MUDA Scam: "ಸಿದ್ದರಾಮಯ್ಯನವರೇ.. ಮೊದ್ಲು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ"
ಬೆಂಗಳೂರು, ಸೆಪ್ಟೆಂಬರ್, 25: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಹೈಕೋರ್ಟ್ ಒಪ್ಪಿಗೆ ನೀಡಿದೆ. ಇದೀಗ ಇದೇ ವಿಚಾರವಾಗಿ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಟಿ ರವಿ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
"ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ. ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದಿದೆ," ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

"ರಾಜ್ಯಪಾಲರು ಅನುಮತಿ ನೀಡಿದಾಗ, ಅವರು ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಮಾಡಿದ್ದೀರಿ. ಈಗ ರಾಜ್ಯಪಾಲರ ಕ್ಷಮೆಯನ್ನು ಕೋರಿ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ," ಎಂದು ಬರೆದುಕೊಂಡಿದ್ದಾರೆ.
"ಉಪ್ಪು ತಿಂದವ ನೀರು ಕುಡಿಯಲೇ ಬೇಕು"
— C T Ravi 🇮🇳 ಸಿ ಟಿ ರವಿ (@CTRavi_BJP) September 24, 2024
ಮುಡಾ ಅಕ್ರಮದಲ್ಲಿ ಸಿಎಂ @siddaramaiah ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ.
ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದಿದೆ. ರಾಜ್ಯಪಾಲರು ಅನುಮತಿ ನೀಡಿದಾಗ "ರಾಜ್ಯಪಾಲರು ರಾಜಕೀಯ ಮಾಡುತ್ತಿದ್ದಾರೆ "… pic.twitter.com/ToBUFYrcBP
ಮತ್ತೊಂದೆಡೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು "ಮುಡಾ ಹಗರಣ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಕುತಂತ್ರ, ರಾಜಭವನದ ದುರುಪಯೋಗಗಳಿಗೆ ಹೆದರಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಈ ಷಡ್ಯಂತ್ರವನ್ನು ನಾನು ಎದುರಿಸಿ," ಗೆಲ್ಲುತ್ತೇನೆ ಎಂದು ಬರೆದುಕೊಂಡಿದ್ದಾರೆ.
"ಹೋರಾಟದ ಮೂಲಕ ರಾಜಕೀಯ ಪ್ರವೇಶ ಮಾಡಿದ ನಾನು, ಇದನ್ನೂ ಒಂದು ಹೋರಾಟವಾಗಿಯೇ ಸ್ವೀಕರಿಸಿದ್ದೇನೆ. ರಾಜ್ಯದ ಜನರ ಆಶೀರ್ವಾದ ಇರುವವರೆಗೆ ಇಂಥಾ ಕುತಂತ್ರಗಳಿಗೆ ಮಣಿಯುವುದಿಲ್ಲ," ಎಂದು ಬರೆದುದುಕೊಂಡಿದ್ದಾರೆ.
ಮತ್ತ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂದಿದೆ. ಹೈಕೋರ್ಟ್‌ನ ಏಕ ಪೀಠದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾಂಗ್ರೆಸ್ ನಿರ್ಧಾರಕ್ಕೆ ಬಂದಿದೆ.
ಆದರೆ, ಕಾನೂನು ಹೋರಾಟವನ್ನು ಸುಪ್ರೀಂಕೋರ್ಟ್‌ನಲ್ಲಿ ನಡೆಸುವುದು ಉತ್ತಮವೇ ಅಥವಾ ವಿಭಾಗೀಯ ಪೀಠದಲ್ಲಿ ನಡೆಸುವ ಕುರಿತು ಗೊಂದಲಗಳು ಶುರು ಆಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರದ ಮಾಜಿ ಕಾನೂನು ಸಲಹೆಗಾರ ಬ್ರಿಜೇಶ್ ಕಾಳಪ್ಪ ಅವರು, ಸಿದ್ದರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಹೋರಾಟ ಮಾಡುವುದನ್ನು ಬಿಟ್ಟು ನೇರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು ಎಂದು ಸಲಹೆ ನೀಡಿದ್ದಾರೆ.
ಆದರೂ ಕೆಲವು ಕಾಂಗ್ರೆಸ್ ನಾಯಕರು ಸುಪ್ರೀಂ ಕೋರ್ಟ್‌ಗೆ ಹೋಗುವ ಮೊದಲು ಹೈಕೋರ್ಟ್‌ನಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಮುಡಾ ಹಗರಣ ವಿಚಾರದಲ್ಲಿ ಕಾಂಗ್ರೆಸ್ ಬಲವಾಗಿ ನಿಲ್ಲುತ್ತದೆಯೇ ಅಥವಾ ಬಿಜೆಪಿ ಹೋರಾಟ ಗೆಲುವು ಸಾಧಿಸುತ್ತದೆಯೇ ಎನ್ನುವುದನ್ನು ಕಾದುನೋಡಬೇಕಿದೆ.
ಜಮೀರ್ ವಿರುದ್ಧ ಆರ್ ಅಶೋಕ್ ಆಕ್ರೋಶ: ಸಚಿವರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಸ್ಪೀಕರ್, ರಾಜ್ಯಪಾಲರು ಸೇರಿದಂತೆ ಸಾಂವಿಧಾನಿಕ ಹುದ್ದೆಗಳ ಬಗ್ಗೆ ಅಗೌರವ ತೋರುತ್ತಲೇ ಬಂದಿರುವ ಸಚಿವ ಜಮೀರ್ ಅವರು ಈಗ ಮಾನ್ಯ ಉಚ್ಛ ನ್ಯಾಯಾಲಯದ ತೀರ್ಪನ್ನು ಪೊಲಿಟಿಕಲ್ ಜಡ್ಜ್ಮೆಂಟ್ ಎನ್ನುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರ್ ಅಶೋಕ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದರು.












Click it and Unblock the Notifications