ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಸ್ಟೋಟಕ ಹೇಳಿಕೆ ನೀಡಿದ ಹೆಚ್‌ ಡಿ ಕುಮಾರಸ್ವಾಮಿ

ಮೈಸೂರು, ಜುಲೈ 05: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಡಾ ಹಗರಣ ರಾಜ್ಯದಲ್ಲಿ ಭಾರೀ ಚರ್ಚೆಗ ಗ್ರಾಸವಾಗಿದ್ದು, ಇದರಲ್ಲಿ ಸಿಎಂ ಕುಟುಂಬದ ಹೆಸರೂ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪದೆಪದೇ ಇದಕ್ಕೆ ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.

Muda Scandal Exposed By Those Who Had An Eye On The Cm Chair Says Hd Kumaraswamy

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಸಿಡಿ ಫ್ಯಾಕ್ಟರಿ ಕ್ಲೋಸ್ ಆಗಿದೆ, ಮುಡಾ ವಿಚಾರ ಶುರುವಾಗಿದೆ. ಈ ಬಗ್ಗೆ ನನಗೆ ಮಾಹಿತಿ ಇದೆ ಎಂದು ಸ್ಟೋಟಕ ಹೇಳಿಕೆಯನ್ನ ಕುಮಾರಸ್ವಾಮಿ ಅವರು ನೀಡಿದ್ದಾರೆ.

ಮುಖ್ಯಮಂತ್ರಿ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಸಿಎಂ ಪತ್ನಿಗೆ 14 ಸೈಟ್ ಹಂಚಿಕೆ ವಿಚಾರವಾಗಿ ಮಾತನಾಡಿ, ಕಾನೂನು ಸಲಹೆಗಾರ ಈಗ ಎಂಎಲ್ ಎ ಆಗಿದ್ದಾರೆ.ಅವರು ಸಿಎಂ ಪರ ಸುಧೀರ್ಘವಾಗಿ ಮಾತನಾಡಿದ್ದಾರೆ, 62 ಕೋಟಿ ರೂ ಪರಿಹಾರ ನೀಡಬೇಕು ಎಂದಿದ್ದಾರೆ. ಆದರೆ ಹಲವು ಅಭಿವೃದ್ಧಿ‌ ಹೆಸರಿನಲ್ಲಿ ಭೂ ಸ್ವಾಧೀನವಾಗಿದೆ. ಆ ರೈತರು ಇನ್ನೂ ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರಿಗೆ ರೇಟ್ ಫಿಕ್ಸ್ ಮಾಡುವಾಗ ಹೇಗೆ ಮಾಡುತ್ತೀರಾ ? ರೈತರನ್ನ ಬೀದಿಗೆ ನಿಲ್ಲಿಸಿದ್ದೀರಿ ಇದು ಸರೀನಾ ?ನಿಮ್ಮ ಪತ್ನಿಯ ಹಣ ಕೇಳುತ್ತಾ ಇದ್ದೀರಲ್ಲಾ ಆ‌ ದೇವರು ಮೆಚ್ಚುತ್ತಾನಾ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇಂದು ಮಂಡ್ಯದಲ್ಲಿ ಜನತಾ ದರ್ಶನ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಜನತಾ ದರ್ಶನದ ಬಗ್ಗೆನೇ ಸಚಿವ ಸಂಪುಟದ ಸಭೆ ಕರೆದು ಚರ್ಚೆ ಮಾಡಿದ್ದಾರೆ. ನೀವು ಅಧಿಕಾರಿಗಳನ್ನು ದೂರು ಇಡಬಹುದು.ಆದರೆ ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಸಂಸದರು ಈ ರೀತಿ ಸಭೆ ಮಾಡಿದ್ದಾಗ ಏನು ಮಾಡುತ್ತಿದ್ದೀರಿ ? ಎಂದು ಪ್ರಶ್ನಿಸಿದರು.

ಚುನಾವಣೆಗೆ ಬಂದು ಜನ ಸ್ಪಂದನ ಕಾರ್ಯಕ್ರಮ ಮಾಡಿದಾಗ ಎಲ್ಲಿ ಹೋಗಿದ್ರಿ ? ಈಗ ಜನತಾ ದರ್ಶನ ತಪ್ಪಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+