Siddaramaiah: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ- ಬಿಜೆಪಿ ಒತ್ತಾಯ
ಬೆಂಗಳೂರು ಸೆಪ್ಟೆಂಬರ್ 24: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯವಾಗಿದ್ದು ಇಂದು ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ಕೊಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದೆ.
ಹೌದು... ಸೆಪ್ಟೆಂಬರ್ 12ರಂದು ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾ. ಎಂ. ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿಸಿರಿದ್ದರು. ಸುದೀರ್ಘ ವಾದ-ವಿವಾದ ಆಲಿಸಿದ ಹೈಕೋರ್ಟ್‌ನ ನ್ಯಾಯಧೀಶರಾದ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ. ಇದಾದ ಬಳಿಕ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದೆ.

''ಇದು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ತಾನಕ್ಕೆ ರಾಜೀನಾಮೆ ನೀಡಲಿ'' ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ.
ಜಯತೆ, ಜಯತೆ, ಸತ್ಯಮೇವ ಜಯತೆ!!
— BJP Karnataka (@BJP4Karnataka) September 24, 2024
ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ @siddaramaiah ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ
ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು…
''ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ ''ಎಂದು ಬಿಜೆಪಿ ಟ್ವೀಟ್ ಮಾಡಿದೆ.
''ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ. ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು'' ಎಂದು ಬಿಜೆಪಿ ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಹಲವು ಹಿರಿಯ ವಕೀಲರು ಸಿದ್ದರಾಮಯ್ಯ ಪರ ವಾದ ಮಂಡಿಸಿದ್ದರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಅಲ್ಲದೇ ದೂರುದಾರರು ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಪರ ವಕೀಲರು ಸಹ ತಮ್ಮ ವಾದ ಮಂಡಿಸಿದ್ದರು.
ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಹೈಕೋರ್ಟ್ ಅಸ್ತು ಎಂದ ಹಿನ್ನೆಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ನೀಡಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮುಡಾ ಹಗರಣ ಸಿಎಂ ವಿರುದ್ಧ ತೀರ್ಪು ಬಂದಿದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ಇದರಿಂದ ಗೊತ್ತಾಗಿದೆ. ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಲಯ ಒಪ್ಪಿಗೆ ನೀಡಿದೆ. ಸಾಮಾನ್ಯ ವ್ಯಕ್ತಿಗೂ ಒಂದೇ, ರಾಜಕೀಯ ವ್ಯಕ್ತಿಗೂ ಒಂದೇ. ಸಿದ್ಧರಾಮಯ್ಯನವರು ಅಧಿಕಾರದಿಂದ ದೂರ ಇರಬೇಕು. ನೈತಿಕ ಹೊಣೆ ಹೊರಬೇಕಾದ ಪರಿಸ್ಥಿತಿ ನಿರ್ಮಾಣವಾಗಬೇಕು' ಎಂದರು.
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ವಿಚಾರಣೆಗೆ ಒಳಗಾಗಬೇಕು. ಬಹಳ ದಿನಗಳಿಂದ ತಪ್ಪು ಮಾಡಿಯೇ ಇಲ್ಲ ಎಂದು ಸಿದ್ಧರಾಮಯ್ಯ ಹೇಳುತ್ತಿದ್ದರು. ಆದರೆ ನ್ಯಾಯಾಲಯದ ಆದೇಶಕ್ಕೆ ಬೆಲೆ ನೀಡಬೇಕು. ದೇವರಲ್ಲಿ ನಾನು ಪ್ರಾರ್ಥನೆ ಸಲ್ಲಿಸುತ್ತೇನೆ, ಆರೋಪ ಮುಕ್ತರಾಗಿ ಸಿದ್ದರಾಮಯ್ಯ ಅವರು ಬರಲಿ ಎಂದರು.












Click it and Unblock the Notifications