Muda Scam: ವಿರೋಧ ಪಕ್ಷದ ಹೇಳಿಕೆಯೇ ಕಾಂಗ್ರೆಸ್‌ಗೆ ವರದಾನವಾಯ್ತು!
ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರದ) ಬದಲಿ ನಿವೇಶನ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಣಿಸಬೇಕು ಎಂದು ಲೆಕ್ಕಾಚಾರ ಹಾಕಿದ್ದ ಜೆಡಿಎಸ್ ಪಕ್ಷಕ್ಕೆ ಜೆಡಿಎಸ್ ಶಾಸಕರಿಂದಲೇ ಹಿನ್ನಡೆ ಆಗಿದೆ. ಈ ಬೆಳವಣೆಗೆಯಿಂದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ತೀವ್ರ ಮುಜುಗರಕ್ಕೆ ಒಳಗಾಗಿದ್ದರೆ. ಕಾಂಗ್ರೆಸ್ ಪಕ್ಷ ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡು ಬಿಜೆಪಿ ಹಾಗೂ ಜೆಡಿಎಸ್‌ಗೆ ಟಾಂಗ್ ನೀಡಿದೆ. ಜೆಡಿಎಸ್ ಪ್ರಭಾವಿ ಶಾಸಕನ ಹೇಳಿಕೆಯಿಂದ ಜೆಡಿಎಸ್ ಮುಖಭಂಗ ಅನುಭವಿಸುವಂತಾಗಿದೆ.
ಮುಡಾ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರವು ತೀವ್ರ ಮುಜುಗರಕ್ಕೆ ಒಳಗಾಗುತ್ತಿದೆ ಎನ್ನುವುದರ ಒಳಗಾಗಿ ಜೆಡಿಎಸ್‌ನ ಪ್ರಭಾವಿ ಶಾಸಕರಾದ ಜಿ.ಟಿ. ದೇವೇಗೌಡ ಅವರು ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿದ್ದಾರೆ. ಇದನ್ನೇ ಕಾಂಗ್ರೆಸ್ ಅಸ್ತ್ರವಾಗಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ತನ್ನ ಪರವಾಗಿ ಜನಾಭಿಪ್ರಾಯ ರೂಪಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ. ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋಷಿಯಲ್ ಮೀಡಿಯಾ ಎಕ್ಸ್ ಹಾಗೂ ಫೇಸ್‌ಬುಕ್ ಖಾತೆಯಲ್ಲಿ ಜಿ.ಟಿ ದೇವೇಗೌಡ ಅವರ ಮಾತುಗಳನ್ನು ಉಲ್ಲೇಖಿಸಲಾಗಿದೆ. ಅಲ್ಲದೇ ಮುಡಾದಲ್ಲಿ ಸಿದ್ದರಾಮಯ್ಯ ಅವರ ಪಾತ್ರವೇನೂ ಇಲ್ಲ. ಇದೆಲ್ಲ ವಿರೋಧ ಪಕ್ಷಗಳ ಷಡ್ಯಂತ್ರವಷ್ಟೇ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್: ಜೆಡಿಎಸ್‌ನ ಶಾಸಕರಾದ ಜಿ.ಟಿ. ದೇವೇಗೌಡ ಅವರ ಮಾತುಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಎಫ್.ಐ.ಆರ್ ದಾಖಲಾದ ಮಾತ್ರಕ್ಕೆ ರಾಜೀನಾಮೆ ನೀಡುವುದಾರೆ ಬಿಜೆಪಿ - ಜೆಡಿಎಸ್ ನಾಯಕರು ವಿಧಾನಸೌಧದ ಮುಂದೆ ಸಾಲಾಗಿ ನಿಲ್ಲಬೇಕಾಗುತ್ತದೆ" ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಮೈಸೂರು ದಸರಾದ ಉದ್ಘಾಟನಾ ಸಮಾರಂಭದಲ್ಲಿ ಹೇಳಿದ್ದಾರೆ ಎಂದು ಅವರು ಮಾತನಾಡಿರುವ ವಿಡಿಯೋವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.
ಎಫ್.ಐ.ಆರ್ ದಾಖಲಾದ ಮಾತ್ರಕ್ಕೆ ರಾಜೀನಾಮೆ ನೀಡುವುದಾರೆ ಬಿಜೆಪಿ – ಜೆಡಿಎಸ್ ನಾಯಕರು ವಿಧಾನಸೌಧದ ಮುಂದೆ ಸಾಲಾಗಿ ನಿಲ್ಲಬೇಕಾಗುತ್ತದೆ.
— Siddaramaiah (@siddaramaiah) October 3, 2024
- ಮೈಸೂರು ದಸರಾದ ಉದ್ಘಾಟನಾ ಸಮಾರಂಭದಲ್ಲಿ ಜೆಡಿಎಸ್ ಶಾಸಕರಾದ ಜಿ.ಟಿ. ದೇವೇಗೌಡ ಅವರ ಮಾತಿದು#MysuruDasara2024#ಮೈಸೂರುದಸರಾ2024 pic.twitter.com/twnBueY3pc
ಮತ್ತೊಂದೆಡೆ ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿಯನ್ನು ಮುಂದುವರಿಸಿದೆ. ಅಶುದ್ಧ ಕೈಗಳಿಂದ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ದು ಸರಿಯೇ ಎಂದು ಪ್ರಶ್ನೆ ಮಾಡಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್, ಅಶುದ್ಧ ಕೈಗಳಿಂದ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ದು ಸರಿಯೇ, ಮುಡಾ ಪ್ರಕರಣದಲ್ಲಿ A1 ಆರೋಪಿಯಾಗಿರುವ ಭ್ರಷ್ಟ್ರರಾಮಯ್ಯ ಅವರಿಂಧ ಐತಿಹಾಸಿಕ ಹಿನ್ನೆಲೆಯ ಭವ್ಯ ಪರಂಪರೆಯ ಮೈಸೂರು ದಸರಾ ಉದ್ಘಾಟಿಸಿದ್ದು ನಾಡಿಗೆ ಕಪ್ಪು ಚುಕ್ಕೆ ಎಂದು ಕಿಡಿಕಾರಿದೆ.

ಅಲ್ಲದೇ ಕಳಂಕಿತ ಮುಖ್ಯಮಂತ್ರಿ ಹಣೆಪಟ್ಟಿ ಹೊತ್ತಿರುವ ನೀವು, ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರೆ ನಾಡಿಗೆ ಅಪಖ್ಯಾತಿ ತಂದಿದ್ದೀರಿ. ಹಲವು ಹಗರಣಗಳಲ್ಲಿ ಮುಳುಗಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಸಿದ್ದರಾಮಯ್ಯ ಅವರೇ ಕರುನಾಡಿನ ಜನರ ಆತ್ಮಸಾಕ್ಷಿಗೆ ದ್ರೋಹ ಬಗೆಯಬೇಡಿ ಎಂದಿದೆ.
“ಅಶುದ್ಧ ಕೈ”ಗಳಿಂದ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ದು ಸರಿಯೇ..?
— Janata Dal Secular (@JanataDal_S) October 4, 2024
ಮುಡಾ ಪ್ರಕರಣದಲ್ಲಿA1 ಆರೋಪಿಯಾಗಿರುವ "ಭ್ರಷ್ಟ್ರರಾಮಯ್ಯ" ಐತಿಹಾಸಿಕ ಹಿನ್ನೆಲೆಯ ಭವ್ಯ ಪರಂಪರೆಯ ಮೈಸೂರು ದಸರಾ ಉದ್ಘಾಟಿಸಿದ್ದು ನಾಡಿಗೆ ಕಪ್ಪು ಚುಕ್ಕೆ !
"ಕಳಂಕಿತ ಮುಖ್ಯಮಂತ್ರಿ" ಹಣೆಪಟ್ಟಿ ಹೊತ್ತಿರುವ ನೀವು, ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರೆ…
ಒಟ್ಟಾರೆ ಜೆಡಿಎಸ್‌ನಾಯಕರ ಮಾತಿನಿಂದ ಜೆಡಿಎಸ್ ತೀವ್ರ ಮುಜುಗರಕ್ಕೆ ಒಳಗಾಗಿದ್ದು, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಹಿನ್ನಡೆ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications