿ.ಎಂ.ಶಿವಣ್ಣ ಮಾತನಾಡಿ, ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಮೇಲೆ ಎಫ್‌ಐಆರ್ ದಾಖಲಿಸಿರುವ ಹಿನ್ನೆಲೆ ಅವರು ರಾಜೀನಾಮೆ ಕೊಡಬೇಕೆಂದು ಬಿ.ಜೆ.ಪಿ. ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ.
ಈ ಹೋರಾಟದ ತಾರ್ಕಿಕ ಅಂತ್ಯ ಯಾರ್ಯಾರ ಮನೆ ಬಾಗಿಲು ತಟ್ಟಬಹುದೆಂಬ ಕನಿಷ್ಠ ಸಾಮಾನ್ಯ ಜ್ಞಾನವಾದರೂ ಈ ನಾಯಕರಿಗಿದೆಯೇ? ಕೇಂದ್ರ ಬಿಜೆಪಿ ಸರ್ಕಾರ ಸಂವಿಧಾನಿಕ ಸಂಸ್ಥೆಗಳ ದುರುಪಯೋಗ ಪಡಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಸರ್ಕಾರವನ್ನು ದುರ್ಬಲಗೊಳಿಸಲು ಮುಡಾಪ್ರಕರಣದಲ್ಲಿ ಚುನಾಯಿತ ಸರ್ಕಾರ ಪತನಗೊಳಿಸಲು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರ ಎಂದರು.
ಎಫ್.ಐ.ಆರ್. ಆಗಿರುವ ಕಾರಣಕ್ಕೆ ರಾಜೀನಾಮೆ ನೀಡಬೇಕೆಂದು ಮಾನದಂಡವನ್ನು ನಿಗದಿಪಡಿಸಿದರೆ ಸಿದ್ದರಾಮಯ್ಯ ನವರು ಮಾತ್ರವಲ್ಲ, ಕೇಂದ್ರ ಸರ್ಕಾರದ ಸಚಿವರ ಸಂಪುಟದಲ್ಲಿ ಸಚಿವರು ಕನಿಷ್ಠ 23-24 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಉನ್ನತ ಅಧಿಕಾರದಲ್ಲಿದ್ದು, ರಾಜಧರ್ಮವನ್ನು ಮರೆತು ಜಾತಿ ಜಾತಿಧರ್ಮದ ಹೆಸರಲ್ಲಿ ಜನಾಂಗೀಯ ಹತ್ಯೆಗಳನ್ನು ತಡೆಯಲು ವಿಫಲರಾಗಿದ್ದಾರೆ ಎಂದು ದೂರಿದರು.












Click it and Unblock the Notifications