Muda scam: ಸಿ.ಎಂ ಸಿದ್ದರಾಮಯ್ಯಗೆ ಶುರುವಾಯ್ತು ಹೊಸ ಸಂಕಷ್ಟ
ಕರ್ನಾಟಕದಲ್ಲಿ ಗಂಭೀರ ಪ್ರಕರಣಗಳ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಡಾ ಹಗರಣದ ಚರ್ಚೆ ತುಸು ಹಿನ್ನೆಲೆಗೆ ಸರಿದಿದೆ. ಆದರೆ, ಮುಡಾ ಹಗರಣದ ಮುಂದುವರಿದ ಭಾಗದಂತಿರುವ ಪ್ರಕರಣವೊಂದು ಬೆಳಕಿಗೆ ಬರುತ್ತಿದೆ. ಇದೀಗ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ದೂರು ದಾಖಲಾಗಿದೆ. ಇದರಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪವೂ ಕೇಳಿ ಬಂದಿದೆ.
ಮುಡಾದಲ್ಲಿ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡವಂತೆ ರಾಜ್ಯಾಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನಟ ರಾಜ್ ಎನ್ನುವವರು ಆಗಸ್ಟ್ 27ರಂದು ನಟರಾಜ್ ಎನ್ನುವವರು ದೂರು ನೀಡಿದ್ದರು. ಇದರಲ್ಲಿ ಮೌಖಿಕ ಆದೇಶದ ಮೇಲೆ ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಇದೀಗ ರಾಜ್ಯಪಾಲರು ಮಧ್ಯಪ್ರವೇಶ ಮಾಡಿದ್ದು, ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ರಾಜ್ಯಪಾಲರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳ ಸಹಿತ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.

ಮುಡಾ ಈಗ ಕೇಳಿ ಬಂದಿರುವ ಹೊಸ ಆರೋಪವೇನು ?
ಇದೀಗ ಕೇಳಿ ಬಂದಿರುವ ಆರೋಪದಲ್ಲಿ ಮುಡಾದಿಂದ ನಿಯಮ ಬಾಹಿರವಾಗಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎನ್ನುವುದು. ಅಲ್ಲದೇ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಮೌಖಿಕ ಆದೇಶ ನೀಡಿದ್ದಾರೆ ಎನ್ನುವ ಆರೋಪಗಳು ಸಹ ಕೇಳಿ ಬರುತ್ತಿವೆ. ಪ್ರಕರಣ ಸಂಬಂಧ ಸಿಬಿಐಯಿಂದ ತನಿಖೆ ನಡೆಸಬೇಕು ಎಂದು ರಾಜ್ಯಪಾಲರಿಗೆ ನಟರಾಜ್ ಎನ್ನುವವರು ಒತ್ತಾಯಿಸಿದ್ದಾರೆ.
ಇನ್ನು ಮುಡಾದಲ್ಲಿ 450 ಕೋಟಿ ರೂಪಾಯಿಗೂ ಹೆಚ್ಚಿನ ಹಣ ಅಕ್ರಮ ಕಾಮಗಾರಿಗೆ ಪೋಲು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಮತ್ತು ಮಂಡ್ಯ ಜಿಲ್ಲೆಯ ಶ್ರೀರಂಗಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಕಾಮಗಾರಿ ನಡೆಸುವ ಸಿದ್ಧತೆ ನಡೆದಿದೆ. ವರುಣ ವಿಧಾನಸಭಾ ಕ್ಷೇತ್ರದಲ್ಲೇ 40 ಕೋಟಿ ರೂಪಾಯಿ ಮೊತ್ತವನ್ನು, ಶ್ರೀರಂಗಪಟ್ಟಣ ಕ್ಷೇತ್ರಕ್ಕೆ 15 ಕೋಟಿ ಹಣವನ್ನು ನೀಡಲು ಸಚಿವ ಸಂಪುಟದಿಂದ ಅನುಮತಿ ಪಡೆದುಕೊಳ್ಳಲಾಗಿದೆ. ಆದರೆ, ಆಯುಕ್ತರು ಈ ಕಾಮಗಾರಿ ನಡೆಸುವಾಗ ಮುಖ್ಯಮಂತ್ರಿಯ ಮೌಖಿಕ ಆದೇಶದ ಮೇಲೆ ನಡೆಸುತ್ತಿರುವ ಕಾಮಗಾರಿಗಳು ಎಂದು ಉಲ್ಲೇಖಿಸಿದ್ದಾರೆ ಎನ್ನುವ ಆರೋಪ ಈಗ ಕೇಳಿ ಬರುತ್ತಿದೆ.
ಬಿಜೆಪಿಯಿಂದ ಟ್ವೀಟ್
ರಾಜ್ಯಪಾಲರು ಸಿಬಿಐ ಅನ್ನು ಉಲ್ಲೇಖಿಸಿ ಪ್ರಕರಣದ ವಿವರ ನೀಡುವಂತೆ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಇದೆ ಬೆನ್ನಲ್ಲೇ ರಾಜ್ಯದ ವಿರೋಧ ಪಕ್ಷವಾದ ಬಿಜೆಪಿಯು ತೀವ್ರ ಟೀಕೆಯನ್ನು ಮಾಡಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಹಣವನ್ನು ಅಕ್ರಮವಾಗಿ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಈ ಸಂಬಂಧ ರಾಜ್ಯಪಾಲರಿಗೆ ಮೈಸೂರು ಮೂಲದ ಪಿ.ಎಸ್. ನಟರಾಜ್ ಎನ್ನುವವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣಾ ಹಾಗೂ ಶ್ರೀರಂಗಪಟ್ಟಣದಲ್ಲಿ ಮುಡಾ ಕಾಯಿದೆ ಉಲ್ಲಂಘಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.











Click it and Unblock the Notifications