ಕಾರು ಪಲ್ಟಿಯಾಗಿ ಮುಧೋಳ ಗವಿಮಠದ ಮೃತ್ಯುಂಜಯ ಸ್ವಾಮೀಜಿ ಸಾವು
ಬಾಗಲಕೋಟೆ, ಜೂನ್ 06 : ಮುಧೋಳ ಗವಿಮಠದ ಮೃತ್ಯುಂಜಯ ಸ್ವಾಮೀಜಿ ಅವರು ಇದ್ದ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಪಲ್ಟಿಯಾಗಿದ್ದು, ಮೃತ್ಯುಂಜಯ ಸ್ವಾಮಿ ಸಾವನ್ನಪ್ಪಿದ್ದಾರೆ.
ಮೃತ್ಯುಂಜಯ ಸ್ವಾಮೀಜಿಗಳು ಹುಬ್ಬಳ್ಳಿಯಿಂದ ಮುಧೋಳದ ಗವಿಮಠಕ್ಕೆ ತೆರಳುವಾಗ ಚಾಲಕನ ನಿರ್ಲಕ್ಷ್ಯದಿಂದ ಕಾರು ಎರಡು ಬಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ವಾಮೀಜಿ ಅವರನ್ನು ಚಿಕಿತ್ಸೆಗಾಗಿ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ಕೊನೆಯುಸಿರೆಳೆದರು.

ಚಾಲಕ ಅನ್ವೇಶ್ ಗೆ ಕೂಡ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.












Click it and Unblock the Notifications