MUDA Scam: ಸಿದ್ದರಾಮಯ್ಯ ವಿರುದ್ಧ ತೀರ್ಪು, ಸುರ್ಜೇವಾಲ ಬೆಂಗಳೂರಿಗೆ

ಬೆಂಗಳೂರು, ಸೆಪ್ಟೆಂಬರ್ 24: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ. ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಇದರಿಂದಾಗಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ.

ಮಂಗಳವಾರ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಸಿದ್ದರಾಮಯ್ಯ ಅರ್ಜಿ ಬಗ್ಗೆ ತೀರ್ಪು ಪ್ರಕಟಿಸಿದೆ. ಸಿದ್ದರಾಮಯ್ಯ ಬೆಂಗಳೂರಿನಲ್ಲಿಯೇ ಇದ್ದು, ಸಚಿವರು, ಕಾನೂನು ತಜ್ಞರ ಜೊತೆ ಸರಣಿ ಸಭೆಗಳು ನಡೆಸುತ್ತಿದ್ದಾರೆ.

MUDA Scam Verdict Randeep Singh Surjewala To Visit Bengaluru

ಈಗಾಗಲೇ ಸಿದ್ದರಾಮಯ್ಯ, "ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ" ಎಂದು ಹೇಳಿದ್ದಾರೆ. ಈ ಬೆಳವಣಿಗೆ ಕುರಿತು ಶಾಸಕರ ಜೊತೆ ಚರ್ಚಿಸಲು ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ರಣದೀಪ್ ಸಿಂಗ್ ಸುರ್ಜೇವಾಲ ಆಗಮನ: ರಾಜ್ಯಪಾಲ ಥಾವರ್‌ಚಂದ ಗೆಹ್ಲೋಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಇದರಿಂದಾಗಿ ರಾಜಕೀಯ ಚಟುವಟಿಕೆ ಬಿರುಸಾಗಿದೆ.

ಈ ಹಿನ್ನಲೆಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲದೇ ಬುಧವಾರ ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿರುವುದರಿಂದ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ, "ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ, ತೀರ್ಮಾನ ಮಾಡಲಾಗುವುದು" ಎಂದು ಹೇಳಿದ್ದಾರೆ.

"ನಾನು ತಪ್ಪು ಮಾಡಿಲ್ಲ. 17ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಇಡೀ ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಖಂಡಿತಾ ನನಗೆ ಜಯ ಸಿಗಲಿದೆ" ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

"ಬಿಜೆಪಿಯವರನ್ನು ನಾವು ರಾಜಕೀಯವಾಗಿ ಎದುರಿಸುತ್ತೇವೆ. ಅವರು ಹೇಳಿದ ಮಾತ್ರಕ್ಕೆ ನಾನು ರಾಜೀನಾಮೆ ಏಕೆ ಕೊಡಬೇಕು?. ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೇಲೆ ಎಫ್‌ಐಆರ್ ಆಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ?. ಇದು ಅವರಿಗೆ ಅನ್ವಯವಾಗುವುದಿಲ್ಲವೇ?. ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿ ವಾದಕ್ಕೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನೆಂದು ಕೇಳಿ" ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+