MUDA Scam Case: ಅರೆಸ್ಟ್ ಆಗ್ತಾರಾ ಸಿಎಂ ಸಿದ್ದರಾಮಯ್ಯ?: ವಕೀಲರ ಸ್ಫೋಟಕ ಹೇಳಿಕೆ
ಬೆಂಗಳೂರು, ಸೆಪ್ಟೆಂಬರ್, 25: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಹೈಕೋರ್ಟ್ ಒಪ್ಪಿಗೆ ನೀಡಿತ್ತು. ಇಂದು (ಸೆಪ್ಟೆಂಬರ್ 25) ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಸಿಆರ್‌ಪಿಸಿ ಕಾಯ್ದೆ ಉಲ್ಲೇಖಿಸಿ ಮೈಸೂರು ಲೋಕಾಯುಕ್ತ ಪೊಲೀಸರ ತನಿಖೆಗೆ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಕೀಲರು ಏನು ಹೇಳಿದ್ದಾರೆ ಗೊತ್ತಾ? ಇಲ್ಲಿದೆ ಮಾಹಿತಿ.
ಈ ಬಗ್ಗೆ ಸ್ನೇಹಮಹಿ ಕೃಷ್ಣ ಪರ ವಕೀಲ ವಸಂತ್ ಕುಮಾರ್ ಪ್ರತಿಕ್ರಿಯಿಸಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಿನ್ನೆ (ಸೆಪ್ಟೆಂಬರ್ 24) ಹೈಕೋರ್ಟ್ ತನಿಖೆ ಮಾಡುವುದಾಗಿ ತೀರ್ಪು ನೀಡಿತ್ತು. ಇದೀಗ ಯಾರು ತನಿಖೆ ನಡೆಸಬಹು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ನೀಡಿದೆ ಎಂದರು.

ಹೈಕೋರ್ಟ್ ತೀರ್ಪಿನ ಆದೇಶದ ಪ್ರತಿಯನ್ನು ಜನಪ್ರತಿನಿಧಿಗಳ ನ್ಯಾಯಲಯಕ್ಕೆ ನೀಡಿದ್ದೆವು. ಇದೀಗ ಖಾಸಗಿ ದೂರಿಗೆ ನ್ಯಾಯ ದೊರೆತಿದೆ ಎಂದು ಹೇಳಿದ್ದಾರೆ. 3 ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚಿಸಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕೆಂದು ಮನವಿ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ತನಿಖೆಯಾಗಬೇಕು. ಎಫ್‌ಐಆರ್ ದಾಖಲಿಸಿ ತನಿಖೆ ಆಗಬೇಕು & ಅರೆಸ್ಟ್ ಕೂಡ ಮಾಡಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಜನಪ್ರತಿನಿಧಿ ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ (ಸೆಪ್ಟೆಂಬರ್, 24) ಹೈಕೋರ್ಟ್ 17ಎ ಅನ್ವಯ ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಹೈಕೋರ್ಟ್ ತನಿಖೆಗೆ ಅಸ್ತು ಎಂದಿತ್ತು. ಜನಪ್ರತಿನಿಧಿಗಳ ಕೋರ್ಟ್ ಇಂದು (ಸೆಪ್ಟೆಂಬರ್ 25) ತೀರ್ಪು ನೀಡಿದೆ. ಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ.ಇನ್ನು ತನಿಖೆ ಎದುರಿಸಲು ನಾವು ತಯಾರಿದ್ದೇವೆ ಎಂದು ಹೇಳಿದ್ದಾರೆ.
ಆರ್.ಅಶೋಕ್ ಹೇಳಿದ್ದೇನು?: ಹೈಕೋರ್ಟ್ ಆದೇಶ ಹೊರಡಿಸಿದಾಗಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು. ಆದರೆ ಜನಪ್ರತಿನಿಧಿಗಳ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಸೂಚನೆ ನೀಡಿದ ಮೇಲೂ ರಾಜೀನಾಮೆ ನೀಡಿಲ್ಲ. ಎಫ್‌ಐಆರ್ ದಾಖಲಾದ ಬಳಿಕ ಸರ್ಕಾರ ನಿಯಂತ್ರಿತ ಪೊಲೀಸರ ಮುಂದೆ ನಿಂತು ಮುಖ್ಯಮಂತ್ರಿಯೊಬ್ಬರು ತನಿಖೆ ಎದುರಿಸಲು ಹೇಗೆ ಸಾಧ್ಯ ಎಂದು ಆರ್.ಅಶೋಕ್ ತಮ್ಮ ಟ್ವೀಟ್ ಖಾತೆ ಮೂಲಕ ಪ್ರಶ್ನೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ ಇರಬೇಕು ಅಥವಾ ಮರೆವಿನ ಕಾಯಿಲೆ ಇರಬೇಕು ಎಂದು ಬರೆದುಕೊಂಡಿದ್ದಾರೆ. ಇನ್ನು 2011ರಲ್ಲಿ ಅಂದಿನ ಮುಖ್ಯಮಂತ್ರಿ ಸನ್ಮಾನ್ಯ ಯಡಿಯೂರಪ್ಪನವರ ಮೇಲೆ ಆರೋಪ ಬಂದಾಗ, ಅಧಿಕಾರದಲ್ಲಿದ್ದುಕೊಂಡು ತನಿಖೆ ಎದುರಿಸಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದರು
ಫ್ರೀ ಅಂಡ್ ಫೇರ್ ಟ್ರಯಲ್ ಆಗ ಆಗಬೇಕಾದರೆ ಯಡಿಯೂರಪ್ಪನವರು ರಾಜೀನಾಮೆ ನೀಡಬೇಕೆಂದು ರೋಶಾವೇಶ ತೋರಿದ್ದ ಸಿದ್ದರಾಮಯ್ಯನವರು ಈಗ ನಾನೇಕೆ ರಾಜೀನಾಮೆ ಕೊಡಬೇಕೆಂದು ಮೊಂಡುತನ ಪ್ರದರ್ಶನ ಮಾಡುತ್ತಿದ್ದಾರೆ.
ಸಿದ್ದರಾಮಯ್ಯನವರೇ, ಅಂದು ನೀವು ಹೇಳಿದ್ದು ಮರೆತು ಹೋಯಿತಾ? ಅಥವಾ ನಿಮ್ಮ ಪ್ರಕಾರ ಯಡಿಯೂರಪ್ಪನವರಿಗೆ ಒಂದು ನ್ಯಾಯ, ನಿಮಗೊಂದು ನ್ಯಾಯಾನಾ? ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಗಳ ಅಡಿಯಲ್ಲಿ ಕೆಲಸ ಮಾಡುವ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿಗಳ ವಿರುದ್ಧವೇ ಹೇಗೆ ತನಿಖೆ ನಡೆಸಲು ಸಾಧ್ಯ? ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ಆಗಬೇಕಾದರೆ ತಾವು ರಾಜೀನಾಮೆ ಕೊಡಲೇಬೇಕು.
ನಿಮಗೆ ಕಿಂಚಿತ್ತಾದರೂ ನೈತಿಕತೆ, ಸ್ವಾಭಿಮಾನವಿದ್ದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ. ನೀವು ಕುರ್ಚಿಗೆ ಅಂಟಿಕೊಂಡಷ್ಟೂ ನಿಮ್ಮ ಗೌರವ ಕಳೆದುಕೊಳ್ಳುತ್ತೀರಿ ಎಂದು ಬರೆದುಕೊಂಡಿದ್ದಾರೆ.
Work from Jail ಮಾದರಿ ಹಾಕಿಕೊಟ್ಟಿರುವ I.N.D.I ಮಿತ್ರ ಕೇಜ್ರಿವಾಲ್ ನಿಮಗೆ ಮಾದರಿಯಾಗದಿರಲಿ. ತಾವೇ ಹೇಳಿಕೊಳ್ಳುವಂತೆ ರಾಮಕೃಷ್ಣ ಹೆಗ್ಡೆ ಅವರು ತಮಗೆ ಮಾದರಿಯಾಗಲಿ ಎಂದು ಬರೆದುಕೊಂಡಿದ್ದಾರೆ.












Click it and Unblock the Notifications