ಮುಡಾ ಪ್ರಕರಣ: ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ: ಸಚಿವ ಪರಮೇಶ್ವರ

ಬೆಂಗಳೂರು, ಆಗಸ್ಟ್‌ 22: ಮುಡಾ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವ ಬದಲು ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ‌ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಪಕ್ಷದವರು ಪದೇಪದೇ ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಡಾ ಬಗ್ಗೆ ದೇಸಾಯಿ ಆಯೋಗವು ತನಿಖೆ ಆರಂಭಿಸಿದೆ. ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ಆಯೋಗಕ್ಕೆ ನೀಡಲಿ. ಸಾರ್ವಜನಿಕವಾಗಿ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವುದು ಬೇಡ ಎಂದ ಅವರು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ‌ ಪ್ರತಿಕ್ರಿಯಿಸಲು ಹೋಗುವುದಿಲ್ಲ ಎಂದು ಹೇಳಿದರು.

Muda Scam Let The Desai Commission Be Informed Says Parameshwara

ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಮೈಕಲ್ ಪೊನ್ನಾ ಅವರ ವರದಿ ಬರುವರೆಗೂ ಏನನ್ನು ಮಾಡಲಾಗುವುದಿಲ್ಲ. ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ಎಂಬುದನ್ನು ಗಮನಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಪ್ರೊಸಿಡಿಂಗ್ಸ್ ಮಾಡಬೇಕು ಅಂತ ವರದಿಯಲ್ಲಿ ಬಂದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯಾಪಾಲರು ರಕ್ಷಣೆ ಕೇಳಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ. ಅವರಿಗೆ ಯಾವ ರೀತಿಯ ಬೆದರಿಕೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬೆಜಿಪಿಯವರು ಸೃಷ್ಟಿ ಮಾಡಿದ್ದಾರೆ. ಬಿಜೆಪಿಯವರ ಇತ್ತೀಚಿನ ಬೆಳವಣಿಗೆಗಳೇ ಕಾರಣ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+