MUDA row: ಮುಡಾ ಹಗರಣದಿಂದ ಕರ್ನಾಟಕದ ಉಪ ಚುನಾವಣೆಯ ಮೇಲೆ ಕರಿನೆರಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾಗಿಯೇ ಇದೆ ಎಂದು ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ. ಅಲ್ಲದೇ ಇದನ್ನೇ ವಿರೋಧ ಪಕ್ಷಗಳು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಚನ್ನಪಟ್ಟಣ ಉಪ ಚುನಾವಣೆ ಕಾವು ತೀವ್ರವಾಗಿದೆ. ಇದರೊಂದಿಗೆ ಶಿಗ್ಗಾವಿ ಹಾಗೂ ಸಂಡೂರ್ ವಿಧಾನಸಭಾ ಕ್ಷೇತ್ರದಲ್ಲೂ ಉಪ ಚುನಾವಣೆಗಳು ನಡೆಯಲಿವೆ.
ಈಚೆಗೆ ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದಿರುವ ಭ್ರಷ್ಟಾಚಾರ ಹಾಗೂ ಹಗರಣದ ಆರೋಪಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ತೀವ್ರ ಮುಜುಗರಕ್ಕೆ ಒಳಗಾಗಿದೆ. ಇದೀಗ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಉಂಟಾಗಿರುವುದು ಸಹಜವಾಗಿಯೇ ರಾಜ್ಯ ಸರ್ಕಾರದ ಮೇಲೂ ಪ್ರಭಾವ ಬೀರಿದ್ದು, ಇದರಿಂದ ಉಪ ಚುನಾವಣೆಗಳ ಮೇಲೆ ಕರಿನೆರಳು ಮೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಗಂಭೀರವಾದ ಆರೋಪಗಳು ಇವೆ. ಈ ಸಂದರ್ಭದಲ್ಲಿ ಉಪ ಚುನಾವಣೆಯೂ ಸಮೀಪಿಸುತ್ತಿರುವುದರಿಂದ ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎನ್ನುವ ಚರ್ಚೆ ಶುರುವಾಗಿದೆ.

ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿ
ಎಚ್.ಡಿ ಕುಮಾರಸ್ವಾಮಿ ಅವರು ಲೋಕಸಭೆಗೆ ಮಂಡ್ಯದಿಂದ ಸ್ಪರ್ಧೆ ಮಾಡಿರುವುದರಿಂದ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಮಾಜಿ ಸಂಸದ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಹೋದರ ಡಿ.ಕೆ ಸುರೇಶ್ ಅವರು ಸೋತಿದ್ದರು. ಡಿ.ಕೆ ಸುರೇಶ್ ಅವರ ಸೋಲಿಗೆ ಬಿಜೆಪಿ ಹಾಗೂ ಜೆಡಿಎಸ್ ರಣತಂತ್ರ ರೂಪಿಸಿದ್ದವು. ಬಿಜೆಪಿಯ ರಾಷ್ಟ್ರೀಯ ನಾಯಕ ಅಮಿತ್ ಶಾ ಅವರು ಸಹ ಕರ್ನಾಟಕದ ಈ ಭಾಗದಲ್ಲಿ ನಡೆದಿದ್ದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪ್ರಬಲವಾಗಿದ್ದರಿಂದಾಗಿ ಸಿ.ಎನ್ ಮಂಜುನಾಥ ಅವರ ಗೆಲುವು ಸುಲಭವಾಗಿತ್ತು. ಇದೀಗ ಈ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಚುನಾವಣೆಯ ಪ್ರಚಾರದಿಂದ ಅಂತರ ಕಾಪಾಡಿಕೊಂಡರೆ, ಡಿ.ಕೆ ಶಿವಕುಮಾರ್ ಅವರು ಏಕಾಂಗಿಯಾಗಲಿದ್ದಾರೆ. ಆದರೆ, ಈ ಸಾಧ್ಯತೆ ವಿರಳ. ಆದರೆ, ಈ ಪ್ರಕರಣವು ರಾಜ್ಯದ ಉಪ ಚುನಾವಣೆಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಮಾತ್ರ ದಟ್ಟವಾಗಿದೆ.
ಕರ್ನಾಟಕದ ಯಾವ ಕ್ಷೇತ್ರಗಳಲ್ಲಿ ಉಪ ಚುನಾವಣೆ
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಇದರಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ಹೈವೋಲ್ಟೇಜ್ ಕಣವಾಗಿದ್ದರೆ. ಉತ್ತರ ಕರ್ನಾಟಕದ ಶಿಗ್ಗಾಂವಿ ಹಾಗೂ ಸಂಡೂರ್ ವಿಧಾನಸಭಾ ಕ್ಷೇತ್ರದಲ್ಲೂ ಉಪ ಚುನಾವಣೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಶಾಸಕ ಈ ತುಕರಾಮ್ ಅವರು ಸಹ ಲೋಕಸಭೆ ಕಣಕ್ಕೆ ಇಳಿದು ಸಂಸತ್ ಪ್ರವೇಶಿಸಿದ್ದಾರೆ. ಹೀಗಾಗಿ, ಮೂರು ನಾಯಕರು ಪ್ರತಿನಿಧಿಸುತ್ತಿದ್ದ ವಿಧಾನಸಭಾ ಕ್ಷೇತ್ರಗಳು ತೆರವಾಗಿದ್ದು, ಈ ಕ್ಷೇತ್ರಗಳಲ್ಲಿ ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications