Siddaramaiah: ಮುಡಾ ಹಗರಣ, ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯಗೆ ಸಿಗುತ್ತಾ ರಿಲೀಫ್?

ಬೆಂಗಳೂರು, ಆಗಸ್ಟ್‌ 31: ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಹೋರಾಟ ಮತ್ತೆ ಮುಂದುವರೆಯಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ.

ಆಗಸ್ಟ್ 29ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆಗಸ್ಟ್ 19ರ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ವಿಸ್ತರಣೆ, ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿಕೆ ಮಾಡಿತ್ತು. ಸಿದ್ದರಾಮಯ್ಯ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ, ಕರ್ನಾಟಕ ರಾಜ್ಯಪಾಲರ ಕಾರ್ಯದರ್ಶಿ ಪರವಾಗಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.

MUDA Scam Karnataka Chief Minister Siddaramaiah Case Hearing At High Court

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅರ್ಜಿಯನ್ನು ಸಲ್ಲಿಸಿದ್ದಾರೆ. ಆಗಸ್ಟ್ 19, ಆಗಸ್ಟ್ 29ರಂದು ಎರಡು ದಿನ ಅರ್ಜಿಯ ವಿಚಾರಣೆ ನಡೆದಿದ್ದು, ಇಂದು 3ನೇ ದಿನದ ವಿಚಾರಣೆ ಆರಂಭವಾಗಿದೆ. ಇಂದು ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.

ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ಸಿದ್ದರಾಮಯ್ಯ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಆಗಸ್ಟ್ 19 ಮತ್ತು 29ರಂದು ಸಿದ್ದರಾಮಯ್ಯ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಿದ್ದಾರೆ. ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡನೆ ಆರಂಭಿಸಿದ್ದು, 5 ಅಂಶಗಳ ಮೇಲೆ ವಾದ ಮಂಡಿಸಲಿದ್ದೇನೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಇದನ್ನು ರದ್ದುಪಡಿಸಬೇಕು ಎಂದು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮತ್ತೊಂದು ಕಡೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು, ಶಾಸಕರು, ಸಂಸದರು ಮತ್ತು ಸಚಿವರು ರಾಜಭವನ ಚಲೋವನ್ನು ಶನಿವಾರ ಹಮ್ಮಿಕೊಂಡಿದ್ದಾರೆ. ವಿಧಾನಸೌಧದಿಂದ ರಾಜಭವನನದವರೆಗೆ ಜಾಥಾ ನಡೆಸಿ, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿಯನ್ನು ಪುನರ್ ಪರಿಶೀಲಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗುತ್ತದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಾಗ ಸಂಪುಟದ ಅಭಿಪ್ರಾಯವನ್ನು ಪುರಸ್ಕರಿಸಿಲ್ಲ ಎಂದು ತಿಳಿಸಿದ್ದಾರೆ. ಮುಡಾ ಹಗರಣದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ರಾಜ್ಯಪಾಲರು ತನಿಖೆಯ ನಂತರವೇ ತೀರ್ಮಾನ ತೆಗೆದುಕೊಳ್ಳಬೇಕು ಎಂದೇನಿಲ್ಲ, ತನಿಖೆ ವಿಚಾರವನ್ನು ತನಿಖಾ ಸಂಸ್ಥೆ ನೋಡಿಕೊಳ್ಳುತ್ತದೆ ಎಂದು ವಾದ ಮಂಡಿಸಿದರು. ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ಸಂಪೂರ್ಣ ಆದೇಶವನ್ನು ವಾದದ ಸಂದರ್ಭದಲ್ಲಿ ಓದಿದರು.

ತುಷಾರ್ ಮೆಹ್ತಾ ವಾದ ಮಂಡನೆ ಮುಕ್ತಾಯಗೊಳಿಸಿದ್ದು, ಮತ್ತೊಬ್ಬ ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಮಣೀಂದರ್ ಸಿಂಗ್ ವಾದ ಮಂಡನೆ ಆರಂಭಿಸಿದ್ದಾರೆ. ಒಟ್ಟು ಮೂರು ಅಂಶಗಳನ್ನು ಮುಂದಿಟ್ಟುಕೊಂಡು ಮಣೀಂದರ್ ಸಿಂಗ್ ವಾದಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+