Get Updates
Get notified of breaking news, exclusive insights, and must-see stories!

Siddaramaiah: ಮುಡಾ ಹಗರಣ, ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು, ಡಿಸೆಂಬರ್ 05: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿಕೆ ಮಾಡಿದೆ. ಮುಡಾ ಹಗರಣದ ಕುರಿತು ಈಗಾಗಲೇ ಮೈಸೂರು ಲೋಕಾಯುಕ್ತರು, ಇಡಿ ತನಿಖೆಯನ್ನು ನಡೆಸುತ್ತಿದೆ. ಈ ಹಗರಣದ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಗುರುವಾರ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌. ವಿ. ಅಂಜರಿಯಾ ನೇತೃತ್ವದ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಿತು. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದನ್ನು ಏಕಸದಸ್ಯ ಪೀಠದಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಏಕ ಸದಸ್ಯ ಪೀಠ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ.

MUDA Scam CM Siddaramaiah Appeal High Court Adjourned Hearing For January 25

ಇಂದು ಅರ್ಜಿಯ ವಿಚಾರಣೆ ಸಮಯದಲ್ಲಿ ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ವಿಚಾರಣೆಯನ್ನು ಜನವರಿ 13 ಅಥವ 23ಕ್ಕೆ ಮುಂದೂಡಿಕೆ ಮಾಡಬೇಕು ಎಂದು ಮನವಿ ಮಾಡಿದರು. ವಕೀಲರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿ ಮಾಡಿದೆ.

ರಾಜ್ಯಪಾಲರ ಅನುಮತಿ: ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದರು.

ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಪ್ರಶ್ನೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಮೈಸೂರು ಲೋಕಾಯುಕ್ತ ಘಟಕಕ್ಕೆ ಆದೇಶಿಸಿದೆ. ಡಿಸೆಂಬರ್ 24ರೊಳಗೆ ಲೋಕಾಯುಕ್ತರು ವರದಿ ನೀಡಬೇಕಿದೆ.

ಮತ್ತೊಂದು ಕಡೆ ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ದೇವರಾಜು ಎಂಬುವವರು ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಲೋಕಾಯುಕ್ತ ತನಿಖೆಗೆ ಆದೇಶ ನೀಡಿದ ಆದೇಶವನ್ನು ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿಗೊಳಿಸಿದೆ. ಗುರುವಾರ ಹಾಸನದಲ್ಲಿ ಕಾಂಗ್ರೆಸ್ ಪಕ್ಷದ ಜನಕಲ್ಯಾಣ ಸಮಾವೇಶ ನಡೆಯುತ್ತಿದೆ. ಸಿದ್ದರಾಮಯ್ಯ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಅವರ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು.

ಮುಡಾ ಪ್ರಕರಣದಲ್ಲಿ ಇಡಿ ಸಹ ತನಿಖೆಯನ್ನು ನಡೆಸುತ್ತಿದೆ. ಆದರೆ ಇಡಿ ಲೋಕಾಯುಕ್ತರಿಗೆ ಬರೆದ ಪತ್ರದ ಬಗ್ಗೆ ವರದಿಗಳು ಪ್ರಸಾರವಾಗಿದ್ದವು. ಈ ಕುರಿತು ಬುಧವಾರ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಡಿಸೆಂಬರ್ 24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇಡಿಯವರು ಲೋಕಾಯುಕ್ತಕ್ಕೆ ವರದಿ ನೀಡಲು ಅವಕಾಶವಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ' ಎಂದು ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+